ಸಾರಾಂಶ
ಶಿಗ್ಗಾಂವಿಯಲ್ಲಿ ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಸೋಮವಾರದೊಳಗೆ ಹೆಸರು ಫೈನಲ್ ಆಗಲಿದೆ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಹಾವೇರಿ: ಶಿಗ್ಗಾಂವಿಯಲ್ಲಿ ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಸೋಮವಾರದೊಳಗೆ ಹೆಸರು ಫೈನಲ್ ಆಗಲಿದೆ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಕಾರ್ಯಕರ್ತರ ಅಭಿಪ್ರಾಯ, ನಾಯಕರ ಶಿಫಾರಸು, ಶಾಸಕರ ಅಭಿಪ್ರಾಯ ಹೈಕಮಾಂಡ್‌ಗೆ ಕಳಿಸಲಾಗಿದೆ. ಕಾಂಗ್ರೆಸ್ ತನ್ನ ತತ್ವ ಸಿದ್ದಾಂತಗಳನ್ನು ಎಂದಿಗೂ ಬಿಡುವುದಿಲ್ಲ. ಮುಸ್ಲಿಂ ಸಮುದಾಯದ ಇಬ್ಬರು ಆಕಾಂಕ್ಷಿಗಳನ್ನು ಕುಳಿಸಿ ಮಾತಾಡಿ ಅಭ್ಯರ್ಥಿ ಮಾಡುತ್ತೇವೆ. ಶಿಗ್ಗಾಂವಿಯಲ್ಲಿ ಟಿಕೆಟ್ ಬದಲಾವಣೆ ಆಗುತ್ತದೆ ಎಂದು ಹೇಳಲಾಗುವುದಿಲ್ಲ.ಕಾಂಗ್ರೆಸ್‌ನಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಯುವುದಿಲ್ಲ. ರಾಜಕಾರಣದಲ್ಲಿ ಸಾಫ್ಟ್, ಹಾಡ್೯ ಎಂಬುದಿಲ್ಲ ಎಂದು ಹೇಳಿದರು. ಮುಡಾ ಪ್ರಕರಣದಲ್ಲಾದ ರಾಜಕಾರಣ ಬಗ್ಗೆ ಜನರು ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ. ಚುನಾವಣೆ ಘೋಷಣೆಗೂ ಇಡಿ ರೇಡ್‌ಗೂ ಏನು ಸಂಬಂಧ, ಚುನಾವಣೆ ಘೋಷಣೆ ಆಗುತ್ತಿದ್ದಂತೆ ಇ ಡಿ ಕ್ರಿಯಾಶೀಲವಾಯ್ತಾ ಎಂದು ಪ್ರಶ್ನಿಸಿದ ಅವರು, ಮುಡಾ ಪ್ರಕರಣದಲ್ಲಿ ಯಾವುದಾದರೂ ಹಣಕಾಸು ಬದಲಾವಣೆ ಆಗಿದೆಯಾ, ಯಾರಾದ್ರು ಆಸ್ತಿ ತಗೊಂಡು ಓಡಿ ಹೋಗಿದ್ದಾರಾ, ರಾಜಕೀಯ ದುರುದ್ದೇಶ, ಕುತಂತ್ರ ಪ್ರಜಾಪ್ರಭುತ್ವಕ್ಕೆ ಸೂಕ್ತವಲ್ಲ. ಇಡಿಯನ್ನು ರಾಜಕೀಯ ದುರುದ್ದೇಶಕ್ಕೆ ಕೇಂದ್ರ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.