ಮಕ್ಕಳಿಗೆ ಶಿಕ್ಷಣ ಕೊಡಿಸಿ ದೇಶದ ಆಸ್ತಿಯನ್ನಾಗಿಸಿ: ಸಚಿವ ಕೆ.ಎನ್‌.ರಾಜಣ್ಣ

| Published : Jul 03 2025, 11:48 PM IST

ಮಕ್ಕಳಿಗೆ ಶಿಕ್ಷಣ ಕೊಡಿಸಿ ದೇಶದ ಆಸ್ತಿಯನ್ನಾಗಿಸಿ: ಸಚಿವ ಕೆ.ಎನ್‌.ರಾಜಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಾ ಬಂದಿದ್ದೇನೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಆಸ್ತಿ ಮಾಡುವ ಪ್ರವೃತ್ತಿ ಬಿಟ್ಟು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲಿಸುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿ ಪರಿವರ್ತಿಸಿ

ಕನ್ನಡಪ್ರಭ ವಾರ್ತೆ ಮಧುಗಿರಿ

ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರನ್ನು ದೇಶದ ಆಸ್ತಿಯನ್ನಾಗಿ ಮಾಡಿ. ಉತ್ತಮ ಜ್ಞಾನ ಸಂಪಾದನೆಯಿಂದ ಸಮಾಜದ ಅಭ್ಯುದಯ ಹಾಗೂ ದೇಶದ ಪ್ರಗತಿ ಸಾಧ್ಯ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅಭಿಪ್ರಾಯಪಟ್ಟರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್ ರೋವರ್ಸ್ ಮತ್ತು ರೇಂಜರ್ಸ್ ಯುವ ರೆಡ್ ಕ್ರಾಸ್, ಐಕ್ಯೂಎಸಿ ಪ್ಲೇಸ್‌ಮೆಂಟ್‌ ಸೆಲ್‌ ಮತ್ತು ಇತರೆ ಚಟುವಟಿಕೆಗಳ ಸಮಾರೋಪ ಹಾಗೂ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಪೋಷಕರು ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳಿಗೆ ಗುಣಾತ್ಮ ಕ ಶಿಕ್ಷಣ ಕೊಡಿಸುವ ಮೂಲಕ ಮಕ್ಕಳನ್ನೇ ಕುಟುಂಬದ, ಸಮಾಜದ ಹಾಗೂ ದೇಶದ ಆಸ್ತಿಯನ್ನಾಗಿಸಿ ಪರಿವರ್ತಿಸುವ ಮಹತ್ತರ ಜವಾಬ್ದಾರಿ ಪೋಷಕರು ಮತ್ತು ಶಿಕ್ಷಕರ ಹೊಣೆಗಾರಿಕೆ ಎಂದರು.

ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಾ ಬಂದಿದ್ದೇನೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಆಸ್ತಿ ಮಾಡುವ ಪ್ರವೃತ್ತಿ ಬಿಟ್ಟು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲಿಸುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿ ಪರಿವರ್ತಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ನಿವೃತ್ತ ಪ್ರಾಂಶುಪಾಲ ಡಿ.ಎಸ್‌.ಮುನೀಂದ್ರ ಕುಮಾರ್‌ ಮಾತನಾಡಿ, ಜ್ಞಾನ ಮನುಷ್ಯರಲ್ಲಿ ಮಾನವೀಯ ಗುಣಗಳನ್ನು ಬೆಳೆಸುತ್ತದೆ. ಆ ಮೂಲಕ ಮಕ್ಕಳು ಶ್ರದ್ಧಾಭಕ್ತಿಯಿಂದ ಓದಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಎಂದು ಕಿವಿಮಾತು ಹೇಳಿದರು.

ಕಾಲೇಜು ಪ್ರಾಂಶುಪಾಲ ಕೆ.ಎಸ್‌. ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಚಲನಚಿತ್ರ ನಿರ್ಮಾಪಕ ರವಿ ಆರ್. ಗರಣಿ, ಪುರಸಭೆ ಅಧ್ಯಕ್ಷ ಲಾಲಪೇಟೆ ಮಂಜುನಾಥ್, ಎಸಿ ಗೋಟೂರು ಶಿವಪ್ಪ, ಪುರಸಬೆ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡರಾಜು, ಎನ್‌.ಗಂಗಣ್ಣ, ಕಸಾಪ ಅಧ್ಯಕ್ಷೆ ಸಹನಾ ನಾಗೇಶ್‌, ನೌಕರರ ಸಂಘದ ಅಧ್ಯಕ್ಷ ರಂಗಪ್ಪ, ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಬಿ., ಬುಡಸನಹಳ್ಳಿ ಮಂಜುನಾಥ್, ಪ್ರಾಧ್ಯಾಪಕರಾದ ಸುರೇಶ್‌, ಮುರುಳೀಧರ್‌, ಡಾ.ನಾಗರಾಜು, ಡಾ.ಗೋವಿಂದರಾಯ, ಡಾ.ಶ್ರೀನಿವಾಸಪ್ಪ, ರಾಮಮೂರ್ತಿ, ಡಾ.ದುರ್ಗಪ್ಪ, ಡಾ.ರಂಜಿತಾ, ಲೀಲಾವತಿ, ನಟರಾಜ್‌, ಡಾ.ವಿಜಯಲಕ್ಷ್ಮೀ, ಸುನಂದ,ಡಾ.ಲತಾ, ಸಂಜೀವಮೂರ್ತಿ ಇದ್ದರು.