ಶಿಕ್ಷಣಕ್ಕೆ ಪ್ರಾಮುಖ್ಯತೆ ಅಗತ್ಯ: ವಿದ್ಯಾಧರ್ ಶೆಟ್ಟಿ ಕೊಲ್ನಾಡುಗುತ್ತು

| Published : Oct 14 2024, 01:23 AM IST

ಶಿಕ್ಷಣಕ್ಕೆ ಪ್ರಾಮುಖ್ಯತೆ ಅಗತ್ಯ: ವಿದ್ಯಾಧರ್ ಶೆಟ್ಟಿ ಕೊಲ್ನಾಡುಗುತ್ತು
Share this Article
  • FB
  • TW
  • Linkdin
  • Email

ಸಾರಾಂಶ

ಮೂಲ್ಕಿಯ ಶಿವಾಜಿ ಮಂಟಪದ ವೇದಿಕೆಯಲ್ಲಿ ನಡೆಯುತ್ತಿರುವ 26ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭವಾರ್ತೆ ಮೂಲ್ಕಿ

ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಯುವ ಜನಾಂಗದಲ್ಲಿ ಧರ್ಮ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಮಕ್ಕಳು ಮೊಬೈಲ್, ಸಾಮಾಜಿಕ ಜಾಲತಾಣದಿಂದ ದೂರವಿದ್ದು ಧಾರ್ಮಿಕ ಹಾಗೂ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಬೇಕು ಎಂದು ವಿದ್ಯಾಧರ್ ಶೆಟ್ಟಿ ಕೊಲ್ನಾಡುಗುತ್ತು ಹೇಳಿದರು.

ಮೂಲ್ಕಿಯ ಹಿಂದೂ ಯುವ ಸೇನೆ ಹಾಗೂ ಮಹಿಳಾ ಘಟಕದ ವತಿಯಿಂದ ಮೂಲ್ಕಿಯ ಶಿವಾಜಿ ಮಂಟಪದ ವೇದಿಕೆಯಲ್ಲಿ ನಡೆಯುತ್ತಿರುವ 26ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಉದ್ಯಮಿ ಲೋಕಯ್ಯ ಕಟೀಲ್, ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲೆಯ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ರಾಷ್ಟ್ರೀಯ ಬಿಲ್ಲವರ ಮಹಾ ಮಂಡಳಿಯ ಮಹಿಳಾ ಮಂಡಳಿಯ ಅಧ್ಯಕ್ಷೆ ಗೀತಾಂಜಲಿ ಸುವರ್ಣ, ಉದ್ಯಮಿ ಉದಯ ಸುವರ್ಣ ಕಿಲ್ಪಾಡಿ, ಮೂಲ್ಕಿ ಹಿಂದೂ ಯುವ ಸೇನೆಯ ಅಧ್ಯಕ್ಷ ವಿನೋದ್ ಸಾಲ್ಯಾನ್ ಬೆಳ್ಳಾಯರು, ಕೋಶಾಧಿಕಾರಿ ಅಶ್ವತ್ ಕೊಲಕಾಡಿ, ಮಹಿಳಾ ಘಟಕದ ಉಪಾಧ್ಯಕ್ಷೆ ಸುಲತಾ, ಕಾರ್ಯದರ್ಶಿ ಯಶೋಧಾ ದೇವಾಡಿಗ, ಭಾನುಮತಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ವಿನೋದ್ ಸಾಲ್ಯಾನ್ ಸ್ವಾಗತಿಸಿದರು.

ಶಂಕರ್ ಪಡಂಗ ವಂದಿಸಿದರು. ಕಮಲಾಕ್ಷ ಬಡಗುಹಿತ್ಲು ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.