ಓಕ್‌ವುಡ್ ಇಂಡಿಯನ್ ಶಾಲೆ ಮತ್ತುಯುರೋ ಕಿಡ್ಸ್ ಶಾಲೆಯಲ್ಲಿ 2025ನೇ ಸಾಲಿನ ವಾರ್ಷಿಕೋತ್ಸವ - ‘ಎಕೋಸ್ ಆಫ್ ಎರ್ಥ್’ ವಿಜೃಂಭಣೆಯಿಂದ ಆಚರಿಸಲಾಯಿತು.
ಕುಂದಾಪುರ: ಇಲ್ಲಿನ ಓಕ್‌ವುಡ್ ಇಂಡಿಯನ್ ಶಾಲೆ ಮತ್ತುಯುರೋ ಕಿಡ್ಸ್ ಶಾಲೆಯಲ್ಲಿ 2025ನೇ ಸಾಲಿನ ವಾರ್ಷಿಕೋತ್ಸವ - ‘ಎಕೋಸ್ ಆಫ್ ಎರ್ಥ್’ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಆವರಣದಲ್ಲಿ ನಡೆದ ಈ ಸಮಾರಂಭದಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಮೌಲ್ಯಗಳನ್ನು ಪ್ರತಿಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಭಾಗವಹಿಸಿ, ದೀಪ ಬೆಳಗಿಸುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಾಂಸ್ಕೃತಿಕ ಚಟುವಟಿಕೆಗಳು ಅತ್ಯಂತ ಅಗತ್ಯವೆಂದು ತಿಳಿಸಿದರು. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಆತ್ಮವಿಶ್ವಾಸ, ಶಿಸ್ತು ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುತ್ತವೆ ಎಂದರು.ಶಾಲೆಯ ಪ್ರಾಂಶುಪಾಲರು ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರಲು ವಾರ್ಷಿಕೋತ್ಸವ ಮಹತ್ವದ ವೇದಿಕೆಯಾಗಿದೆ ಎಂದು ಹೇಳಿದರು. ವಿವಿಧ ನೃತ್ಯ, ಸಂಗೀತ, ನಾಟಕ ಹಾಗೂ ಸಾಂಸ್ಕೃತಿಕ ಪ್ರದರ್ಶನಗಳು ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದವು. ಈ ಸಂದರ್ಭದಲ್ಲಿ ಪೋರ್ಟ್ ಗೇಟ್ ಎಜ್ಯಕೇಶನ್ ಟ್ರಸ್ಟ್‌ನ ಜಂಟಿ ಆಡಳಿತ ವಿಸ್ವಸ್ಥರಾದ ನೀತಾ ಶೆಟ್ಟಿ ಮತ್ತು ಅಭಿನಂದನ ಶೆಟ್ಟಿ, ಸ್ಥಾಪಕ ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಅಂಬುಜ ಶೆಟ್ಟಿ, ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಪ್ರತಿಭೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.