ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ ಸಮಾಜದಲ್ಲಿ ಗೌರವಯುತವಾಗಿ ಬಾಳಲು ಶಿಕ್ಷಣ ಮುಖ್ಯ. ಸಮಾಜದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಮುಂದಿನ ಪೀಳಿಗೆ ಸಮಗ್ರ ಅಭಿವೃದ್ಧಿ ಹೊಂದಲು ಶಿಕ್ಷಣದ ಪಾತ್ರ ಬಹಳಷ್ಟಿದೆ ಎಂದು ಬೆಳಗಾವಿ ಎಂ.ಎನ್.ಆರ್ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯೆ ಡಾ.ನಿರ್ಮಲ ಬಟ್ಟಲ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಮಂಗಳವಾರ ನಡೆದ ತ್ರಿಪದಿ ಕವಿ ಸರ್ವಜ್ಞ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.೧೬ನೇ ಶತಮಾನದಲ್ಲಿ ತ್ರಿಪದಿ ಕವಿ ಸರ್ವಜ್ಞ ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ, ಸಾಮಾಜಿಕ ಮತ್ತು ಧಾರ್ಮಿಕ ವಿಚಾರಗಳ ಕುರಿತು ಅನೇಕ ಮಾಹಿತಿ ನೀಡಿದ್ದಾರೆ. ಜಾತಿ, ಮತ, ಪಂಥಗಳ ಬಗ್ಗೆ ಸಮಾಜದ ಅಂಕು-ಡೊಂಕು ತಿದ್ದುವ ಮೂಲಕ ಮನುಷ್ಯರಾಗಿ ಬಾಳುವುದು ಮುಖ್ಯ ಎಂದು ಕವಿ ಸರ್ವಜ್ಞರು ಮನುಕುಲಕ್ಕೆ ಸಂದೇಶ ಸಾರಿದ್ದಾರೆ. ಸರ್ವಜ್ಞ ಸರಳ ಭಾಷೆಯಲ್ಲಿ ಸಾಹಿತ್ಯ ರಚಿಸಿ, ತಮ್ಮ ಅಲೋಚನೆ ಮೂಲಕ ವಚನಗಳನ್ನು ನೀಡಿದ್ದಾರೆ. ಸಮಾಜದ ಆಗು-ಹೋಗುಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ವಿಶಿಷ್ಟ ಸಾಹಿತ್ಯ ಪರಂಪರೆಯನ್ನು ಹುಟ್ಟು ಹಾಕಿದ್ದ ಸರ್ವಜ್ಞರ ತ್ರಿಪದಿ ಸಾಹಿತ್ಯ ಸಾರ್ವಕಾಲಿಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಎಲ್ಲ ಸಮುದಾಯದ ಜ್ಞಾನದ ದಿಕ್ಕನ್ನೇ ಬದಲಾಯಿಸಿದ ಕೀರ್ತಿ ಸರ್ವಜ್ಞರಿಗೆ ಸಲ್ಲುತ್ತದೆ. ಜನಸಾಮಾನ್ಯರು ಅರ್ಥೈಸಿಕೊಳ್ಳುವಂತಹ ಬದುಕಿನ ನೈಜ್ಯ ಸ್ಥಿತಿಯನ್ನು ತಮ್ಮದೇಯಾದ ಸಾಲುಗಳಲ್ಲಿ ರಚಿಸಿ ಸಮಾಜದಲ್ಲಿ ಸಾಮರಸ್ಯ ಮತ್ತು ಧಾರ್ಮಿಕ ಜಾಗೃತಿ ಉಂಟು ಮಾಡಿದವರು ಕವಿ ಸರ್ವಜ್ಞರು ಎಂದು ಹೇಳಿದರು.ಕುಂಬಾರಿಕೆ ಕಲೆಯು ಕುಂಬಾರರಿಗೆ ವರವಾಗಿ ಬಂದಿದೆ. ಈ ಕಲೆ ಉಳಿಸಿಕೊಳ್ಳಲು ಅದಕ್ಕೆ ಆಧುನಿಕ ಸ್ಪರ್ಶ ನೀಡಬೇಕು. ಅದಕ್ಕಾಗಿ ಕೌಶಲ್ಯಾಧಾರಿತ ತರಬೇತಿ ಪಡೆಯಬೇಕು. ಸರ್ಕಾರ ನೀಡುವ ಸೌಲಭ್ಯಗಳನ್ನು ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಸಲಹೆ ನೀಡಿದರು.
ಬೆಳಗಾವಿ ತಹಸೀಲ್ದಾರ್ ಸಿದ್ದು ಬೋಸಗಿ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ರಾಹುಲ್ ಕಾಂಬಳೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ಕರಾದ ವಿದ್ಯಾವತಿ ಭಜಂತ್ರಿ, ಸಮಾಜದ ಮುಖಂಡರಾದ ಡಾ. ಆಯ್. ಎಸ್. ಕುಂಬಾರ, ಸುರೇಶ, ಚಂದ್ರಶೇಖರ ಯಡೂರ್, ನಿಂಗಪ್ಪ ಕುಂಬಾರ, ಜ್ಯೋತಿ ಬದಾಮಿ ಸೇರಿದಂತೆ ಮತ್ತಿತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ವಿದ್ಯಾರ್ಥಿಗಳಿಗೆ ಸನ್ಮಾನ
ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಕುಂಬಾರ ಸಮಾಜದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.--ಕೋಟ್‌ತಮ್ಮ ತ್ರಿಪದಿಗಳ ಅತ್ಯಂತ ಸರಳವಾದ ಕನ್ನಡ ಭಾಷೆಯ ಮೂಲಕ ಜೀವನ, ಆದರ್ಶ ಮತ್ತು ನೈತಿಕ ಮೌಲ್ಯಗಳನ್ನು ತಿಳಿಸಿದ್ದಾರೆ. ಇವುಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆದರ್ಶ ಬದುಕು ರೂಪಿಸಿಕೊಳ್ಳಬೇಕು.- ಡಾ.ನಿರ್ಮಲ ಬಟ್ಟಲ, ಬೆಳಗಾವಿ ಎಂ.ಎನ್.ಆರ್ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯೆ---20ಬಿಇಎಲ್2