ನೆಲಮಂಗಲ: ಎನ್‌ಡಿಎ ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗೂಡಿ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿ ಎ.ಪಿ.ರಂಗನಾಥರನ್ನು ಗೆಲ್ಲಿಸಲು ಸಹಕರಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಇ.ಕೃಷ್ಣಪ್ಪ ತಿಳಿಸಿದರು

ನೆಲಮಂಗಲ: ಎನ್‌ಡಿಎ ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗೂಡಿ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿ ಎ.ಪಿ.ರಂಗನಾಥರನ್ನು ಗೆಲ್ಲಿಸಲು ಸಹಕರಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಇ.ಕೃಷ್ಣಪ್ಪ ತಿಳಿಸಿದರು.

ಎನ್‌ಡಿಎ ಪಕ್ಷದ ಅಭ್ಯರ್ಥಿ ಪರ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಮಹತ್ತವಾದುದು. ಅಂತಹ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಶ್ರಮಿಸುವ ಅಭ್ಯರ್ಥಿಗೆ ಮತದಾನ ಮಾಡಿ ಗೆಲ್ಲಿಸುವುದು ಪ್ರತಿ ಶಿಕ್ಷಕರ ಕರ್ತವ್ಯ. ಎನ್‌ಡಿಎ ಕಾರ್ಯಕರ್ತರು ಹಾಗೂ ಮುಖಂಡರು ಶಿಕ್ಷಕರ ಮನೆಬಾಗಿಲಿಗೆ ತೆರಳಿ ಶಿಕ್ಷಕರ ಮನವೊಲಿಸುವ ಕಾರ್ಯ ಮಾಡಬೇಕಿದೆ. ಪಂಚಾಯತಿ ಮಟ್ಟದಲ್ಲಿ ಶಿಕ್ಷಕರನ್ನು ಪಟ್ಟಿ ಮಾಡಿಕೊಂಡು ಶಿಕ್ಷಕರಿಗೆ ವಾಸ್ತವ ಅರ್ಥ ಮಾಡಿಸಿ ಮತಯಾಚನೆ ಮಾಡಬೇಕಿದೆ. ಪರಿಷತ್‌ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸಿ ರಾಜ್ಯದಲ್ಲಿ ಎನ್‌ಡಿಎ ಪಕ್ಷವನ್ನು ಬಲ ಪಡಿಸಬೇಕಿದೆ ಎಂದು ಹೇಳಿದರು.

ಮಾಜಿ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಮಾತನಾಡಿ, ಅ.23ರಂದು ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ 203 ತ್ಯಾಮಗೊಂಡ್ಲು, ಸೋಂಪುರ ಹೋಬಳಿಯ 203 ಶಿಕ್ಷಕರ ಮತದಾರರು ಸೋಂಪುರ ಮಾದರಿ ಶಾಲೆಯಲ್ಲಿ ಮತದಾನ ನಡೆಯಲಿದೆ. ನಗರ ಹಾಗೂ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ 442 ಶಿಕ್ಷಕ ಮತದಾರರು ತಾಲೂಕು ಕಚೇರಿಯಲ್ಲಿ ಮತದಾನ ಮಾಡಲಿದ್ದಾರೆ. ಜತೆಗೆ 258 ಮತಗಳು ಸೋಲೂರು ಬಳಿ ಕುದೂರಿನಲ್ಲಿ ಮತದಾನ ಮಾಡಲಿದ್ದಾರೆ. ಪ್ರತಿಯೊಬ್ಬರನ್ನು ಮತದಾರರನ್ನು ಮುಕ್ತವಾಗಿ ಬೇಟಿ ಮಾಡುವ ಕಾರ್ಯ ಮಾಡಬೇಕು. ಪಕ್ಷದ ಅಭ್ಯರ್ಥಿ ಎ.ಪಿ.ರಂಗನಾಥ್ ಅವರಿಗೆ ಹೆಚ್ಚು ಮತಗಳನ್ನು ನೀಡಿ ಜಯಶೀಲರಾಗಿ ಮಾಡಲು ಪ್ರತಿಯೊಬ್ಬರು ಸಹಕಾರ ನೀಡಬೇಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಪಂ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ, ಮಾಜಿ ಶಾಸಕ ಎಂ.ವಿ.ನಾಗರಾಜು, ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ, ವಿಶಾಲ್ ಶಾಲೆ ಸಂಸ್ಥಾಪಕ ಟಿ.ಕೆ.ನರಸೇಗೌಡ, ಮುಖಂಡ ಸಪ್ತಗಿರಿ ಶಂಕರ್‌ ನಾಯಕ್, ಜೆಡಿಎಸ್ ತಾಲೂಕು ಅಧ್ಯಕ್ಷ ಟಿ.ತಿಮ್ಮರಾಯಪ್ಪ, ಕಾಯಾಧ್ಯಕ್ಷ ಬೂದಿಹಾಲ ರಾಜು, ಪ್ರಧಾನ ಕಾರ್ಯದರ್ಶಿ ಸುರೇಶ್, ವಕ್ತಾರ ಕನಕರಾಜು, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಸಂಪತ್‌ ಬಾಬು,

ನಗರಸಭೆ ಸದಸ್ಯ ಸುನೀಲ್‌ ಮೂಡ್, ಅಂಜನಮೂರ್ತಿ, ಪುಷ್ಪಲತಾ ಮಾರೇಗೌಡ, ರಾಜಮ್ಮ ಪಿಳ್ಳಪ್ಪ, ರಾಮಮೂರ್ತಿ, ತಾಪಂ ಮಾಜಿ ಸದಸ್ಯ ರುದ್ರೇಶ್, ಪ್ರಕಾಶ್, ಮುಖಂಡ ಹ್ಯಾಡಾಳ್ ಹರ್ಷ, ಬೃಂಗೇಶ್, ಶಿವಕುಮಾರ್, ಮಂಜುನಾಥ್, ವಿಷ್ಣು, ಕೇಶವ್, ಸುಬ್ರಮಣಿ, ಉಮೇಶ್, ರಮೇಶ್, ರಾಜಮ್ಮ ಪ್ರಕಾಶ್, ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.

ಪೊಟೊ-13 ಕೆಎನ್‌ಎಲ್‌ಎಮ್‌1-

ನೆಲಮಂಗಲದಲ್ಲಿ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ ಅವರನ್ನು ಬೆಂಬಲಿಸಿ ಗೆಲ್ಲಿಸುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಇ.ಕೃಷ್ಣಪ್ಪ ಮಾತನಾಡಿದರು. ಜಿಪಂ ಮಾಜಿ ಅಧ್ಯಕ್ಷ ಜಿ.ಮರಿಸ್ವಾಮಿ, ಮಾಜಿ ಶಾಸಕ ಎಂ.ವಿ.ನಾಗರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಇತರರಿದ್ದರು.