ಸ್ವಾವಲಂಬಿ ಜೀವನಕ್ಕೆ ಶಿಕ್ಷಣ ಅಗತ್ಯ

| Published : Sep 08 2025, 01:01 AM IST

ಸಾರಾಂಶ

ಪ್ರತಿಭೆ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಇರುತ್ತದೆ.ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು

ಕುಷ್ಟಗಿ: ವಿದ್ಯಾರ್ಥಿಗಳು ಶಿಸ್ತು, ತಾಳ್ಮೆ, ವಿನಯ ಕಳೆದುಕೊಳ್ಳದೆ ಕಾಲೇಜಿನಲ್ಲಿ ಶ್ರದ್ಧೆಯಿಂದ ಓದುವ ಕಡೆ ಗಮನ ಹರಿಸಿ ತಮ್ಮ ಗುರಿ ತಲುಪಬೇಕು ಎಂದು ಸಂಸದ ಕೆ.ರಾಜಶೇಖರ ಹಿಟ್ನಾಳ ಹೇಳಿದರು.

ಪಟ್ಟಣದ ಮಾತೋಶ್ರೀ ಹೊಳಿಯಮ್ಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಎನ್ಎಸ್ಎಸ್ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಪ್ರತಿಭೆ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಇರುತ್ತದೆ.ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಓದಿನ ಜತೆಗೆ ಕಲೆ, ಸಾಹಿತ್ಯ, ಕ್ರೀಡೆ, ನೃತ್ಯ, ಸಂಗೀತ ಸೇರಿದಂತೆ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು. ಸ್ವಾವಲಂಬನೆ ಜೀವನ ನಡೆಸಲು ಶಿಕ್ಷಣದ ಅವಶ್ಯಕತೆವಿದೆ ಶಿಕ್ಷಣದಿಂದ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿ, ಕಾಲೇಜು ವಿದ್ಯಾರ್ಥಿನಿಯರು ಯಾವುದೋ ವ್ಯಾಮೋಹಕ್ಕೆ ಬಲಿಯಾಗಲಾರದೆ ಉತ್ತಮ ಅಭ್ಯಾಸ ಮಾಡುವಲ್ಲಿ ತೊಡಗಿಕೊಳ್ಳುವ ಮೂಲಕ ಹೆತ್ತ ತಂದೆ ತಾಯಿಗೆ ಹಾಗೂ ಶಿಕ್ಷಣ ಕಲಿಸಿದ ಶಿಕ್ಷಕರಿಗೆ ಉತ್ತಮ ಹೆಸರು ತಂದುಕೊಡುವಂತೆ ಅಭ್ಯಾಸ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಹನುಮಂತಪ್ಪ ಚೌಡ್ಕಿ, ಭರಮಗೌಡ ಬ್ಯಾಲಿಹಾಳ, ಮಹಾಲಿಂಗಪ್ಪ ದೋಟಿಹಾಳ, ನಿವೃತ್ತ ಮುಖ್ಯೋಪಾಧ್ಯಾಯ ಎಚ್.ಎಸ್.ಹಿರೇಮಠ ಹಾಗೂ ಪ್ರಾಧ್ಯಾಪಕ, ಶಿಕ್ಷಕರ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.