ಸಾರಾಂಶ
ತಾಲೂಕು ಬರ ಪೀಡಿತ ಪ್ರದೇಶವಾಗಿದೆ. ಆದರೂ ಕುಗ್ರಾಮಗಳಿಂದ ವಿದ್ಯಾರ್ಥಿಗಳು ನಗರ ಪ್ರದೇಶಗಳಿಗೆ ಬಂದು ವ್ಯಾಸಂಗ ಮಾಡುತ್ತಿದ್ದು, ಮಕ್ಕಳು ಗುಣಮಟ್ಟದ ಶಿಕ್ಷಣ ಕಲಿತು ಇತರರ ಬಾಳಿಗೂ ಬೆಳಕಾಗಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಕರೆ ನೀಡಿದರು.
ಕನ್ನಡಪ್ರಭ ವಾರ್ತೆ ಮಧುಗಿರಿ
ತಾಲೂಕು ಬರ ಪೀಡಿತ ಪ್ರದೇಶವಾಗಿದೆ. ಆದರೂ ಕುಗ್ರಾಮಗಳಿಂದ ವಿದ್ಯಾರ್ಥಿಗಳು ನಗರ ಪ್ರದೇಶಗಳಿಗೆ ಬಂದು ವ್ಯಾಸಂಗ ಮಾಡುತ್ತಿದ್ದು, ಮಕ್ಕಳು ಗುಣಮಟ್ಟದ ಶಿಕ್ಷಣ ಕಲಿತು ಇತರರ ಬಾಳಿಗೂ ಬೆಳಕಾಗಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಕರೆ ನೀಡಿದರು.ಪಟ್ಟಣದ ಎಂಜಿಎಂ ಬಾಲಿಕಾ ಪ್ರೌಢಶಾಲೆಯಲ್ಲಿ ಶುಕ್ರವಾರ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಪ್ರತಿಭಾ ಸಂಪದ ಮತ್ತು ಕಲಿಕಾ ಪುಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯೆ ಸಾಧಕರ ಸ್ವತ್ತೇ ಹೊರತು ಸೋಮಾರಿಗಳ ಸ್ವತ್ತಲ್ಲ. ಗುಣಮಟ್ಟದ ಶಿಕ್ಷಣ ಕಲಿಯುವುದರಿಂದ ಸಮಾಜದಲ್ಲಿ ಎಲ್ಲವನ್ನೂ ಪಡೆದುಕೊಳ್ಳಲು ಸಾಧ್ಯ.ಸಮಾಜ ವಿದ್ಯಾವಂತರನ್ನು ಗೌರವಿಸಿ ಪ್ರೋತ್ಸಾಹಿಸುತ್ತದೆ. ಅಧಿಕಾರಿಗಳು ಮಕ್ಕಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡುತ್ತಿದ್ದು, ನಮ್ಮ ತಾಲೂಕಿನ ಅಧಿಕಾರಿಗಳು ಇತರೆ ತಾಲೂಕುಗಳಿಗೆ ಮಾದರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.ದೇವರು ಎಲ್ಲರಿಗೂ ಒಳ್ಳೆ ಬುದ್ದಿ ,ಜ್ಞಾನ ನೀಡಿರುತ್ತಾನೆ. ಆ ಮಕ್ಕಳಲ್ಲಿ ಸೂಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೂರ ಸೂಸುವುದೇ ಪ್ರತಿಭಾ ಸಂಪದದ ಮೂಲ ಉದ್ದೇಶ. ಅದನ್ನು ನಮ್ಮ ಶಿಕ್ಷಕರು ಮತ್ತು ಅಧಿಕಾರಿಗಳು ಮುತುವರ್ಜಿ ವಹಿಸಿ ಮಕ್ಕಳ ಕಲಿಕೆಗೆ ಪೂರಕವಾಗಿ ಶ್ರಮಿಸುತ್ತಿದ್ದಾರೆ. ಮಕ್ಕಳು ಸಹ ಕೀಳರಿಮೆ ಬಿಟ್ಟು ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಯಶಸ್ವಿ ಸಾಧಕರಾಗಲು ಸಾಧ್ಯ. ಆ ನಿಟ್ಟಿನಲ್ಲಿ ಮಕ್ಕಳು ಇಷ್ಟು ಪಟ್ಟು ಓದಿ ಮುಂದೆ ಬರಬೇಕು ಎಂದರು.
ಕಾರ್ಯಕ್ರಮದಲ್ಲಿ ಎಸಿ ಗೋಟೂರು ಶಿವಪ್ಪ ,ತಹಸೀಲ್ದಾರ್ ಶಿರಿನ್ ತಾಜ್, ಡಿಡಿಪಿಐ ಗಿರಿಜಾ ,ಬಿಇಒ ಕೆ.ಎನ್.ಹನುಮಂತರಾಯಪ್ಪ, ಶಿಕ್ಷಣಾಧಿಕಾರಿ ಎಂ.ವಿ.ರಾಜಣ್ಣ, ಪುರಸಭೆ ಅಧ್ಯಕ್ಷ ಲಾಲಪೇಟೆ ಮಂಜುನಾಥ್, ಉಪಾಧ್ಯಕ್ಷೆ ಸುಜಾತ , ಮಾಜಿ ಅಧ್ಯಕ್ಷ ಡಿ.ಜಿ.ಶಂಕರನಾರಾಯಣ ಶ್ರೇಷ್ಠಿ, ಕಾರ್ಯದರ್ಶಿ ಎಂ.ಎಸ್.ಶಂಕರನಾರಾಯಣ್, ಸಂದೀಪ್, ತಾಪಂ ಇಒ ಲಕ್ಷ್ಮಣ್, ಮಾಜಿ ಶಾಸಕ ಕಿರಣ್ ಕುಮಾರ್ ಸೇರಿದಂತೆ ಅನೇಕರಿದ್ದರು.