ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಅಯೋಮಯ-ಬಸವರಾಜ ಬೊಮ್ಮಾಯಿ

| Published : Mar 22 2024, 01:03 AM IST

ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಅಯೋಮಯ-ಬಸವರಾಜ ಬೊಮ್ಮಾಯಿ
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ ಅವಧಿಯಲ್ಲಿಯೇ ಕರ್ನಾಟಕ ಆರ್ಥಿಕವಾಗಿ ಸದೃಢ ಆಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಆರ್ಥಿಕ ಸ್ಥಿತಿ ಅಯೋಮಯ ಆಗಿದೆ. ಖಜಾನೆಯೂ ಖಾಲಿಯಾಗಿದೆ. ಬರಗಾಲದಲ್ಲಿಯೂ ಇವರು ಹಣ ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಣಿಬೆನ್ನೂರು: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಆರ್ಥಿಕ ಸ್ಥಿತಿ ಅಯೋಮಯ ಆಗಿದೆ. ಖಜಾನೆಯೂ ಖಾಲಿಯಾಗಿದೆ. ಬರಗಾಲದಲ್ಲಿಯೂ ಇವರು ಹಣ ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ಇಲ್ಲಿ ಪ್ರಚಾರ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ಅಂದರೆ ಭಾವನೆ, ಕಾಂಗ್ರೆಸ್ ಅಂದರೆ ಬದುಕು ಎಂಬ ಸಚಿವ ಎಚ್.ಕೆ. ಪಾಟೀಲ್ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಬೊಮ್ಮಾಯಿ, ಅವರು ಹೇಳಿದ್ದಕ್ಕೆಲ್ಲ ಉತ್ತರ ಕೊಡುವ ಅಗತ್ಯ ಇಲ್ಲ. ಜನರಿಗೆ ಗೊತ್ತಿದೆ ಯಾವುದು ಬದುಕು ಯಾವುದು ಭಾವನೆ ಅಂತ ಎಂದು ಹೇಳಿದರು.

ಕರ್ನಾಟಕ ಬಿಜೆಪಿ ಶುದ್ಧೀಕರಣ ಮಾಡುತ್ತೇನೆ ಎಂಬ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸದಾನಂದಗೌಡ ಅವರು ಹಿರಿಯರಿದ್ದಾರೆ. ಅವರು ಅವರದೇ ಆದ ನಿಲುವು ತೆಗೆದುಕೊಂಡಿದ್ದಾರೆ. ಅವರಿಗೆ ಪಕ್ಷದ ಮೇಲಿನ ಬದ್ಧತೆ ಹಾಗೂ ಅಭಿಮಾನ ಎಂದೂ ಕಡಿಮೆ ಆಗುವುದಿಲ್ಲ ಎಂದರು.

ತಂದೆ ಮಕ್ಕಳಿಂದ ಬಿಜೆಪಿ ಉಳಿಸುತ್ತೇವೆ ಎಂಬ ಈಶ್ವರಪ್ಪ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಶ್ವರಪ್ಪ ಭಾವನಾತ್ಮಕವಾಗಿ ಮಾತಾಡಿದ್ದಾರೆ. ಕೆಲವೇ ದಿನಗಳಲ್ಲಿ ನಮ್ಮ ವರಿಷ್ಠರು ಗಂಭೀರವಾಗಿ ಅವರೊಂದಿಗೆ ಮಾತನಾಡುತ್ತಾರೆ. ನಾಳೆ ಪಾರ್ಲಿಮೆಂಟರಿ ಬೋರ್ಡ್ ಮೀಟಿಂಗ್ ಇದೆ. ನಾಳೆ ಎರಡನೇ ಪಟ್ಟಿ ಬಿಡುಗಡೆ ಆಗಬಹುದು ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ ಮತ್ತಿತರರು ಇದ್ದರು.