ಸಾರಾಂಶ
ಕನ್ನಡಪ್ರಭ ವಾರ್ತೆ ಮೂಲ್ಕಿರಾಜ್ಯ ಸರ್ಕಾರದ ಮಾಲಿನ್ಯ ನಿಯಂತ್ರಣ ಮಂಡಳಿಯ ಸುತ್ತೋಲೆಯನ್ವಯ ಪರಿಸರಕ್ಕೆ ಹಾನಿಯಾಗದಂತೆ ಗಣೇಶೋತ್ಸವ ಆಚರಿಸಲು ವಿವಿಧ ಸೂಚನೆಗಳನ್ನು ನೀಡಲಾಗಿದೆ.ರಾಜ್ಯ ವ್ಯಾಪ್ತಿಯೊಳಗಿನ ಜಲ ಮೂಲಗಳ ನೀರು ಮಾಲಿನ್ಯಗೊಳ್ಳದಂತೆ ಸಂರಕ್ಷಿಸುವ ಉದ್ದೇಶದಿಂದ ಭಾರ ಲೋಹ ಮಿಶ್ರಿತ ರಾಸಾಯನಿಕ ಯುಕ್ತ ಬಣ್ಣದಿಂದ ಅಲಂಕೃತಗೊಂಡಂತಹ, ಪ್ಲಾಸ್ಟರ್ ಆಫ್ ಪ್ಯಾರೀಸ್ ನಿಂದ ತಯಾರಿಸಿದ/ಬಣ್ಣ ಲೇಪಿತ ಗಣೇಶ ವಿಗ್ರಹಗಳು, ರಾಸಾಯನಿಕಯುಕ್ತ ಬಣ್ಣದಿಂದ ಅಲಕೃಂತಗೊಂಡಂತಹ ವಿಗ್ರಹಗಳ ಉತ್ಪಾದನೆ, ಮಾರಾಟ, ವಿಸರ್ಜನೆಯನ್ನು ರಾಜ್ಯಾದಾದ್ಯಂತ ಸರ್ಕಾರ ಸಂಪೂರ್ಣವಾಗಿ ನಿಷೇಧಿಸಿದೆ.ಮೂಲ್ಕಿ ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂತಹ ವಿಗ್ರಹಗಳ ಉತ್ಪಾದನೆ, ಮಾರಾಟ ಹಾಗೂ ಅವುಗಳನ್ನು ನದಿ, ತೊರೆ, ಹಳ್ಳ, ಕೆರೆ, ಬಾವಿ ಮುಂತಾದ ಯಾವುದೇ ನೀರಿನ ಮೂಲಗಳಲ್ಲಿ ವಿಸರ್ಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್ ಗಳಲ್ಲಿ/ ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ವ್ಯವಸ್ಥೆ ಮಾಡಲು ಕ್ರಮವಹಿಸಲು ಸೂಚಿಸಲಾಗಿದೆ.ಗಣೇಶ ಉತ್ಸವ ಆಚರಿಸುವ ಸಾರ್ವಜನಿಕರು ಹಾಗೂ ಸ್ಥಳೀಯ ಸಮಿತಿಗಳು ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವುದು. ನಗರಗಳಲ್ಲಿ ಅನಧಿಕೃತ ಪ್ಲೆಕ್ಸ್ ಪ್ಲಾಸ್ಟಿಕ್, ಬ್ಯಾನರ್‌ಗಳ ಹಾವಳಿ ಕುರಿತಂತೆ ಪಿ.ಒ.ಪಿ ಗೌರಿ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟ ಮಾಡುವವರ ಮಾಹಿತಿ ನೀಡಲು ಕಚೇರಿ ದೂರವಾಣಿ ಸಂಖ್ಯೆ 0824-2290561 ಗೆ ಸಾರ್ವಜಿನಕರು ಮಾಹಿತಿ ನೀಡಬಹುದು.ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಬಳಸದಂತೆ ವಿಗ್ರಹ ಉತ್ಪಾದಕರು ಹಾಗೂ ಮಾರಾಟಗಾರರು ನ.ಪಂ. ಜೊತೆ ಸಹಕರಿಸುವಂತೆ ಮುಖ್ಯಾಧಿಕಾರಿ ಮಧುಕರ್ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.