ಸಾರಾಂಶ
ಮದ್ದೂರಿನಲ್ಲಿ ನಡೆದ ವಿಶ್ವ ಪೌಷ್ಟಿಕ ದಿನಾಚರಣೆಯನ್ನು ನ್ಯಾಯಾಧೀಶರಾದ ಎಂ.ಎಸ್.ಹರಿಣಿ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಮದ್ದೂರು
ಸತ್ವ ಭರಿತ ಮತ್ತು ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯಿಂದ ಅಪೌಷ್ಟಿಕತೆ ತೊಡೆದು ಹಾಕಲು ಸಾಧ್ಯ ಎಂದು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ಎಂ.ಎಸ್. ಹರಿಣಿ ಹೇಳಿದರು.ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಡೆದ ವಿಶ್ವ ಪೌಷ್ಟಿಕ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಪೌಷ್ಟಿಕ ಆಹಾರವಿಲ್ಲದೆ ಜಗತ್ತಿನಲ್ಲಿ ಲಕ್ಷಾಂತರ ಮಂದಿ ಸಾವನಪುತ್ತಿದ್ದಾರೆ. ಈ ಕಾರಣಕ್ಕೆ ಪ್ರತಿಯೊಬ್ಬ ಮನುಷ್ಯನಿಗೂ ನಿತ್ಯ ಪೌಷ್ಟಿಕ ಆಹಾರ ಲಭಿಸಬೇಕು ಎಂಬ ಉದ್ದೇಶದಿಂದ ಸರ್ಕಾರ ಈ ದಿನವನ್ನು ಪೌಷ್ಟಿಕ ದಿನವೆಂದು ಆಚರಿಸಲಾಗುತ್ತಿದೆ ಎಂದರು.ಈ ಹಿಂದೆ ಮನುಷ್ಯ ಹೊಟ್ಟೆಪಾಡಿಗಾಗಿ ದುಡಿಯುತ್ತಿದ್ದನು. ಈಗ ಹೊಟ್ಟೆ ಬಟ್ಟೆ ಕೊರತೆ ನೀಗಿ ಉತ್ತಮ ಆರೋಗ್ಯಕ್ಕಾಗಿ ಶ್ರಮಿಸುವಂತಹ ಪರಿಸ್ಥಿತಿ ನಿರ್ಮಾಣ. ಪ್ರಸ್ತುತ ದಿನಗಳಲ್ಲಿ ಆರೋಗ್ಯವಂತನೇ ನಿಜವಾದ ಶ್ರೀಮಂತ. ನಾವುಗಳು ಪೌಷ್ಟಿಕ ಆಹಾರಗಳಿಗೆ ಹೊಂದಿಕೊಂಡು ರೋಗ ರುಜಿನಗಳನ್ನು ಎದುರಿಸಬೇಕು ಎಂದು ತಿಳಿಸಿದರು. ದೇಶದಲ್ಲಿ ಶೇ.60ರಷ್ಟು ಮಹಿಳೆಯರು ಅನೀಮಿಯ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಸಮತೋಲನ ಆಹಾರ ಸೇವಿಸದಿರುವುದೇ ಕಾರಣ ಎಂದು ಎಚ್ಚರಿಸಿದರು.
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಇಲಾಖೆ ಸಹ ಶಿಕ್ಷಣಾಧಿಕಾರಿ ಮಣಿ, ತಾಲೂಕು ಕಚೇರಿ ಶಿರಸ್ತೇದಾರ್ ಕೆ.ಎನ್. ಉಮೇಶ್, ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಣ್ಣ. ಪ್ರಧಾನ ಕಾರ್ಯದರ್ಶಿ ಎಂ.ಜೆ.ಸುಮಂತ್, ಶಿಶು ಅಭಿವೃದ್ಧಿ ಇಲಾಖೆ ಹಿರಿಯ ಮೇಲ್ವಿಚಾರಕಿ ಸುಜಾತ, ರಾಜೇಶ್ವರಿ, ಜಯಲಕ್ಷ್ಮಿ, ಉಮಾ, ನೇತ್ರ, ಪೋಷಣ್ ಅಭಿಯಾನ ಸಂಯೋಜಕ ಬಿ. ಎಂ. ಶ್ರೀಧರ್ ಮತ್ತಿತರರು ಇದ್ದರು.