ಕೆಂಪಕ್ಕಿ ಅನ್ನ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ
KannadaprabhaNewsNetwork | Published : Oct 22 2023, 01:01 AM IST
ಕೆಂಪಕ್ಕಿ ಅನ್ನ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ
ಸಾರಾಂಶ
ಕನ್ನಡಪ್ರಭ ವಾರ್ತೆ ರಾಣಿಬೆನ್ನೂರುತಾಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಹಾನಗಲ್ಲ ತಾಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದಲ್ಲಿ ಕೆಂಪು ಅಕ್ಕಿ ಪೌಷ್ಟಿಕ ಮಹತ್ವ ಕುರಿತು ತರಬೇತಿ ಕಾರ್ಯಕ್ರಮ ಜರುಗಿತು.
ಕನ್ನಡಪ್ರಭ ವಾರ್ತೆ ರಾಣಿಬೆನ್ನೂರು ತಾಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಹಾನಗಲ್ಲ ತಾಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದಲ್ಲಿ ಕೆಂಪು ಅಕ್ಕಿ ಪೌಷ್ಟಿಕ ಮಹತ್ವ ಕುರಿತು ತರಬೇತಿ ಕಾರ್ಯಕ್ರಮ ಜರುಗಿತು. ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿ ವಿದ್ಯಾ ಸಂಗಣ್ಣವರ ಮಾತನಾಡಿ, ಕೆಂಪು ಅಕ್ಕಿಯಲ್ಲಿ ಪೌಷ್ಟಿಕಾಂಶಗಳು ಹೇರಳವಾಗಿದ್ದು, ಪೋಷಕಾಂಶಗಳ ಶಕ್ತಿ ಕೇಂದ್ರವಾಗಿದೆ.ಅದರಲ್ಲಿ ಉತ್ಕರ್ಷಣ ನಿರೋಧಕಗಳು, ನಾರಿನಾಂಶ, ಜೀವಸತ್ವಗಳು ಹಾಗೂ ಖನಿಜಗಳಿಂದ ಸಮೃದ್ಧವಾಗಿದೆ.ಅಕ್ಕಿಯಲ್ಲಿ ಸುಮಾರು 40,000ಕ್ಕೂ ಹೆಚ್ಚು ತಳಿಗಳಿದ್ದು ಆ ಪೈಕಿ ಕೆಂಪು ಅಕ್ಕಿಯೂ ಒಂದಾಗಿದೆ.ಬಿಳಿ ಅಕ್ಕಿಗೆ ಹೋಲಿಸಿದರೆ,ಕೆಂಪು ಅಕ್ಕಿ ಹೆಚ್ಚಿನ ಪೌಷ್ಟಿಕಾಂಶ ಹೊಂದಿರುವುದರಿಂದ ಅದರ ಬಳಕೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾಗಿದೆ.ಇದು ರಕ್ತದೊತ್ತಡ ಕಡಿಮೆ ಮಾಡುತ್ತದೆ ಹಾಗೂ ಮಧುಮೇಹವನ್ನು ತಡೆಗಟ್ಟುತ್ತದೆ.ದೃಷ್ಟಿ ಸುಧಾರಿಸುವ ಮತ್ತು ಕ್ಯಾನ್ಸರ್ ಕೋಶ ಕಡಿಮೆ ಮಾಡುವ ಸಾಮರ್ಥ್ಯ ಹೊಂದಿದೆ.ಹೀಗಾಗಿ ಕೆಂಪಕ್ಕಿ ಸೇವನೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದರು. ಕೇಂದ್ರದ ನಿಕ್ರಾ ಯೋಜನೆಯ ಹಿರಿಯ ಸಂಶೋಧಕ ಡಾ.ಲಕ್ಷ್ಮೀ ಪಾಟೀಲ, ಶಿವಾಜಿ ಸಾಳುಂಕೆ, ಗದಿಗೆಪ್ಪಗೌಡ ಅರಳೇಶ್ವರ, ಮೃತ್ಯುಂಜಯ ಲೂತಿಮಠ, ಸಂಗೀತಾ ಅಪ್ಪಾಜಿ, ಅನಸೂಯ ದೊಡ್ಡಮನಿ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ರೈತ, ರೈತ ಮಹಿಳೆಯರು ಭಾಗವಹಿಸಿದ್ದರು.