ಶಿಕ್ಷಣವು ವ್ಯಕ್ತಿಯ ಬದುಕನ್ನು ಕಟ್ಟಿಕೊಳ್ಳಲು ರುವಾರಿ

| Published : Feb 09 2025, 01:16 AM IST

ಶಿಕ್ಷಣವು ವ್ಯಕ್ತಿಯ ಬದುಕನ್ನು ಕಟ್ಟಿಕೊಳ್ಳಲು ರುವಾರಿ
Share this Article
  • FB
  • TW
  • Linkdin
  • Email

ಸಾರಾಂಶ

. ಪದವಿಪೂರ್ವ ಶಿಕ್ಷಣ ವಿದ್ಯಾರ್ಥಿಗಳಿಗೆ ಮಹತ್ವದ ತಿರುವಾಗಿದ್ದು, ನಿಮ್ಮ ಸಾಮರ್ಥ್ಯ, ಸಾಧನೆಗಳು ಮುಂದಿನ ಭವಿಷ್ಯವನ್ನು ನಿರ್ಮಿಸುವ ಬುನಾದಿಗಳಾಗಿವೆ. ಸರ್ಕಾರಿ ಪಪೂ ಕಾಲೇಜಿಗೆ ಅವಶ್ಯಕತೆ ಇರುವ ಎಲ್ಲ ಸೌಲಭ್ಯಗಳನ್ನು ನಾನು ಒದಗಿಸುತ್ತೇನೆ. ನೀವು ಅದರ ಸದುಪಯೋಗಪಡಿಸಿಕೊಂಡು ಬದುಕನ್ನು ಕಟ್ಟಿಕೊಳ್ಳಿ, ಆಗ ನಮ್ಮ ಶ್ರಮ ಸಾರ್ಥಕವಾಗುತ್ತದೆ ಎಂದ ಅವರು, ಕಾಲೇಜಿನ ಮೂಲಭೂತ ಸೌಲಭ್ಯಗಳಿಗೆ ಶಾಸಕರ ನಿಧಿಯಿಂದ 10 ಲಕ್ಷ ರು.ಗಳನ್ನು ಕೊಡುವುದಾಗಿ ಭರವಸೆ ನೀಡಿದರು

ಕನ್ನಡಪ್ರಭ ವಾರ್ತೆ ಶಿರಾ

ಶಿಕ್ಷಣವು ಮಾನವನ ವ್ಯಕ್ತಿತ್ವ ವಿಕಸನಕ್ಕೆ ರೂವಾರಿ. ಶಿಕ್ಷಣವೇ ಮನುಷ್ಯನನ್ನು ವೈಜ್ಞಾನಿಕವಾಗಿ ಚಿಂತಿಸಲು ತನ್ನ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಶಿಕ್ಷಣದಲ್ಲಿ ಸಂಸ್ಕಾರ ಮತ್ತು ಮೌಲ್ಯಗಳು ಬಹುಮುಖ್ಯ ಅಂಶಗಳು, ಇದನ್ನು ವಿದ್ಯಾರ್ಥಿಗಳು ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಧನೆ ಮಾಡಿ ಎಂದು ರಾಜ್ಯ ಸರಕಾರದ ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.

ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ 2024- 25ನೇ ಸಾಲಿನ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪದವಿಪೂರ್ವ ಶಿಕ್ಷಣ ವಿದ್ಯಾರ್ಥಿಗಳಿಗೆ ಮಹತ್ವದ ತಿರುವಾಗಿದ್ದು, ನಿಮ್ಮ ಸಾಮರ್ಥ್ಯ, ಸಾಧನೆಗಳು ಮುಂದಿನ ಭವಿಷ್ಯವನ್ನು ನಿರ್ಮಿಸುವ ಬುನಾದಿಗಳಾಗಿವೆ. ಸರ್ಕಾರಿ ಪಪೂ ಕಾಲೇಜಿಗೆ ಅವಶ್ಯಕತೆ ಇರುವ ಎಲ್ಲ ಸೌಲಭ್ಯಗಳನ್ನು ನಾನು ಒದಗಿಸುತ್ತೇನೆ. ನೀವು ಅದರ ಸದುಪಯೋಗಪಡಿಸಿಕೊಂಡು ಬದುಕನ್ನು ಕಟ್ಟಿಕೊಳ್ಳಿ, ಆಗ ನಮ್ಮ ಶ್ರಮ ಸಾರ್ಥಕವಾಗುತ್ತದೆ ಎಂದ ಅವರು, ಕಾಲೇಜಿನ ಮೂಲಭೂತ ಸೌಲಭ್ಯಗಳಿಗೆ ಶಾಸಕರ ನಿಧಿಯಿಂದ 10 ಲಕ್ಷ ರು.ಗಳನ್ನು ಕೊಡುವುದಾಗಿ ಭರವಸೆ ನೀಡಿದರು. ಈಗಾಗಲೇ ಹೆಚ್ಚುವರಿ 5 ಕೋಟಿ ರು, ಅನುದಾನವನ್ನು ಸರಕಾರದಿಂದ ನೀಡಲಾಗಿದೆ. ಜೊತೆಗೆ ಸಿ.ಎಸ್.ಆರ್. ನಿಧಿಯಿಂದ ಕಾಂತರಾಜ್ ಅವರ ಸಹಯೋಗದೊಂದಿಗೆ ಸ್ಮಾರ್ಟ್ ಕ್ಲಾಸ್ ಆರಂಭವಾಗಿದ್ದು, ಕಾಲೇಜಿಗೆ 40 ಕಂಪ್ಯೂಟರ್‌ಗಳನ್ನು ನೀಡಿದ್ದಾರೆ. ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಾ. ಪಿ.ಎಚ್. ಮಹೇಂದ್ರಪ್ಪ ಮಾತನಾಡಿ, ವಿದ್ಯಾರ್ಥಿಗಳು ರಚನಾತ್ಮಕತೆ ಮತ್ತು ಶಿಸ್ತು, ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಕಾರ್ಯ ಸಾಧ್ಯತೆಯ ಆಲೋಚನೆಗಳು ನಿಮ್ಮಲ್ಲಿರಬೇಕು. ಆತ್ಮವಿಶ್ವಾಸದಿಂದ ಮುನ್ನುಗ್ಗಿದರೆ ಏನು ಬೇಕಾದರೂ ಸಾಧಿಸಬಹುದು ಎಂದು ಹೇಳಿದರು.

ಸಮಾರಂಭದಲ್ಲಿ ನಿವೃತ್ತ ಉಪ ನಿರ್ದೇಶಕ ಕಾಂತರಾಜು, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ನಿವೃತ್ತ ಉಪ ನಿರ್ದೇಶಕ ಅಶೋಕ್ ಕುಮಾರ್, ನಿವೃತ್ತ ಪ್ರಾಂಶುಪಾಲರು ಹಾಗೂ ಕಸಾಪ ಅಧ್ಯಕ್ಷ ಬಿ.ಪಿ.ಪಾಂಡುರಂಗಪ್ಪ, ಹಾವನೂರು ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್ ರೆಡ್ಡಿ, ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಯ್ಯ, ಸರ್ಕಾರಿ ಪಪೂ ಕಾಲೇಜಿನ ಪ್ರಾಂಶುಪಾಲರಾದ ಧನಶಂಕರ್, ನಗರಸಭೆಯ ಸದಸ್ಯರಾದ ಎಸ್. ಎಲ್. ರಂಗನಾಥ್, ಹಳೇ ವಿದ್ಯಾರ್ಥಿ ಉದ್ಯಮಿ ಶಿವಕುಮಾರ್, ತುಮಕೂರು ಆಯುಷ್ ಇಲಾಖೆಯ ಡಾ. ನವೀನ್ ಕುಮಾರ್, ವೇದಮೂರ್ತಿ, ಕುಮಾರ್, ಶ್ರೀನಿವಾಸ್ ಸೇರಿ ಹಲವರು ಹಾಜರಿದ್ದರು.