ಪ್ರತಿಯೊಬ್ಬರೂ ಶಿಕ್ಷಣವಂತರಾಗಿ ಭವಿಷ್ಯ ರೂಪಿಸಿಕೊಳ್ಳಿ-ಬಣಕಾರ

| Published : Aug 11 2024, 01:32 AM IST

ಸಾರಾಂಶ

ಪ್ರತಿಯೊಬ್ಬರೂ ಶಿಕ್ಷಣವಂತರಾಗಿ ದೇಶದ ಅಭಿವೃದ್ಧಿಗೆ ಕೈಜೋಡಿಸುವ ಜತೆಗೆ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಹಿರೇಕೆರೂರ: ಪ್ರತಿಯೊಬ್ಬರೂ ಶಿಕ್ಷಣವಂತರಾಗಿ ದೇಶದ ಅಭಿವೃದ್ಧಿಗೆ ಕೈಜೋಡಿಸುವ ಜತೆಗೆ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.ತಾಲೂಕಿನ ಕಚವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಖಾಸಗಿ ಶಾಲೆಗಳಿಗಿಂತಲೂ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕಡಿಮೆ ಇರಬಾರದು ಎಂಬ ಉದ್ದೇಶದಿಂದ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲಾಗಿದೆ. ಇಲ್ಲಿ ಮಕ್ಕಳಿಗೆ ವಿಭಿನ್ನವಾಗಿ ಶಿಕ್ಷಣ ದೊರಕಲಿದೆ ಎಂದರು.ಕ್ಷೇತ್ರಶಿಕ್ಷಣಾಧಿಕಾರಿ ಎನ್. ಶ್ರೀಧರ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿಯೇ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಇದರಿಂದ ಬಡ ಮಕ್ಕಳಿಗೆ ಆಂಗ್ಲಮಾಧ್ಯಮದ ಶಿಕ್ಷಣ ಸಿಗಲಿದೆ. ಸರ್ಕಾರಗಳು ಎಲ್ಲ ಯೋಜನೆಗಳ ಪ್ರಯೋಜನೆ ಪಡೆದುಕೊಂಡು ಶಿಕ್ಷಣವಂತರಾಗಿ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಅಶೋಕ ದೊಡ್ಡಬಸಣ್ಣನವರ, ಕ್ಷೇತ್ರ ಸಮನ್ವಯಾಧಿಕಾರಿ ಎನ್. ಸುರೇಶಕುಮಾರ, ಎಸ್‌ಡಿಎಂಸಿ ಉಪಾಧ್ಯಕ್ಷೆ ಸರೋಜಾ ಗೊಂದಿ, ಎಚ್.ಎಚ್. ಜಾಡರ್, ಕೆ.ಎಸ್. ಪುಟ್ಟಪ್ಪಗೌಡ್ರ, ರಮೇಶ ಪೂಜಾರ, ಎ.ಎಂ. ಘಾಸಿ, ಕೆ.ಆರ್. ಮಧ್ಯಾಹ್ನನವರ, ಸಿದ್ದಪ್ಪ ಹಂಪಣ್ಣನವರ, ಸಂಗಪ್ಪ ದೊಡ್ಡಬಸಣ್ಣನರ, ಮೌನೇಶ ಬಡಿಗೇರ ಶಿಕ್ಷಕರು, ವಿದ್ಯಾರ್ಥಿಗಳು, ಇದ್ದರು.