ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾದ ಎಸ್‌ಡಿಪಿಐನ ಅಧ್ಯಕ್ಷ ಎಂ.ಕೆ.ಫೈಜಿ ಬಂಧನದ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬೆಂಗಳೂರು ಸೇರಿದಂತೆ ದೇಶಾದ್ಯಂತ ಎಸ್‌ಡಿಪಿಐಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. 

ನವದೆಹಲಿ/ಬೆಂಗಳೂರು: ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾದ ಎಸ್‌ಡಿಪಿಐನ ಅಧ್ಯಕ್ಷ ಎಂ.ಕೆ.ಫೈಜಿ ಬಂಧನದ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬೆಂಗಳೂರು ಸೇರಿದಂತೆ ದೇಶಾದ್ಯಂತ ಎಸ್‌ಡಿಪಿಐಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಗುರುವಾರ ಬೆಳಗ್ಗೆ ಏಕಕಾಲದಲ್ಲಿ ಬೆಂಗಳೂರು, ದೆಹಲಿ, ತಿರುವನಂತಪುರ, ಲಖನೌ, ಜೈಪುರ, ಮಲಪ್ಪುರಂ, ಥಾಣೆ, ನಂದ್ಯಾಲ್‌, ಪಾಕೂರ್‌, ಕೋಲ್ಕತಾ ಮತ್ತು ಚೆನ್ನೈನಲ್ಲಿ ಪಕ್ಷಕ್ಕೆ ಸಂಬಂಧಿಸಿದ ಸ್ಥಳಗಳ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೇರಳ ಮೂಲದ ಪಿಎಫ್‌ಐ ನಾಯಕ ಅಬ್ದುಲ್ ರಜಾಕ್ ಜೊತೆ ಫೈಜಿ ಸಂಪರ್ಕ ಹೊಂದಿದ್ದು, ರಜಾಕ್ ಎಸ್‌ಡಿಪಿಐನ ರಾಷ್ಟ್ರೀಯ ಅಧಕ್ಷರಿಗೆ ಪಿಎಫ್‌ಐ ಸಂಘಟನೆಯ ನಿಧಿ ಸಂಗ್ರಹ ಚಟುವಟಿಕೆಗಳ ಭಾಗವಾಗಿ ಕೋಟ್ಯಂತರ ರುಪಾಯಿ ಹಣ ಮಾಡಿರುವ ಆರೋಪದ ಕುರಿತು ಇಡಿ, 2022ರಿಂದ ತನಿಖೆ ನಡೆಸುತ್ತಿದೆ.