ಶಿಕ್ಷಣ ಕೇವಲ ಸರ್ಕಾರಿ ಉದ್ಯೋಗಕ್ಕಷ್ಟೇ ಅಲ್ಲ, ಸಂಸ್ಕಾರಕ್ಕೆಂದು ಭಾವಿಸಿ : ಶಾಸಕ ತಮ್ಮಯ್ಯ

| Published : Oct 21 2025, 01:00 AM IST

ಶಿಕ್ಷಣ ಕೇವಲ ಸರ್ಕಾರಿ ಉದ್ಯೋಗಕ್ಕಷ್ಟೇ ಅಲ್ಲ, ಸಂಸ್ಕಾರಕ್ಕೆಂದು ಭಾವಿಸಿ : ಶಾಸಕ ತಮ್ಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರುಶೋಷಿತರು, ಬಡ ವರ್ಗದ ಜನರನ್ನು ಸಮಾಜದ ಮುನ್ನಲೆಗೆ ತರಬೇಕೆಂಬ ಉದ್ದೇಶದೊಂದಿಗೆ ಡಾ. ಬಿ.ಆರ್‌. ಅಂಬೇಡ್ಕರ್‌ ಅವರು ನೀಡಿದ ಸಂವಿಧಾನದ ಆಶಯದಂತೆ ಅವರ ಕನಸು ನನಸು ಮಾಡಲು ಶಿಕ್ಷಣ ಅತಿ ಮುಖ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

- ಡಾ. ಬಿ.ಆರ್‌. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣದ ಕಾಮಗಾರಿಗೆ ಶಂಕುಸ್ಥಾಪನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಶೋಷಿತರು, ಬಡ ವರ್ಗದ ಜನರನ್ನು ಸಮಾಜದ ಮುನ್ನಲೆಗೆ ತರಬೇಕೆಂಬ ಉದ್ದೇಶದೊಂದಿಗೆ ಡಾ. ಬಿ.ಆರ್‌. ಅಂಬೇಡ್ಕರ್‌ ಅವರು ನೀಡಿದ ಸಂವಿಧಾನದ ಆಶಯದಂತೆ ಅವರ ಕನಸು ನನಸು ಮಾಡಲು ಶಿಕ್ಷಣ ಅತಿ ಮುಖ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ನಗರದ ಪೈ ಕಲ್ಯಾಣ ಮಂಟಪ ಹಿಂಭಾಗದ ಬಸವೇಶ್ವರ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಸುಮಾರು ₹7 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಡಾ. ಬಿ.ಆರ್‌. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಶಿಕ್ಷಣ ಕೇವಲ ಸರ್ಕಾರಿ ಉದ್ಯೋಗಕ್ಕೆಎಂದು ಭಾವಿಸದೆ ಬದುಕಿನ ಸಂಸ್ಕಾರ ಕಲಿಯಲು ಎಂದು ಭಾವಿಸುವ ಮೂಲಕ ಶಿಕ್ಷಣ ಪಡೆಯಿರಿ ಎಂದು ಸಲಹೆ ನೀಡಿದರು.ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ ₹7 ಕೋಟಿ ಅನುದಾನವನ್ನು ವಿದ್ಯಾರ್ಥಿನಿಲಯಕ್ಕೆ ಮಂಜೂರು ಮಾಡಿರು ವುದನ್ನು ಅಭಿನಂದಿಸಿದ ಶಾಸಕರು, ಸರ್ಕಾರಿ ಕಟ್ಟಡ ಎಂಬ ತಾತ್ಸಾರ ಮನೋಭಾವ ಬಿಟ್ಟು ಸ್ವಂತ ಮನೆಯಂತೆ ಗುಣ ಮಟ್ಟದ ಕಟ್ಟಡ ಕಾಮಗಾರಿ ನಡೆಸಬೇಕೆಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.ಈ ನೂತನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರಿಗೆ ಅತ್ಯಾಧುನಿಕ ರೀತಿ ಸೌಲಭ್ಯಗಳು ದೊರೆಯಬೇಕು. ಜೊತೆಗೆ ಗುಣಮಟ್ಟದ ಕಾಮಗಾರಿ ನಡೆಸಬೇಕೆಂದು ಹೇಳಿದ ಅವರು, ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಆಸರೆಯಾಗಿದೆ. ಈ ನಿಟ್ಟಿನಲ್ಲಿ ಅಭಿವೃದ್ಧಿಗೂ ಅನುದಾನ ನೀಡಿದೆ ಎಂದರು.ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ವಿದ್ಯೆಯಿಂದ ಯಾರೂ ವಂಚಿತರಾಗಬಾರದು. ಎಲ್ಲರಿಗೂ ಶಿಕ್ಷಣ ಪಡೆಯುವ ಮುಕ್ತ ಅವಕಾಶ ಇರಬೇಕು ಎಂಬ ಹಿನ್ನೆಲೆಯಲ್ಲಿ ಸರ್ಕಾರ ವಸತಿ ನಿಲಯ ನಿರ್ಮಾಣ ಮಾಡಿ ಅವಕಾಶ ಕಲ್ಪಿಸಿದೆ ಎಂದು ಹೇಳಿದರು.

ಜ್ಞಾನಾರ್ಜನೆ ಮಾಡಿಕೊಂಡು ಸ್ವಾಭಿಮಾನಿಗಳಾಗಿ ಸಮಾಜಮುಖಿಗಳಾಗಿ ರಾಷ್ಟ್ರದ ಹಿತಕ್ಕೆ ಬದುಕುವ ಮೂಲಕ ಸಮಾಜದ ಋಣ ತೀರಿಸುವ ಕೆಲಸ ಮಾಡಿ ಎಂದು ಕರೆ ನೀಡಿದರು.ಈ ವಸತಿ ನಿಲಯಕ್ಕೆ ಸಿಡಿಎ ನಿವೇಶನ ಮಂಜೂರು ಮಾಡಿದ್ದು, ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಈಗಿನ ಸಂಸದರಾಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ಸಮಾಜ ಕಲ್ಯಾಣ ಸಚಿವರಾಗಿದ್ದು ಮಂಜೂರು ಮಾಡಿದ್ದರು. ಈಗಿನ ರಾಜ್ಯ ಸರ್ಕಾರ ಲೋಕೋಪ ಯೋಗಿ ಇಲಾಖೆ ಮೂಲಕ ₹7 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದರು.ಕಾರ್ಯಕ್ರಮದಲ್ಲಿ ನಗರಸಭಾಧ್ಯಕ್ಷೆ ಶೀಲಾ ದಿನೇಶ್, ಉಪಾಧ್ಯಕ್ಷೆ ಲಲಿತಾ ನಾಯ್ಕ್, ಸದಸ್ಯ ಅರುಣ್‌ಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ, ತಾಲೂಕು ಅಧ್ಯಕ್ಷ ಮಲ್ಲೇಶ್‌ ಸ್ವಾಮಿ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಾಲತಿ ಸ್ವಾಗತಿಸಿ, ಸಹಾಯಕ ನಿರ್ದೇಶಕ ಎಚ್.ಡಿ. ರೇವಣ್ಣ ವಂದಿಸಿದರು. 19 ಕೆಸಿಕೆಎಂ 2ಚಿಕ್ಕಮಗಳೂರಿನ ಪೈ ಕಲ್ಯಾಣ ಮಂಟಪದ ಹಿಂಭಾಗದ ಬಸವೇಶ್ವರ ಬಡಾವಣೆಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಡಾ. ಬಿ.ಆರ್‌. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಕಟ್ಟಡ ನಿರ್ಮಾಣದ ಕಾಮಗಾರಿಗೆ ಶಾಸಕ ಎಚ್‌.ಡಿ. ತಮ್ಮಯ್ಯ ಗುದ್ದಲಿಪೂಜೆ ನೆರವೇರಿಸಿದರು.