ಸಾರಾಂಶ
ಸತತ ಪರಿಶ್ರಮ, ಅಚಲ ಸಾಧನೆಯಿಂದ ಮಹರ್ಷಿ ವಾಲ್ಮೀಕಿಯಾಗಿ ರೂಪಗೊಂಡಿದ್ದು, ವಾಲ್ಮೀಕಿ ಅವರ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು, ರಾಮಾಯಣದಲ್ಲಿರುವ ಮೌಲ್ಯ, ತತ್ವಗಳು ಎಲ್ಲಾ ಕಾಲಕ್ಕೂ ಪ್ರಸ್ತುತ ಎಂದ ಅವರು ವಾಲ್ಮೀಕಿ ರವರ ಆದರ್ಶ, ತತ್ವ ಸಿದ್ದಾಂತಗಳನ್ನು ಸದಾ ಪಾಲನೆ ಮಾಡಬೇಕು.
ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಿದಾಗ ಮಾತ್ರ ಯಾವುದೇ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ರಾಜಕೀಯವಾಗಿ ಅಭಿವೃದ್ದಿ ಹೊಂದಲು ಸಾಧ್ಯ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಪಟ್ಟಣದ ತಾ.ಪಂ ಸಭಾಂಗಣದಲ್ಲಿ ನಡೆದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ವಾಲ್ಮೀಕಿ ಸಾಧನೆ ಎಲ್ಲರಿಗೂ ಪ್ರೇರಣೆಸತತ ಪರಿಶ್ರಮ, ಅಚಲ ಸಾಧನೆಯಿಂದ ಮಹರ್ಷಿ ವಾಲ್ಮೀಕಿಯಾಗಿ ರೂಪಗೊಂಡಿದ್ದು, ವಾಲ್ಮೀಕಿ ಅವರ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು, ರಾಮಾಯಣದಲ್ಲಿರುವ ಮೌಲ್ಯ, ತತ್ವಗಳು ಎಲ್ಲಾ ಕಾಲಕ್ಕೂ ಪ್ರಸ್ತುತ ಎಂದ ಅವರು ವಾಲ್ಮೀಕಿ ರವರ ಆದರ್ಶ, ತತ್ವ ಸಿದ್ದಾಂತಗಳನ್ನು ಸದಾ ಪಾಲನೆ ಮಾಡುವುದರ ಜೊತೆಗೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವುದಕ್ಕೆ ಮೊದಲ ಆದ್ಯತೆ ನೀಡಬೇಕು ಎಂದ ಅವರು ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದರು.
ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಹಾಗೂ ಪದವಿ ಪೂರ್ವ ಕಾಲೇಜು ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಸಮುದಾಯದ ವಿಧ್ಯಾರ್ಥಿಗಳನ್ನ ಆತ್ಮೀಯವಾಗಿ ಸನಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ತಹಶಿಲ್ದಾರ್ ಮನೀಶಾ ಮಹೇಶ್ ಪತ್ರಿ, ತಾ.ಪಂ ಇಓ ರಮೇಶ್, ಬಿಇಓ ಎನ್.ವೆಂಕಟೇಶಪ್ಪ, ಕೃಷಿ ನಿರ್ದೇಶಕಿ ಲಕ್ಷೀ, ಟಿ.ಹೆಚ್ಓ ಡಾ.ಸತ್ಯನಾರಾಯಣರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಎನ್.ಶ್ರೀನಿವಾಸ್, ಪುರಸಭೆ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷೆ ಸುಜಾತ ನರಸಿಂಹ ನಾಯ್ಡು, ಗಡ್ಡಂ ರಮೇಶ್, ನರಸಪ್ಪ ವಾಲ್ಮೀಕಿ ಅಶ್ವಥಪ್ಪ ಮತ್ತಿತರರು ಇದ್ದರು..