ಸಾರಾಂಶ
ಸ್ವಾಭಿಮಾನ ಮತ್ತು ಸ್ವಾವಲಂಬನೆ ಬೆಳೆಸಿಕೊಳ್ಳಲು ವಿದ್ಯೆ ಪೂರಕವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿದರೆ ಇಂದಲ್ಲ ನಾಳೆ ತಕ್ಕ ಪ್ರತಿಫಲ ಸಿಗುತ್ತದೆ ಎಂದು ನಗರದ ಕೆ.ಕೆ.ಕಾನ್ವೆಂಟ್‌ನ ಕಾರ್ಯದರ್ಶಿ ತನ್ವೀರ್ ಉಲ್ಲಾ ಶರೀಫ್ ತಿಳಿಸಿದರು. ತಿಪಟೂರಿನಲ್ಲಿ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶ್ರೀ ಚೌಡೇಶ್ವರಿ, ಚಾಮುಂಡೇಶ್ವರಿ ಸಂಘದಿಂದ ಉಚಿತ ನೋಟ್‌ಬುಕ್
ಕನ್ನಡಪ್ರಭ ವಾರ್ತೆ ತಿಪಟೂರುಸ್ವಾಭಿಮಾನ ಮತ್ತು ಸ್ವಾವಲಂಬನೆ ಬೆಳೆಸಿಕೊಳ್ಳಲು ವಿದ್ಯೆ ಪೂರಕವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿದರೆ ಇಂದಲ್ಲ ನಾಳೆ ತಕ್ಕ ಪ್ರತಿಫಲ ಸಿಗುತ್ತದೆ ಎಂದು ನಗರದ ಕೆ.ಕೆ.ಕಾನ್ವೆಂಟ್‌ನ ಕಾರ್ಯದರ್ಶಿ ತನ್ವೀರ್ ಉಲ್ಲಾ ಶರೀಫ್ ತಿಳಿಸಿದರು.
ನಗರದ ಕೆ.ಕೆ. ಕಾನ್ವೆಂಟ್ ಆಂಗ್ಲ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳಿಗೆ ಶ್ರೀ ಚೌಡೇಶ್ವರಿ ಮತ್ತು ಚಾಮುಂಡೇಶ್ವರಿ ಪತ್ತಿನ ಸಹಕಾರಿ ಸಂಘದ ವತಿಯಿಂದ ನಡೆದ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಅಭ್ಯಾಸ, ಏಕಾಗ್ರತೆ ಮತ್ತು ಜ್ಞಾನದ ಅರಿವನ್ನು ಹೆಚ್ಚಿಸಿಕೊಂಡಾಗ ವಿದ್ಯೆ ತಾನಾಗಿಯೇ ಒಲಿಯುತ್ತದೆ. ವಿದ್ಯಾರ್ಥಿಗಳು ವಿನಯಶೀಲರಾಗಿ ಸತತ ಪರಿಶ್ರಮದಿಂದ ಅಭ್ಯಾಸ ಮಾಡಿ ಗುರುಗಳ ಮಾರ್ಗದರ್ಶನದಲ್ಲಿ ಉತ್ತಮ ಶಿಕ್ಷಣ ಪಡೆದು ದೇಶ ಮತ್ತು ರಾಜ್ಯ ಕಟ್ಟುವ ಶಿಲ್ಪಿಗಳಾಗಬೇಕು. ಮೊಬೈಲ್, ಟಿ.ವಿ ಗಳಿಂದ ದೂರವಿದ್ದು ಕಲಿಕೆಯೇ ಮುಖ್ಯ ಗುರಿಯಾಗಿಸಿಕೊಳ್ಳಬೇಕು ಎಂದು ಹೇಳಿದರು.
ಪ್ರಾಂಶುಪಾಲ ಜಹೇರಾ ಜಬೀನ್ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾವಂತರಾಗಿ ವಿನಯತೆ, ವಿವೇಕ ಜ್ಞಾನವನ್ನು ಬೆಳಸಿಕೊಂಡು ಸುಸಂಸ್ಕೃತ ಸಮಾಜ ನಿರ್ಮಾಣ ಮಾಡಬೇಕು. ವಿದ್ಯಾರ್ಥಿಗಳಿಗೆ ಎಲ್ಲಾ ರೀತಿ ಸೌಲಭ್ಯ ಕಲ್ಪಿಸಿದ್ದು, ಓದಿನ ಕಡೆ ಹೆಚ್ಚು ಗಮನಹರಿಸುವ ಮೂಲಕ ಉತ್ತಮ ಜ್ಞಾನದ ಜತೆ ಅಂಕಗಳನ್ನು ಪಡೆದು ಸಂಸ್ಥೆಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು ಎಂದು ಹೇಳಿದರು.ಬಳಿಕ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಸೋಮಶೇಖರ್, ಮುಖ್ಯ ಶಿಕ್ಷಕರು, ಎಓ, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.