ಶಾಸಕ ಭರತ್‌ರೆಡ್ಡಿ ಕಚೇರಿಯಲ್ಲಿಮುಂದುವರಿದ ಇ.ಡಿ.ದಾಳಿ

| Published : Feb 12 2024, 01:37 AM IST

ಶಾಸಕ ಭರತ್‌ರೆಡ್ಡಿ ಕಚೇರಿಯಲ್ಲಿಮುಂದುವರಿದ ಇ.ಡಿ.ದಾಳಿ
Share this Article
  • FB
  • TW
  • Linkdin
  • Email

ಸಾರಾಂಶ

ನಗರ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಸೇರಿ ಕುಟುಂಬ ಸದಸ್ಯರ ಮೇಲೆ ಶನಿವಾರ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಎರಡನೇ ದಿನವಾದ ಭಾನುವಾರವೂ ಶೋಧ ಕಾರ್ಯ ಮುಂದುವರಿಸಿದ್ದಾರೆ.

- ಮೊನ್ನೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದ ಅಧಿಕಾರಿಗಳು

- ಅಧಿಕಾರಿಗಳಿಂದ ಎರಡನೇ ದಿನವೂ ದಾಖಲೆಗಳ ಪರಿಶೀಲನೆಕನ್ನಡಪ್ರಭ ವಾರ್ತೆ ಬಳ್ಳಾರಿ

ನಗರ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಸೇರಿ ಕುಟುಂಬ ಸದಸ್ಯರ ಮೇಲೆ ಶನಿವಾರ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಎರಡನೇ ದಿನವಾದ ಭಾನುವಾರವೂ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಇಲ್ಲಿನ ಮೋಕಾ ರಸ್ತೆಯಲ್ಲಿರುವ ಶಾಸಕ ಭರತ್ ರೆಡ್ಡಿ ಹಾಗೂ ತಂದೆ ಸೂರ್ಯನಾರಾಯಣ ರೆಡ್ಡಿ ಅವರ ಕಚೇರಿಗಳಲ್ಲಿ ಇ.ಡಿ.ಅಧಿಕಾರಿಗಳ ಪರಿಶೀಲನಾ ಕಾರ್ಯ ಭಾನುವಾರವೂ ಮುಂದುವರಿದಿತ್ತು. ಆಪ್ತರ ಮನೆಗಳ ಮೇಲೆ ಶನಿವಾರ ದಾಳಿ ನಡೆಸಿ, ಅನೇಕ ಮಹತ್ವದ ದಾಖಲೆ ವಶಪಡಿಸಿಕೊಂಡಿರುವ ಅಧಿಕಾರಿಗಳು, ಅವುಗಳ ತಪಾಸಣೆ, ಆಸ್ತಿ ಮತ್ತಿತರ ದಾಖಲೆಗಳ ಪರಿಶೀಲನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ತಡರಾತ್ರಿ ವರೆಗೆ ಆಸ್ತಿ ಹಾಗೂ ಉದ್ಯಮದ ವಹಿವಾಟು ಕುರಿತ ಪರಿಶೀಲನೆ ಕಾರ್ಯವೂ ಮುಂದುವರಿದಿತ್ತು.

ಕೇಂದ್ರ ಮೀಸಲು ರಕ್ಷಣಾ ಪಡೆ (ಸಿಆರ್‌ಪಿಎಫ್‌) ಸಿಬ್ಬಂದಿಯೊಂದಿಗೆ ಆಗಮಿಸಿರುವ 20ಕ್ಕೂ ಹೆಚ್ಚು ಅಧಿಕಾರಿಗಳು ಬಳ್ಳಾರಿಯಲ್ಲಿ ಶಾಸಕ ರೆಡ್ಡಿ ಕಚೇರಿ, ನಿವಾಸ ಸೇರಿ 6 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದರು. ಕರ್ನಾಟಕ ಮಾತ್ರವಲ್ಲದೆ ಆಂಧ್ರ, ಚೆನ್ನೈನಲ್ಲೂ ಈ ದಾಳಿ ನಡೆದಿದ್ದು, ಒಟ್ಟು 13 ಕಡೆ ಭರತ್ ರೆಡ್ಡಿ ಹಾಗೂ ಸೂರ್ಯನಾರಾಯಣ ರೆಡ್ಡಿ ಅವರ ವ್ಯವಹಾರಕ್ಕೆ ಸಂಬಂಧಿಸಿದ ಆಸ್ತಿಗಳ ಪರಿಶೀಲನೆ ನಡೆದಿದೆ ಎನ್ನಲಾಗಿದೆ.

ಭಾರೀ ಪ್ರಮಾಣದ ಅಕ್ರಮ ಹಣ ವರ್ಗಾವಣೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆಸಿ, ಪರಿಶೀಲಿಸುತ್ತಿದ್ದಾರೆ ಎಂದು ಹೇಳಲಾಗಿದೆ.