ಶಿಕ್ಷಣ ಮತ್ತು ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು

| Published : Jul 02 2024, 01:38 AM IST / Updated: Jul 02 2024, 01:39 AM IST

ಶಿಕ್ಷಣ ಮತ್ತು ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು
Share this Article
  • FB
  • TW
  • Linkdin
  • Email

ಸಾರಾಂಶ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜತೆಗೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಅಷ್ಟೆ ಅಗತ್ಯ. ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣ ಮತ್ತು ಆರೋಗ್ಯ ಎಂಬುವುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಅಥಣಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಬಸಗೌಡ ಕಾಗೆ ಹೇಳಿದರು.

ಕನ್ನಡಪ್ರಭ ವಾರ್ತೆ ಅಥಣಿ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜತೆಗೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಅಷ್ಟೆ ಅಗತ್ಯ. ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣ ಮತ್ತು ಆರೋಗ್ಯ ಎಂಬುವುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಅಥಣಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಬಸಗೌಡ ಕಾಗೆ ಹೇಳಿದರು.ಪಟ್ಟಣದ ಶ್ರೀಮತಿ ಕಾಶಿಬಾಯಿ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವೈದ್ಯರ ದಿನಾಚರಣೆಯ ಅಂಗವಾಗಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ನಿರ್ದಿಷ್ಟವಾದ ಗುರಿಯನ್ನು ಇಟ್ಟುಕೊಂಡು ಗುರುಗಳ ಮಾರ್ಗದರ್ಶನದಲ್ಲಿ ವಿದ್ಯಾಭ್ಯಾಸವನ್ನು ಮಾಡಿ ಉನ್ನತವಾದ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.ತಾಲೂಕು ಸರ್ಕಾರಿ ನೌಕರರ ಸಂಘದ ರಾಮಗೊಂಡ ಪಾಟೀಲ ಮಾತನಾಡಿ, ವೈದ್ಯರು ದೇವರ ಸಮಾನ, ಜನರಿಗೆ ಆರೋಗ್ಯ ಸೇವೆ ನೀಡುವಲ್ಲಿ ತಮ್ಮ ಜೀವನವನ್ನು ಮುಡುಪಾಗಿಡುತ್ತಾರೆ. ನಮ್ಮ ಅಥಣಿ ಸಾರ್ವಜನಿಕ ಆಸ್ಪತ್ರೆಯ ಪ್ರಗತಿಯಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಬಸಗೌಡ ಕಾಗೆ ಪಾತ್ರ ಮಹತ್ತರವಾಗಿದ್ದು, ಉತ್ತಮ ಆಡಳಿತ ನೀಡುವುದರ ಜೊತೆಗೆ ತಾಲೂಕಿನ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರೋಗ್ಯ ಸೇವೆಗಳನ್ನು ಉತ್ತಮವಾಗಿ ನೀಡುತ್ತಿದ್ದಾರೆ. ಅಂತಹ ವೈದ್ಯರನ್ನು ಗುರುತಿಸಿ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯವರು ವೈದ್ಯರ ದಿನಾಚರಣೆಯ ಸಂದರ್ಭದಲ್ಲಿ ಸನ್ಮಾನಿಸುತ್ತಿರುವುದು ಅವರಿಗೆ ಇನ್ನಷ್ಟು ಸ್ಫೂರ್ತಿ ತುಂಬಲಿದೆ ಎಂದು ತಿಳಿಸಿದರು.ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುರೇಶ ಚಿಕ್ಕಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅಥಣಿ ಪತಂಜಲಿ ಯೋಗ ಸಮಿತಿಯ ಎಸ್.ಕೆ.ಹೊಳೆಪ್ಪನವರ, ಕರವೇ ಸಂಘಟನೆಯ ಅಧ್ಯಕ್ಷ ಅಣ್ಣಾಸಾಬ ತೆಲಸಂಗ, ಹಿರಿಯ ಪತ್ರಕರ್ತ ಸಿ.ಎ.ಹಿಟ್ನಾಳಮಠ, ಸಮಾಜ ಸೇವಕ ರಾಮಣ್ಣ ದರಿಗೌಡ, ಶಿಕ್ಷಣ ಪ್ರೇಮಿ ಅಪ್ಪಾಸಾಹೇಬ ಚಿಕ್ಕಟ್ಟಿ ಉಪಸ್ಥಿತರಿದ್ದರು. ಸುರೇಶ್ ಚಿಕ್ಕಟ್ಟಿ ಸ್ವಾಗತಿಸಿದರು. ಶಿಕ್ಷಕ ಸೌದಾಗರ ನಿರೂಪಿಸಿದರು. ಕಾರ್ಯದರ್ಶಿ ಸದಾಶಿವ ಚಿಕ್ಕಟ್ಟಿ ವಂದಿಸಿದರು.

ಉತ್ತಮವಾದ ಆಹಾರ ಮತ್ತು ನಿತ್ಯ ವ್ಯಾಯಾಮ ಮಾಡುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಎಲ್ಲ ಕುಟುಂಬಗಳಲ್ಲಿ ಬಳಕೆ ಹೆಚ್ಚಾಗುತ್ತಿದೆ. ಇದರಿಂದ ಮಕ್ಕಳ ವಿದ್ಯಾಭ್ಯಾಸ ಮತ್ತು ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ವಿದ್ಯಾರ್ಥಿಗಳು ಶೈಕ್ಷಣಿಕ ಮಾಹಿತಿಗೆ ಅದನ್ನು ಬಳಸಿಕೊಂಡರೇ ತಪ್ಪಲ್ಲ. ಆದರೆ, ಅತಿಯಾದ ಮೊಬೈಲ್ ಬಳಕೆಯಿಂದ ತಮ್ಮ ಮಾನಸಿಕ ನೆಮ್ಮದಿ ಹಾಳಾಗಿ ಅಭ್ಯಾಸದಲ್ಲಿ ಏಕಾಗ್ರತೆ ಸಾಧಿಸಲು ತೊಂದರೆಗಾಗಲಿದೆ. ಮೊಬೈಲ್ ಬಳಕೆಯನ್ನು ವಿದ್ಯಾರ್ಥಿಗಳು ಕಡಿಮೆ ಮಾಡಬೇಕು.

-ಡಾ.ಬಸಗೌಡ ಕಾಗೆ, ಅಥಣಿ ತಾಲೂಕು ಆರೋಗ್ಯ ಅಧಿಕಾರಿ.

(01ಅಥಣಿ 01)

ಅಥಣಿ ಪಟ್ಟಣದ ಶ್ರೀಮತಿ ಕಾಶಿಬಾಯಿ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಬಸಗೌಡ ಕಾಗೆ ಅವರನ್ನು ಸನ್ಮಾನಿಸಲಾಯಿತು.