ಸದೃಢ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ: ಯಶ್ಪಾಲ್ ಸುವರ್ಣ

| Published : May 30 2024, 12:48 AM IST

ಸದೃಢ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ: ಯಶ್ಪಾಲ್ ಸುವರ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಪುಷ್ಪಾನಂದ ಫೌಂಡೇಶನ್ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 20 ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಜಿಲ್ಲೆಯು ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಶಿಕ್ಷಣ ವ್ಯವಸ್ಥೆಯಲ್ಲಿ ಉಡುಪಿಯ ಕೀರ್ತಿಯನ್ನು ಪಸರಿಸುವುದಕ್ಕೆ ಜಿಲ್ಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರ ಹಾಗೂ ಶಿಕ್ಷಣ ಇಲಾಖೆಯ ಪರಿಶ್ರಮವೇ ಕಾರಣ ಎಂದು ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಶ್ಲಾಘಿಸಿದ್ದಾರೆ.

ಅವರು ಪುಷ್ಪಾನಂದ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 20 ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದ ಭವಿಷ್ಯ ಬರೆಯಲಿರುವ ವಿದ್ಯಾವಂತ ಯುವ ಜನಾಂಗದಿಂದ ಮಾತ್ರ ಸದೃಢ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಲಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ ಸಾಧನೆ ಇದೇ ರೀತಿ ನಿರಂತರವಾಗಿ ಮುಂದುವರಿದು ಇತರರಿಗೂ ಮಾದರಿಯಾಗಲಿ ಎಂದವರು ಹಾರೈಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ವಿಶ್ವನಾಥ ಬಾಯರಿ, ನಿವೃತ್ತ ಪ್ರಾಂಶುಪಾಲರಾದ ಹಂಸಾವತಿ ಹಾಗೂ ತಾರಾದೇವಿ ಹಾಗೂ ಸಮಾಜ ಸೇವಕಿ ನಿರುಪಮಾ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

ಪುಷ್ಪಾನಂದ ಫೌಂಡೇಶನ್ ವತಿಯಿಂದ ಶೇ.100 ಫಲಿತಾಂಶ ಪಡೆದ ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನಾ ಪತ್ರದೊಂದಿಗೆ ತಲಾ 15 ಸಾವಿರ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಶಾಲೆಯ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.