ಗುಲಾಮಗಿರಿ ಮೆಟ್ಟಿ ನಿಲ್ಲಲು ಶಿಕ್ಷಣವೇ ಅಸ್ತ್ರ

| Published : May 20 2025, 11:58 PM IST

ಸಾರಾಂಶ

ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, ಪ್ರಪಂಚದಲ್ಲಿ ಅತಿ ಹೆಚ್ಚು ವಿಗ್ರಹಗಳಿರುವ ವ್ಯಕ್ತಿ ಎಂದರೆ ಅದು ಅಂಬೇಡ್ಕರ್. ಅಂಬೇಡ್ಕರ್ ಅಂದರೆ ಒಂದು ಜಗತ್ತು, ಒಂದು ವಿಶ್ವ, ಒಂದು ಸಂಬಂಧ. ನಾವು ಹಿಂದೂ, ಮುಸ್ಲಿಂ, ಕ್ರೈಸ್ತರು, ಬೌದ್ಧರು ಏನೇನೋ ಅಂದುಕೊಳ್ಳುತ್ತೇವೆ ಆದರೆ ನಾವು ಮನುಷ್ಯರು ಅಂತ ಮರೆತೆ ಹೋಗಿದ್ದೇವೆ.

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ಶಿಕ್ಷಣವೊಂದೇ ಗುಲಾಮಗಿರಿ ಮೆಟ್ಟಿ ನಿಲ್ಲುವ ಅಸ್ತ್ರ ಎಂಬುದನ್ನು ಮಹಿಳೆಯರು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಹೇಳಿದರು.

ತಾಲೂಕಿನ ಕುಂದಲಗುರ್ಕಿ ಗ್ರಾಮದಲ್ಲಿ ಸೋಮವಾರ ಡಾ. ಬಿ ಆರ್ ಅಂಬೇಡ್ಕರ್ ಅವರ 134 ನೇ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ 118ನೇ ಜನ್ಮ ದಿನಾಚರಣೆಯನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಮನಸ್ಥಿತಿ ಬದಲಾಗುವವರೆಗೂ ಸಾಮಾಜಿಕ ಪರಿವರ್ತನೆ ಅಸಾಧ್ಯ ಎಂದರು.ಹಕ್ಕುಗಳಿಗಾಗಿ ಸಂಘಟಿತರಾಗಿ

ಮಹಿಳೆಯರು ಸಮಾಜದಲ್ಲಿ ಬೇರೂರಿರುವ ಗುಲಾಮಗಿರಿ, ದಬ್ಬಾಳಿಕೆಯನ್ನು ಮೆಟ್ಟಿ ನಿಲ್ಲಬೇಕು. ನಿಮ್ಮ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಮಾಡಬೇಕು. ಬಡತನದ ನೆಪವೊಡ್ಡಿ ಮಹಿಳೆಯರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬಾರದು ಎಂದರು. ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, ಪ್ರಪಂಚದಲ್ಲಿ ಅತಿ ಹೆಚ್ಚು ವಿಗ್ರಹಗಳಿರುವ ವ್ಯಕ್ತಿ ಎಂದರೆ ಅದು ಅಂಬೇಡ್ಕರ್. ಅಂಬೇಡ್ಕರ್ ಅಂದರೆ ಒಂದು ಜಗತ್ತು, ಒಂದು ವಿಶ್ವ, ಒಂದು ಸಂಬಂಧ. ನಾವು ಹಿಂದೂ, ಮುಸ್ಲಿಂ, ಕ್ರೈಸ್ತರು, ಬೌದ್ಧರು ಏನೇನೋ ಅಂದುಕೊಳ್ಳುತ್ತೇವೆ ಆದರೆ ನಾವು ಮನುಷ್ಯರು ಅಂತ ಮರೆತೆ ಹೋಗಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಬಿಎನ್ ಸ್ವಾಮಿ, ಕಾರ್ಯನಿರ್ವಹಣಾಧಿಕಾರಿ ಆರ್ ಹೇಮಾವತಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜಗದೀಶ್ ಹೆಚ್, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್ , ಆರಕ್ಷಕ ನಿರೀಕ್ಷಕ ಎಂ ಶ್ರೀನಿವಾಸ್, ಗ್ರಾಪಂ ಅಧ್ಯಕ್ಷೆ ಹೇಮಾವತಿ, ಉಪಾಧ್ಯಕ್ಷ ಎಂ ಮುನಿರಾಜು, ಅಭಿವೃದ್ಧಿ ಅಧಿಕಾರಿ ಆದಿಲಕ್ಷ್ಮಿ, ಮೇಲೂರು ಮಂಜುನಾಥ್ ಮತ್ತಿತರರು ಪಾಲ್ಗೊಂಡಿದ್ದರು.