ಸಾರಾಂಶ
ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನ ಪೂರ್ಣಗೊಂಡ ಬಳಿಕ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಉದ್ಘಾಟಿಸುತ್ತೇನೆ ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಅಭಯ ನೀಡಿದರು.
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನ ಪೂರ್ಣಗೊಂಡ ಬಳಿಕ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಉದ್ಘಾಟಿಸುತ್ತೇನೆ ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಅಭಯ ನೀಡಿದರು.ಪಟ್ಟಣದ ಗುರುಭವನದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮಾತನಾಡಿದರು.
ವಾಲ್ಮೀಕಿ ಭವನದ ಉಳಿಕೆ ಕಾಮಗಾರಿ ಪೂರೈಸಲು ರಾಜ್ಯ ಸರ್ಕಾರ ಒಂದು ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ. ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನ ಸರ್ಕಾರದಿಂದ ಕೊಡಿಸುತ್ತೇನೆ. ರಾಜ್ಯದಲ್ಲಿ ನಾಯಕ ಸಮುದಾಯ ಶೈಕ್ಷಣಿಕ, ಸಾಮಾಜಿಕವಾಗಿ ಬೆಳೆಯಬೇಕು. ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಉನ್ನತ ಹುದ್ದೆಗಳು ಸಿಗುವಂತೆ ಮಾಡಬೇಕಿದೆ ಸಮಾಜದವರು ಎಂದು ಸಲಹೆ ನೀಡಿದರು.ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಮೈಸೂರು ಮನೋವಿಜ್ಞಾನ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ ಮಾತನಾಡಿ, ಕಾವ್ಯ ಸೃಷ್ಟಿ ವಿಷಯದಲ್ಲಿ ವಾಲ್ಮೀಕಿಗೆ ಸರಿಸಮನಾಗಿ ಮತ್ತೊಬ್ಬರಿಲ್ಲ. ವಾಲ್ಮೀಕಿ ಬರೆದ ೨೪ ಸಾವಿರ ಶ್ಲೋಕಗಳು ಜಗತ್ತಿಗೆ ಮಾರ್ಗದರ್ಶನ ಕೊಟ್ಟಿದ್ದಾರೆ ಎಂದರು. ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ನಾಯಕ ಸಮಾಜದ ವಿದ್ಯಾರ್ಥಿಗಳು ಹಾಗು ಪುರಸಭೆ ಪೌರ ಕಾರ್ಮಿಕರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.
ಪುರಸಭೆ ಅಧ್ಯಕ್ಷ ಶಶಿಧರ್ ಪಿ ದೀಪು, ಉಪಾಧ್ಯಕ್ಷ ಶ್ರೀನಿವಾಸ (ಕಣ್ಣಪ್ಪ), ಎಪಿಎಂಸಿ ಅಧ್ಯಕ್ಷ ಆರ್.ಎಸ್.ನಾಗರಾಜು, ಪುರಸಭೆ ಮಾಜಿ ಉಪಾಧ್ಯಕ್ಷರಾದ ಕಾರ್ಗಳ್ಳಿ ಸುರೇಶ್, ಅಣ್ಣಯ್ಯಸ್ವಾಮಿ, ಸದಸ್ಯ ಎನ್.ಕುಮಾರ್,ತಾಪಂ ಮಾಜಿ ಉಪಾಧ್ಯಕ್ಷ ಬಂಗಾರನಾಯಕ, ಪುರಸಭೆ ಅಧ್ಯಕ್ಷ ಪಿ.ಗಿರೀಶ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್.ಮಲ್ಲೇಶ್, ಮುಖಂಡರಾದ ಬಸವನಾಯಕ ,ಮಣಿನಾಯಕ್, ಪಿ.ಲಿಂಗರಾಜು, ಎಚ್.ಬಿ.ವೃಷಬೇಂದ್ರ ಹಾಗು ತಹಸೀಲ್ದಾರ್ ಎಂ.ಎಸ್.ತನ್ಮಯ್, ಪುರಸಭೆ ಮುಖ್ಯಾಧಿಕಾರಿ ಎಸ್.ಶರವಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮೋಹನ್‌ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ, ಪೃಥ್ವಿರಾಜ್ ಹಾಲಹಳ್ಳಿ ಇದ್ದರು.