ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವ ಶಕ್ತಿಕೇಂದ್ರಗಳು: ಸಂಸದ ಡಾ. ಮಂಜುನಾಥ್

| Published : Feb 20 2025, 12:48 AM IST

ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವ ಶಕ್ತಿಕೇಂದ್ರಗಳು: ಸಂಸದ ಡಾ. ಮಂಜುನಾಥ್
Share this Article
  • FB
  • TW
  • Linkdin
  • Email

ಸಾರಾಂಶ

ಸಂಸ್ಕೃತಿ, ಸಂಸ್ಕಾರ ಬೆಳೆಸುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು, ವಿದ್ಯಾರ್ಥಿಗಳು ಕೂಡ ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತವಾಗದೆ ಶಿಸ್ತು, ಸಂಸ್ಕಾರ ರೂಢಿಸಿಕೊಂಡು ಮಾನವೀಯತೆಯ ಬದುಕನ್ನು ರೂಪಿಸಿಕೊಳ್ಳಬೇಕು. ಚನ್ನಪಟ್ಟಣ ಕೇಂದ್ರೀಯ ವಿದ್ಯಾಲಯದಲ್ಲಿ ಕಾಯಂ ಶಿಕ್ಷಕರ ಕೊರತೆಯನ್ನು ಗಮನಿಸಿದ್ದು, ಸದ್ಯದಲ್ಲೇ ಕೇಂದ್ರ ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಕಾಯಂ ಶಿಕ್ಷಕರನ್ನು ತುರ್ತಾಗಿ ವರ್ಗಾಯಿಸುವಂತೆ ಮನವಿ ಮಾಡುತ್ತೇನೆ.

ಕನ್ನಡಪ್ರಭವಾರ್ತೆ ಚನ್ನಪಟ್ಟಣ

ತಾಲೂಕಿನ ಕೆಂಗಲ್ ಬಳಿ ಇರುವ ಪಿ.ಎಂ.ಶ್ರೀ ಕೇಂದ್ರೀಯ ವಿದ್ಯಾಲಯಕ್ಕೆ ಸಂಸದ ಡಾ. ಸಿ.ಎನ್. ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠ ಮತ್ತು ಮಹತ್ವಪೂರ್ಣವಾದದ್ದು, ಎಲ್ಲಾ ಶಿಕ್ಷಕರು ವೃತ್ತಿ ಬದ್ಧತೆಯನ್ನು ಮೈಗೂಡಿಸಿಕೊಂಡು ಪರಸ್ಪರ ಸಹಕಾರ ಮತ್ತು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದರು.

ಸಂಸ್ಕೃತಿ, ಸಂಸ್ಕಾರ ಬೆಳೆಸುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು, ವಿದ್ಯಾರ್ಥಿಗಳು ಕೂಡ ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತವಾಗದೆ ಶಿಸ್ತು, ಸಂಸ್ಕಾರ ರೂಢಿಸಿಕೊಂಡು ಮಾನವೀಯತೆಯ ಬದುಕನ್ನು ರೂಪಿಸಿಕೊಳ್ಳಬೇಕು. ಚನ್ನಪಟ್ಟಣ ಕೇಂದ್ರೀಯ ವಿದ್ಯಾಲಯದಲ್ಲಿ ಕಾಯಂ ಶಿಕ್ಷಕರ ಕೊರತೆಯನ್ನು ಗಮನಿಸಿದ್ದು, ಸದ್ಯದಲ್ಲೇ ಕೇಂದ್ರ ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಕಾಯಂ ಶಿಕ್ಷಕರನ್ನು ತುರ್ತಾಗಿ ವರ್ಗಾಯಿಸುವಂತೆ ಮನವಿ ಮಾಡುತ್ತೇನೆ ಎಂದರು.

ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಸುಬ್ಬಲಕ್ಷ್ಮೀ ಸಂಸದರನ್ನು ಸ್ವಾಗತಿಸಿದರು.

ಶಾಲೆಯ ಶಿಕ್ಷಕರಾದ ಜಲಜಾ, ಸುಮಾಲಿನಿ, ಶೃಂಗಾ, ಮಾನಸ, ಅಮಿತ್ , ಭವ್ಯ, ಇಂದೂ, ಲತಾ, ಮಹೇಶ್, ಸಂಧ್ಯಾ ,ಮೇಘ, ಪುನೀತ್, ಪ್ರತಿಭಾ, ವಾಣಿ, ಆಕಾಶ್, ಸ್ಮಿತಾ, ಸಂದೀಪ್, ಯಶಸ್ವಿನಿ ಮುಂತಾದವರು ಉಪಸ್ಥಿತರಿದ್ದರು.