ಸಾರಾಂಶ
ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಸರ್ಕಾರಿ ಶಾಲೆ ಶಿಕ್ಷಕರಿಗೆ ಬೋಧನೆಗಿಂತ ಇತರೆ ಕೆಲಸಗಳೇ ಹೆಚ್ಚಾಗಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಕರು ಉತ್ತಮ ಶಿಕ್ಷಣ ಪದ್ಧತಿ ಇದ್ದರೂ ಜಾರಿ ಮಾಡಲು ಶಿಕ್ಷಕರಿಗೆ ಸಮಯವೇ ಸಿಗುತ್ತಿಲ್ಲ ಹಾಗಾಗಿ ಬೋಧನೆಗೆ ಶಿಕ್ಷಕರು ಹೆಚ್ಚು ಅವಕಾಶ ಕಲ್ಪಿಸಬೇಕು
ಕನ್ನಡಪ್ರಭ ವಾರ್ತೆ ಮಾಲೂರು
ತಾಲೂಕಿನ ಸರ್ಕಾರಿ ಶಾಲೆಗಳಿಗೆ ಸರ್ಕಾರದ ಅನುದಾನದ ಜೊತೆಗೆ ದಾನಿಗಳು ಹಾಗೂ ಖಾಸಗಿ ಕಂಪೆನಿಗಳ ಸಿಎಸ್‌ಆರ್ ಅನುದಾನಗಳಿಂದ ಸರ್ಕಾರಿ ಶಾಲೆಗಳ ಉನ್ನತೀಕರಿಸಲಾಗುತ್ತಿದ್ದು, ಹೆಚ್ಚು ಮಕ್ಕಳ ಸರ್ಕಾರಿ ಶಾಲೆಗೆ ಸೇರಿಸುವಂತಹ ವಾತಾವರಣ ಸೃಷ್ಟಿಸಬೇಕಾಗಿರುವುದು ಶಿಕ್ಷಣ ಇಲಾಖೆಯ ಜವಾಬ್ದಾರಿ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರುಅವರು ತಾಲೂಕಿನ ತೂರ‍್ನಹಳ್ಳಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹೋಂಡ ಮೋಟರ್ ಸೈಕಲ್ ಇಂಡಿಯಾ ಪ್ರವೈಟ್ ಲಿಮಿಟೆಡ್ ವತಿಯಿಂದ ನೂತನ ೪ ಕೂಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ಹಾಗೂ ಓಸಾಟ್ ಸಂಸ್ಥೆಯ ಸಹಯೋಗದೊಂದಿಗೆ ನಿರ್ಮಾಣವಾಗಿರುವ ೪ ಕೂಠಡಿಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.ಶಿಕ್ಷಕರಿಗೆ ಸಮಯದ ಅಭಾವ
ಗ್ರಾಮೀಣ ಪ್ರದೇಶದ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿ ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲು ಮಾಡಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಸರ್ಕಾರಿ ಶಾಲೆ ಶಿಕ್ಷಕರಿಗೆ ಬೋಧನೆಗಿಂತ ಇತರೆ ಕೆಲಸಗಳೇ ಹೆಚ್ಚಾಗಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಕರು ಉತ್ತಮ ಶಿಕ್ಷಣ ಪದ್ಧತಿ ಇದ್ದರೂ ಜಾರಿ ಮಾಡಲು ಶಿಕ್ಷಕರಿಗೆ ಸಮಯವೇ ಸಿಗುತ್ತಿಲ್ಲ ಹಾಗಾಗಿ ಬೋಧನೆಗೆ ಶಿಕ್ಷಕರು ಹೆಚ್ಚು ಅವಕಾಶ ಕಲ್ಪಿಸಬೇಕು ಎಂದರು.ಅಭಿವೃದ್ಧಿ ಕಾರ್ಯಕ್ಕೆ ನೆರವು
ಮಾಲೂರು ತಾಲೂಕಿನ ಹೋಂಡಾ ಕಂಪನಿ ಆಪರೇಟಿಂಗ್ ಆಫೀಸರ್ ಸುನಿಲ್ ಕುಮಾರ್ ಮಿತ್ತಲ್ ಮಾತನಾಡಿ, ಹೋಂಡಾ ಕಂಪನಿಯು ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ ಕೋಲಾರ ಮತ್ತು ಮಾಲೂರು ತಾಲ್ಲೂಕಿನ ಗ್ರಾಮಗಳಲ್ಲಿ ಗ್ರಾಮೀಣ ಅಭಿವೃದ್ಧಿ, ಆರೋಗ್ಯ, ಶಿಕ್ಷಣ, ಉದ್ಯೋಗ, ಪರಿಸರ ರಕ್ಷಣೆ, ರಸ್ತೆ ಸುರಕ್ಷತೆ ಮಹಿಳಾ ಸಬಲೀಕರಣ ಮತ್ತು ಕ್ರೀಡಾಂಗಣ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿರುತ್ತದೆ ಎಂದರು.ಹೋಂಡಾ ಕಂಪನಿಯು ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ೫೦ ಗ್ರಾಮಗಳಲ್ಲಿ ಕುಡಿಯುವ ನೀರಿನ ಘಟಕ, ೭೫ ಗ್ರಾಮಗಳಲ್ಲಿ ಹೈ ಮಾಸ್ ಲೈಟ್, ೧೫೦ ಸೋಲಾರ್ ಲೈಟ್, ರೋಡ್, ಕ್ರೀಡಾಂಗಣ, ಇನ್ನು ಹಲವಾರು ರೀತಿಯ ಕಾರ್ಯ ಚಟುವಟಿಕೆಗಳನ್ನು ತನ್ನ ಸಾಮಾಜಿಕ ಜವಾಬ್ದಾರಿಯಲಿ ಕೈಗೊಂಡಿದೆ ಎಂದು ಹೇಳಿದರು.
ಶಿಕ್ಷಣಾಧಿಕಾರಿ ಚಂದ್ರಕಲಾ ಮಾತನಾಡಿದರು. ಈ ಸಂದರ್ಭದಲ್ಲಿ ತೂರ‍್ನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶ್ವತಮ್ಮ ರಾಮಯ್ಯ, ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಷಣ್ಮುಖಯ್ಯ, ಸಿ.ಆರ್.ಪಿ.ಶ್ರೀನಿವಾಸ್, ಜಗದಾಂಭ, ದರಖಾಸ್ತು ಸಮಿತಿ ಅಧ್ಯಕ್ಷ ಆನೇಪುರ ಹನುಮಂತಪ್ಪ, ಎಸ್.ಡಿ.ಎಂ.ಸಿ.ಅಧ್ಯಕ್ಷ ರಾಮಾಂಜನೇಯ, ಕಂಪನಿಯ ಜನರಲ್ ಮ್ಯಾನೇಜರ್ ಜಯಂತ್ ಶೆಟ್ಟಿ, ಕಂಪನಿಯ ಡಿಪಾರ್ಟ್ಮೆಂಟ್ ಹೆಡ್ ರಾಘವೇಂದ್ರ, ಓಸಾಟ್ ಮುಖ್ಯಸ್ಥ ಮಂಜುನಾಥ್ ಮತ್ತಿತರರು ಇದ್ದರು.