ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವದಲ್ಲಿ ಸಿದ್ದರಾಜು ಸ್ವಾಮೀಜಿ ಅಭಿಮತ
ಕನ್ನಡಪ್ರಭ ವಾರ್ತೆ ಗೌರಿಬಿದನೂರುಮಾನವನ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣವೇ ಅತ್ಯಂತ ಪ್ರಮುಖವಾದ ಶಕ್ತಿಯಾಗಿದೆ ಎಂದು ಶ್ರೀ ಸಿದ್ದರಾಜು ಸ್ವಾಮೀಜಿ ಅಭಿಪ್ರಾಯಪಟ್ಟರು.ನಗರದ ಸುಮಂಗಲಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಂಕಲ್ಪ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವದ ಅಂಗವಾಗಿ 2025 - 26 ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ನಮ್ಮ ಬದುಕಿನಲ್ಲಿ ಜ್ಞಾನ ಮತ್ತು ವಿದ್ಯೆಗಿಂತ ಮಿಗಿಲಾದದ್ದು ಯಾವುದೂ ಇಲ್ಲ. ರಾಮಾಯಣ, ಮಹಾಭಾರತಗಳಂತಹ ಮಹಾಕಾವ್ಯಗಳು ನಮಗೆ ಜೀವನದ ಮೌಲ್ಯಗಳನ್ನು ಕಲಿಸಿಕೊಟ್ಟಿವೆ. ಅಂತಹ ಮಹಾನ್ ಗ್ರಂಥಗಳ ಆಶಯ ಮತ್ತು ಶಕ್ತಿಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಪ್ರಧಾನ ಸಿವಿಲ್ ನ್ಯಾಯಾಧೀಶ ಗಣೇಶ್.ಎನ್ ಮಾತನಾಡಿ, ಪ್ರಶಸ್ತಿ ನಿಮ್ಮ ಪರಿಶ್ರಮದ ಅಂತ್ಯವಲ್ಲ. ಬದಲಿಗೆ, ಇದು ನಿಮ್ಮ ಮೇಲಿರುವ ಜವಾಬ್ದಾರಿಯ ಆರಂಭ ಎಂಬುದನ್ನು ಮರೆಯಬಾರದು. ನಿಮ್ಮ ಸಾಧನೆ ನಿಮ್ಮ ಸುತ್ತಮುತ್ತಲಿನ ಹಾಗೂ ನಿಮ್ಮ ಗ್ರಾಮದ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಬೇಕು ಎಂದು ಹೇಳಿದರು.ಸಂಕಲ್ಪ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕಾಂತರಾಜು ಸಿ. ಮಾತನಾಡಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಹೈಕೋರ್ಟ್ ವಕೀಲ ಪ್ರೊ.ಹರಿರಾಮ್, ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಬೈರೇಗೌಡ, ತಾಲೂಕು ವಕೀಲರ ಸಂಘದ ಅಧ್ಯಕ್ಷ ದಿನೇಶ್ ಕುಮಾರ್, ದಲಿತ ಒಕ್ಕೂಟಗಳ ಅಧ್ಯಕ್ಷ ಎಂ.ಆರ್.ಸತ್ಯನಾರಾಯಣ, ವಕೀಲ ನರಸಿಂಹರೆಡ್ಡಿ, ಬಿ.ಕೆ.ನರಸಿಂಹಮೂರ್ತಿ, ಸನಂದಪ್ಪ, ಹಾಲಗಾನಹಳ್ಳಿ ಗಂಗಾಧರಪ್ಪ, ಕೆ.ವಿ.ಪ್ರಕಾಶ್, ರಾಮಾಂಜಿನಪ್ಪ, ಬಾಲಯ್ಯ, ಲಕ್ಷ್ಮೀನಾರಾಯಣ, ಕದಿರಪ್ಪ ಇದ್ದರು.