ಸೂಲಿಬೆಲೆ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯೆ ತುಂಬಾ ಅವಶ್ಯವಿದ್ದು, ಯಾರು ಕದಿಯಲಾಗದ ವಿದ್ಯೆಯನ್ನು ಆಸ್ತಿಯಂತೆ ಸಂಪಾದಿಸಬೇಕು ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ ಹೇಳಿದರು.

ಇಲ್ಲಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾರದಾ ಪೂಜೆ ಹಾಗೂ ೧೦ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ಪ್ರವೇಶ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾದಾನ ಶ್ರೇಷ್ಠ ದಾನವಾಗಿದ್ದು ,ಹೊಸಕೋಟೆ ತಾಲೂಕಿನಲ್ಲಿ ಶಾಸಕ ಶರತ್ ಬಚ್ಚೇಗೌಡರ ನೇತೃತ್ವದಲ್ಲಿ ಶಾಲಾ ಕಾಲೇಜುಗಳ ಅಭಿವೃದ್ಧಿ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಹೆಚ್ಚು ಕ್ರಿಯಾಶೀಲ ಕಾರ್ಯಕ್ರಮಗಳು ನಡೆಯುತ್ತಿದೆ. ಸರ್ಕಾರಿ ಶಾಲೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ತರುವ ಮೂಲಕ ಪೋಷಕರಿಗೆ ಶಾಲೆಗೆ ಕೀರ್ತಿ ತರಬೇಕು ಎಂದರು.

ಪ್ರಾಂಶುಪಾಲ ವೆಂಕಟೇಶ್ ಮಾತನಾಡಿ, ಮಾಜಿ ಸಚಿವ ಬಿ.ಎನ್.ಬಚ್ಚೇಗೌಡರು ಹೊಸಕೋಟೆ ತಾಲೂಕಿನಲ್ಲಿ ಶಾಶ್ವತ ಶಾಲಾ ಕಾಲೇಜುಗಳನ್ನು ಪ್ರಾರಂಭಿಸಿದರು. ಅದನ್ನು ಶರತ್ ಬಚ್ಚೇಗೌಡರು ಪ್ರಗತಿಯಲ್ಲಿ ಮುನ್ನಡೆಸುತ್ತಿದ್ದಾರೆ. ಶಿಕ್ಷಣವೇ ಶಕ್ತಿ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಜನಾರ್ದನರೆಡ್ಡಿ, ಅಭಿವೃದ್ಧಿ ಸಮಿತಿ ಸದಸ್ಯರಾದ ಜಿಯಾವುಲ್ಲಾ, ಬೆಟ್ಟಹಳ್ಳಿ ಗೋಪಿನಾಥ್, ಸೈಯದ್ ಮಹಬೂಬ್, ನಯಾಜ್ ಖಾನ್, ಪ್ರಶಾಂತ್, ಅತ್ತಿಬೆಲೆ ಮಂಜುನಾಥ್, ಶಿಕ್ಷಕರಾದ ಅಚ್ಯುತ್, ಬಸವರಾಜ್, ರುತ್ ಜೆಸಂತ, ಲಕ್ಷ್ಮೀಭಟ್, ರಕ್ಷಿತಾ ಇತರರಿದ್ದರು.

(ಫೋಟೋ ಕ್ಯಾಪ್ಷನ್‌)


ಸೂಲಿಬೆಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಾರದಾ ಪೂಜೆ ಹಾಗೂ ೧೦ನೇ ತರಗತಿ ಪರೀಕ್ಷಾ ಪ್ರವೇಶ ಪತ್ರಗಳನ್ನು ಸರ್ಕಾರಿ ಪಿಯ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ ನೆರವೇರಿಸಿದರು. ಪ್ರಾಂಶುಪಾಲ ವೆಂಕಟೇಶ್, ಜನಾರ್ದನರೆಡ್ಡಿ, ಸದಸ್ಯರಾದ ಜಿಯಾವುಲ್ಲಾ, ಬೆಟ್ಟಹಳ್ಳಿ ಗೋಪಿನಾಥ್ ಇತರರಿದ್ದರು.