ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಸಬಲೀಕರಣ: ಶಾಸಕ ಜಿಎಸ್ಪಿ

| Published : May 04 2025, 01:34 AM IST

ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಸಬಲೀಕರಣ: ಶಾಸಕ ಜಿಎಸ್ಪಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಧ್ಯಮ ಹಾಗೂ ಬಡ ಕುಟುಂಬಗಳು ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗುತ್ತಿವೆ ಎಂದುರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ರೋಣ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಧ್ಯಮ ಹಾಗೂ ಬಡ ಕುಟುಂಬಗಳು ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗುತ್ತಿವೆ ಎಂದುರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಅವರು ಪಟ್ಟಣದ ತಾಲೂಕು ಪಂಚಾಯಿತಿ ಸಭಾಭಾವನದಲ್ಲಿ ಸೋಮವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟಿಸಿ ಮಾತನಾಡಿದರು.ಸರ್ಕಾರ ಬಡವರಿಗಾಗಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಮತ್ತು ಮೇಲ್ವಿಚಾರಣೆ ಮಾಡಲು ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ರಚಿಸಲಾಗಿದೆ. ಇದಕ್ಕಾಗಿ ಸುಸಜ್ಜಿತವಾದ ಕಚೇರಿ ಆರಂಭಿಸಿದ್ದು ಸಾರ್ವಜನಿಕರು ಇದರ

ಸದುಪಯೋಗ ಮಾಡಿಕೊಳ್ಳಬೇಕು ಎಂದರು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಹೊಸ ಕ್ರಾಂತಿ ಪ್ರಾರಂಭವಾಗಿದೆ. ಬೇರೆ ಬೇರೆ ರಾಜ್ಯದವರು ಕೂಡ ಇಂದು ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಅಳವಡಿಸಿಕೊಳ್ಳುತ್ತಿವೆ. ಇದು ರಾಜ್ಯದಲ್ಲಿ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ

ಉಪಯುಕ್ತತೆ ಮತ್ತು ಮಹತ್ವವನ್ನು ತಿಳಿಸುತ್ತಿದೆ. ಇದು ಮತಕ್ಷೇತ್ರದ ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಮೇಲೇತ್ತಲು ಸಹಕಾರಿಯಾಗಿವೆ ಎಂದರು.

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ ಜಿ. ಪಾಟೀಲ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಾನವ ಮೂಲಭೂತ ಹಕ್ಕುಗಳನ್ನಾಗಿ ಮಾಡುವ ಧ್ವನಿಯು ದೇಶದಲ್ಲೆಡೆ ಹರಡಬೇಕಾಗಿದೆ. ಗ್ರಾಮದ ಕಟ್ಟಕಡೆಯ ವ್ಯಕ್ತಿಯನ್ನು ಆರ್ಥಿಕ ಸಬಲರನ್ನಾಗಿ ಮಾಡಿಸಿ ಸ್ವಾವಲಂಬಿ ಹಾಗೂ ಸುಧಾರಿತ ಜೀವನ ನಡೆಸುವಂತೆ ಮಾಡುವುದು ಪಂಚ ಗ್ಯಾರಂಟಿ ಯೋಜನೆಯ ಉದ್ದೇಶವಾಗಿದೆ. ರೋಣ ವಿಧಾನಸಭಾ ಕ್ಷೇತ್ರ ಹಾಗೂ ರೋಣ ತಾಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿ.ಆರ್. ಗುಡಿಸಾಗರ, ಪುರಸಭೆ ಅಧ್ಯಕ್ಷೆ ಗೀತಾ ಮಾಡಲಗೇರಿ, ಉಪಾಧ್ಯಕ್ಷ ದುರಗಪ್ಪ ಹಿರೇಮನಿ, ರೋಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಣ್ಣ ಶೆಟ್ಟರ, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಬಸವರಾಜ ನವಲಗುಂದ, ಬಸವರಾಜ ಜಗ್ಗಲ, ಯೂಸೂಫ ಇಟಗಿ, ಯಚ್ಚರಗೌಡ ಗೋವಿಂದಗೌಡ್ರ, ಎಚ್.ಎಸ್. ಸೊಂಪುರ, ವಿ.ಬಿ. ಸೋಮನಕಟ್ಟಿಮಠ, ಬಸವರಾಜ ತಳವಾರ, ಶಫೀಕ ಮೂಗನೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.