ಕಾಂಗ್ರೆಸ್ ಸರ್ಕಾರದಿಂದ ಶಿಕ್ಷಣ ವ್ಯವಸ್ಥೆ ಸರ್ವನಾಶ

| Published : May 28 2024, 01:05 AM IST

ಸಾರಾಂಶ

ಕಾಂಗ್ರೆಸ್ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಶಿಕ್ಷಕರಿಗೆ ಕೆಲಸದ ಒತ್ತಡ ಹೆಚ್ಚಾಗಿ ಬಿಪಿ, ಮಧುಮೇಹದಂತಹ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಸೋಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ ಕಾಂಗ್ರೆಸ್ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಶಿಕ್ಷಕರಿಗೆ ಕೆಲಸದ ಒತ್ತಡ ಹೆಚ್ಚಾಗಿ ಬಿಪಿ, ಮಧುಮೇಹದಂತಹ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಸೋಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.

ನಗರದ ಸೇವಾ ಸದನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗಿಲ್ಲ. ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಸರ್ವನಾಶ ಮಾಡುತ್ತಿದೆ. ಶಿಕ್ಷಣ ಸಚಿವರು ಶಿಕ್ಷಣ ಇಲಾಖೆಯನ್ನು ತೊಂದಲದ ಗೂಡಾಗಿಸಿದ್ದಾರೆ ಎಂದರು.

ಸತತ ಮೂರು ಬಾರಿ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯರಾಗಿ 18 ವರ್ಷಗಳ ಕಾಲ ಶಿಕ್ಷಕರ ಧ್ವನಿಯಾಗಿ, ಶಿಕ್ಷಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಡಾ.ವೈ.ಎ.ನಾರಾಯಣ ಸ್ವಾಮಿರನ್ನು ಶಿಕ್ಷಕ ಮತದಾರರು ಮತ್ತೊಮ್ಮೆ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಡಾ.ರಂಗನಾಥ್, ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಸಚಿವ ಕೆ.ಎನ್.ರಾಜಣ್ಣ ತುಮಕೂರು ಭಾಗದ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ರಾಮನಗರ, ಮಾಗಡಿಗೆ ನೀರು ತೆಗೆದುಕೊಂಡು ಹೋಗಲು ಈಗಾಗಲೇ ಇರುವ ಕಾಲುವೆ ಬಿಟ್ಟು ಮತ್ತೊಂದು ಎಕ್ಸ್‌ಪ್ರೆಸ್ ಕೆನಾಲ್‌ ಕಾಮಗಾರಿ ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಹಣ ದುರುಪಯೋಗವಾಗುತ್ತಿದೆ. ಇದರ ಬಗ್ಗೆ ಶೀಘ್ರದಲ್ಲಿಯೇ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.ತಾಲೂಕು ಗ್ರಾಮಾಂತರ ಮಂಡಲ ಅಧ್ಯಕ್ಷ ಚಿಕ್ಕಣ್ಣ, ನಗರ ಮಂಡಲ ಅಧ್ಯಕ್ಷ ಗಿರಿಧರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಚುನಾವಣಾ ಉಸ್ತುವಾರಿ ಕುಮಾರ್ ಮೇಷ್ಟ್ರು, ಮಹಿಳಾ ಮೋರ್ಚಾ ಅಧ್ಯಕ್ಷೆ ಲಲಿತಮ್ಮ, ಉಪಾಧ್ಯಕ್ಷೆ ನಾಗರತ್ನಮ್ಮ, ಗ್ರಾಮ ಪಂಚಾಯತಿ ಸದಸ್ಯ ಡಿ.ಎಚ್.ಗೌಡ, ನಗರ ಪ್ರಧಾನ ಕಾರ್ಯದರ್ಶಿ ಸಂತೆಪೇಟೆ ನಟರಾಜ್ ಮತ್ತು ನರಸಿಂಹರಾಜು, ನಿವೃತ್ತ ಶಿಕ್ಷಕ ಎಚ್.ಜಿ ರಾಮಕೃಷ್ಣಪ್ಪ, ವೈ.ಎನ್ ಬಳಗದ ಸದಸ್ಯ ಆರ್.ಸಿ.ರಾಮಚಂದ್ರಪ್ಪ, ಕೃಷ್ಣಪ್ಪ, ಮುಖಂಡರಾದ ನಾಗರಾಜ್ ಗೌಡ, ಮೂಗನಹಳ್ಳಿ ರಾಮು ಹಾಜರಿದ್ದರು.