ಉಡುಪಿ: ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ವಿದ್ಯಾವಂತ ಯುವಜನತೆಯ ಕೊಡುಗೆ ಅಪಾರವಾಗಿದ್ದು, ಸಧೃಡ ಭಾರತ ನಿರ್ಮಾಣಕ್ಕೆ ಗುಣಮಟ್ಟದ ಶಿಕ್ಷಣವೇ ಅಡಿಪಾಯ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.ಸೋಮವಾರ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಅಂಗವಾಗಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ ಕಾರ್ಯಕ್ರಮಕ್ಕೆ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಾಲನೆ ನೀಡಿ ಮಾತನಾಡಿದರು.ಉಡುಪಿ ಜಿಲ್ಲೆಯ ಶೈಕ್ಷಣಿಕ ಸಾಧನೆಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಹಾಗೂ ಖಾಸಗಿ ದಾನಿಗಳ ಕೊಡುಗೆ ಅಪಾರವಾಗಿದ್ದು, ಮುಂದಿನ ದಿನಗಳಲ್ಲೂ ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಅಗ್ರ ಸ್ಥಾನವನ್ನು ಅಲಂಕರಿಸಲಿ ಎಂದು ಅವರು ಹಾರೈಸಿದರು.ಶಾಲಾ ಪ್ರಾರಂಭೋತ್ಸವ ಅಂಗವಾಗಿ ಸರ್ಕಾರ ಹಿರಿಯ ಪ್ರಾಥಮಿಕ ಶಾಲೆ ಕಡೆಕಾರು, ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆ, ಗಾಂಧಿ ಶತಾಬ್ಧಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಪೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಿ, ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸೇವಿಸಿದರು.
ಶಾಲಾ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು, ಪೋಷಕರು, ಸ್ಥಳೀಯ ಶಿಕ್ಷಣ ಪ್ರೇಮಿಗಳು ಉಪಸ್ಥಿತರಿದ್ದರು.ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ: ಯಶ್‌ಪಾಲ್ ಸುವರ್ಣ
ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ವಿದ್ಯಾವಂತ ಯುವಜನತೆಯ ಕೊಡುಗೆ ಅಪಾರವಾಗಿದ್ದು, ಸಧೃಡ ಭಾರತ ನಿರ್ಮಾಣಕ್ಕೆ ಗುಣಮಟ್ಟದ ಶಿಕ್ಷಣವೇ ಅಡಿಪಾಯ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.