ಕುಟುಂಬ ಆರ್ಥಿಕ ಚೈತನ್ಯ ಹೆಣ್ಮಕ್ಕಳಿಂದ ಸಾಧ್ಯ: ಶಾಸಕ ಜೆ.ಟಿ. ಪಾಟೀಲ

| Published : Feb 03 2024, 01:48 AM IST

ಸಾರಾಂಶ

ಬೀಳಗಿ: ಗುಣಮಟ್ಟದ ರೊಟ್ಟಿ, ಚಟ್ನಿ, ಉಪ್ಪಿನಕಾಯಿ ಸೇರಿದಂತೆ ಎಲ್ಲ ತಿಂಡಿ, ತಿನಿಸು ತಯಾರಿಸಿದರೆ ಮಾರುಕಟ್ಟೆ ಅವಕಾಶ ಹೆಚ್ಚಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ನಿಮ್ಮ ಸಹಾಯಕ್ಕೆ ಬರಬಹುದು ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು. ಪಟ್ಟಣದ ತಾಲೂಕು ಆಡಳಿತ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬಾಗಲಕೋಟೆ ಹಾಗೂ ಪಪಂ ಸಹಯೋಗದೊಂದಿಗೆ ಡೇ-ನಲ್ಮ್ ಯೋಜನೆಯ ಪಿಎಂ ಸ್ವ-ನಿಧಿ ಸೇ ಸಮೃದ್ಧಿ ಯೋಜನೆ ಅಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸ್ವ-ನಿಧಿ ಸೇ ಸಮೃದ್ಧಿ ಯೋಜನೆಯ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಬೀಳಗಿ

ಗುಣಮಟ್ಟದ ರೊಟ್ಟಿ, ಚಟ್ನಿ, ಉಪ್ಪಿನಕಾಯಿ ಸೇರಿದಂತೆ ಎಲ್ಲ ತಿಂಡಿ, ತಿನಿಸು ತಯಾರಿಸಿದರೆ ಮಾರುಕಟ್ಟೆ ಅವಕಾಶ ಹೆಚ್ಚಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ನಿಮ್ಮ ಸಹಾಯಕ್ಕೆ ಬರಬಹುದು ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು.

ಪಟ್ಟಣದ ತಾಲೂಕು ಆಡಳಿತ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬಾಗಲಕೋಟೆ ಹಾಗೂ ಪಪಂ ಸಹಯೋಗದೊಂದಿಗೆ ಡೇ-ನಲ್ಮ್ ಯೋಜನೆಯ ಪಿಎಂ, ಸ್ವ-ನಿಧಿ ಸೇ ಸಮೃದ್ಧಿ ಯೋಜನೆ ಅಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸ್ವ-ನಿಧಿ ಸೇ ಸಮೃದ್ಧಿ ಯೋಜನೆಯ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹಿಳೆಯರು ಜಗತ್ತಿನ ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಬಹುತೇಕ ಮಹಿಳೆಯರೇ ಫಲಾನುಭವಿಗಳಾಗಿದ್ದಾರೆ. ಎಲ್ಲ ಗ್ಯಾರಂಟಿಗಳಿಂದ ಪ್ರತಿಯೊಂದು ಮನೆಗೆ ಪ್ರತಿ ತಿಂಗಳು ₹ 5 ರಿಂದ 6 ಸಾವಿರ ಅಂದರೆ, ವರ್ಷಕ್ಕೆ ₹ 60 ಸಾವಿರ ಸಹಾಯ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಪೊಲೀಸರು ಮೊದಲು ಹೆಲ್ಮೆಟ್‌ ಇಲ್ಲದೆ ಬೈಕ್ ನಡೆಸುವುದು, ಮೂವರು ಪ್ರಯಾಣ ಮಾಡುವುದನ್ನು ಬಿಟ್ಟು, ಶಿಸ್ತಿನಿಂದ ಕಾರ್ಯನಿರ್ವಹಿಸಬೇಕು. ಪಟ್ಟಣದಲ್ಲಿ ಬೇಕಾಬಿಟ್ಟಿಯಾಗಿ ವಾಹನ ನಿಲ್ಲಿಸದಂತೆ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳಿಗೆ ಸೇವೆ ಸಲ್ಲಿಸಲು ಯಾವುದೋ ಒಂದು ಸ್ಥಳ ಶಾಶ್ವತವಲ್ಲ. ಮಾಡಿದ ಕಾರ್ಯಗಳು ಜನರ ಹೃದಯದಲ್ಲಿ ಉಳಿಯುವಂತಿರಬೇಕೆಂದು ಪೊಲೀಸ್ ಸಿಬ್ಬಂದಿಗೆ ಕಿವಿಮಾತು ಹೇಳಿದರು.

ರಾಷ್ಟ್ರೀಕೃತ ಬ್ಯಾಂಕುಗಳು ಬೇಜವಾಬ್ದಾರಿತನದಿಂದ ಸಾಲಕೊಟ್ಟು ದಿವಾಳಿಯಾಗಿವೆ. ಕೃಷಿಕರಿಗೆ, ಬೀದಿಬದಿ ಮತ್ತು ಸಣ್ಣಪುಟ್ಟ ವ್ಯಾಪಾರಿಗಳಿಗೆ ಹತ್ತು ಹಲವು ಕಾರಣಗಳನ್ನು ಹೇಳದೆ ಸಾಲಸೌಲಭ್ಯ ನೀಡುವ ಮೂಲಕ ಅವರ ಬದುಕಿಗೆ ಅನುಕೂಲ ಮಾಡಿಕೊಡಬೇಕೆಂದು ಲೀಡ್ ಬ್ಯಾಂಕ್ ಅಧಿಕಾರಿಗೆ ಕಿವಿಮಾತು ಹೇಳಿದರು.

ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗುಣಮಟ್ಟದ ಆಹಾರ, ವಸ್ತುಗಳನ್ನು ಉತ್ಪಾದನೆ ಮಾಡುವುದರಿಂದ ಗ್ರಾಹಕರು ಆಕರ್ಷಿತರಾಗಿ ವ್ಯಾಪಾರ ವೃದ್ಧಿಯಾಗುತ್ತದೆ. ಸ್ಥಳೀಯ ಆಡಳಿತದ ಚೌಕಟ್ಟಿನಲ್ಲಿ ವ್ಯಾಪಾರ ಮಾಡುವುದರಿಂದ ಸರ್ಕಾರದ ಸೌಲಭ್ಯಗಳನ್ನು ನಿರಾಂತಕವಾಗಿ ಪಡೆದುಕೊಳ್ಳಬಹುದು ಎಂದು ಹೇಳಿದರು.

ಬೀದಿ ಬದಿ ವ್ಯಾಪಾರಿಗಳು ಯಾವ ರೀತಿ ಚೆನ್ನಾಗಿ ವ್ಯಾಪಾರ ಮಾಡಬಹದು ಮತ್ತು ಗ್ರಾಹಕರನ್ನು ಸೆಳೆಯಬಹುದು ಎಂಬುದರ ಕುರಿತು ತಿಳಿವಳಿಕೆ ಕೊಡುವುದರ ಜೊತೆಗೆ ಬೀದಿ ಬದಿ ವ್ಯಾಪಾರಿಗಳಿಗೆ ಆತ್ಮವಿಶ್ವಾಸ ತುಂಬುವ ವೇದಿಕೆ ಇದಾಗಿದೆ ಎಂದು ಹೇಳಿದರು.

ಲೀಡ್ ಬ್ಯಾಂಕ್ ಮ್ಯಾನೇಜರ್ ಮಧುಸೂಧನ, ತಹಸೀಲ್ದಾರ್‌ ಸುಹಾಸ ಇಂಗಳೆ, ಪಪಂ ಮುಖ್ಯಾಧಿಕಾರಿ ದೇವಿಂದ್ರ ಧನಪಾಲ್ ಮಾತನಾಡಿದರು. ವೇದಿಕೆ ಮೇಲೆ ಸಿಪಿಐ ಬಸವರಾಜ ಹಳಬಣ್ಣವರ, ಪಪಂ ಸದಸ್ಯರಾದ ಪಡಿಯಪ್ಪ ಕರಿಗಾರ, ಅಜ್ಜು ಬಾಯಿಸರ್ಕಾರ ಮತ್ತಿತರಿದ್ದರು.