ಸಾರಾಂಶ
ಸಮುದಾಯ ಶೈಕ್ಷಣಿಕವಾಗಿ ಮುಂಚೂಣಿಗೆ ಬಂದಾಗ ಮಾತ್ರ ಸಾಮಾಜಿಕ ನೆಲೆಗಟ್ಟಿನಲ್ಲಿ ತಳ ಸಮುದಾಯಗಳು ಭದ್ರತೆ ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಅದರೊಂದಿಗೆ ರಾಜಕೀಯ ಸ್ಥಾನಮಾನಕ್ಕೆ ಪ್ರಯತ್ನಿಸಬೇಕು ನಮ್ಮಲ್ಲಿಯ ವ್ಯತ್ಯಾಸಗಳನ್ನು ಸರಿಪಡಿಸಿಕೊಂಡು ನಾವು ನಮ್ಮವರು ಎಂಬ ಭಾವನೆಯಲ್ಲಿ ಭವಿಷ್ಯದ ಅಸ್ತಿತ್ವವನ್ನು ಗಟ್ಟಿಗೊಳಿಸಿಕೊಳ್ಳಬೇಕು
ಕನ್ನಡಪ್ರಭ ವಾರ್ತೆ ಮುಳಬಾಗಿಲುಸಮುದಾಯದಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ಮೂಲಕ ಭೋವಿ ಸಮುದಾಯವಾದ ಮಕ್ಕಳಿಗೆ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವ ಮೂಲಕ ತಾಲ್ಲೂಕು ಭೋವಿ ನೌಕರರ ಸಂಘ ರಚನಾತ್ಮಕ ಕಾರ್ಯಗಳನ್ನು ಹಮ್ಮಿಕೊಂಡಿದೆ ಎಂದು ಅಧ್ಯಕ್ಷ ನಾರಾಯಣಪ್ಪ ಅಭಿಪ್ರಾಯಪಟ್ಟರು. ನಗರದ ಭೋವಿ ಸಮುದಾಯ ಭವನದಲ್ಲಿ ೨೦೨೪-೨೫ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ತರಗತಿಗಳಲ್ಲಿ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಾಲ್ಲೂಕು ಭೋವಿ ನೌಕರರ ಸಂಘ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶೈಕ್ಷಣಿಕವಾಗಿ ಮುಂದುವರಿಯಿರಿ
ಸಮುದಾಯ ಶೈಕ್ಷಣಿಕವಾಗಿ ಮುಂಚೂಣಿಗೆ ಬಂದಾಗ ಮಾತ್ರ ಸಾಮಾಜಿಕ ನೆಲೆಗಟ್ಟಿನಲ್ಲಿ ತಳ ಸಮುದಾಯಗಳು ಭದ್ರತೆ ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಅದರೊಂದಿಗೆ ರಾಜಕೀಯ ಸ್ಥಾನಮಾನಕ್ಕೆ ಪ್ರಯತ್ನಿಸಬೇಕು ನಮ್ಮಲ್ಲಿಯ ವ್ಯತ್ಯಾಸಗಳನ್ನು ಸರಿಪಡಿಸಿಕೊಂಡು ನಾವು ನಮ್ಮವರು ಎಂಬ ಭಾವನೆಯಲ್ಲಿ ಭವಿಷ್ಯದ ಅಸ್ತಿತ್ವವನ್ನು ಗಟ್ಟಿಗೊಳಿಸಿಕೊಳ್ಳಬೇಕು ಎಂದರು. 50 ವಿದ್ಯಾರ್ಥಿಗಳಿಗೆ ಗೌರವಸಮಾರಂಭದಲ್ಲಿ ಪಿಯುಸಿ ವಿಭಾಗದಲ್ಲಿ ೫೦೦ಕ್ಕೂ ಹೆಚ್ಚು ಅಂಕ ಗಳಿಸಿದ ೩೨ ಮಕ್ಕಳನ್ನು ಎಸ್ ಎಲ್ ಸಿ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ೫೦ ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಗೌರವಿಸಿ ಪ್ರೋತ್ಸಾಹಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಂಶುಪಾಲರು ಹಾಗೂ ಸಂಘದ ಪೋಷಕ ನಾರಾಯಣಪ್ಪ, ಪ್ರಾಧ್ಯಾಪಕ ಶಂಕರಪ್ಪ, ಹಿರಿಯ ಅಭಿಯಂತರ ಗೋವಿಂದಪ್ಪ ಕದ್ರಿಪುರ ರಾಜಪ್ಪ ಉತ್ತರ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ವೆಂಕಟೇಶ್ ಸಮುದಾಯ ಭವನ ಅಧ್ಯಕ್ಷ ಹನುಮಪ್ಪ ಯುವ ವೇದಿಕೆ ಅಧ್ಯಕ್ಷ ಶ್ರೀನಾಥ್ ಎಸ್ ಎಫ್ ಐ ರಾಜ್ಯಾಧ್ಯಕ್ಷ ಅಂಬ್ಲಿಕಲ್ ಶಿವಪ್ಪ ನಿವೃತ್ತ ಎ ಇ ಇ ನರಸಿಂಹರಾಜು ಮತ್ತಿತರರಿದ್ದರು.