ಸಾರಾಂಶ
ಬಡ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶಿಕ್ಷಕರ ಪಾತ್ರ ಮಹತ್ತರವಾಗಿದ್ದು, ಬಡ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಪರಿಶ್ರಮ ಅಗತ್ಯವಾಗಿದೆ.
ಕನ್ನಡಪ್ರಭ ವಾರ್ತೆ ಜೇವರ್ಗಿ
ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶಿಕ್ಷಕರ ಪಾತ್ರ ಮಹತ್ತರವಾಗಿದ್ದು, ಬಡ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಪರಿಶ್ರಮ ಅಗತ್ಯವಾಗಿದೆ ತಾಲೂಕಿನಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಹಿರಿದಾಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಕರ‍್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ಹೇಳಿದರು.ಪಟ್ಟಣದ ಸೇಂಟ್ ಜಾನ್ಸ್ ಹಿರಿಯ ಪ್ರಾಥಮಿಕ ಶಾಲೆಯ 25ನೇ ವರ್ಷದ ವಾರ್ಷಿಕೋತ್ಸವದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಗುಣಮಟ್ಟದ ಶಿಕ್ಷಣದಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಕರು ಹಾಗೂ ಪಾಲಕರ ಪಾತ್ರ ಮಹತ್ತರವಾಗಿದೆ. ಆನಿಟ್ಟಿನಲ್ಲಿ ಸೇಂಟ್ ಜಾನ್ಸ್ ಶಾಲಾ ಸಂಸ್ಥೆಯೂ ಕೂಡಾ ಪರಿಶ್ರಮ ಪಡುತ್ತಿದೆ ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಹೇಳಿದರು.ಕಾರ‍್ಯಕ್ರಮದಲ್ಲಿ ಯನಗುಂಟಿಯ ಮಂಗಲಸಿಂಗ್ ಬೆಂಕಿತಾತ, ತಹಸೀಲ್ದಾರ ಮಲ್ಲಣ್ಣ ಯಲಗೋಡ, ರಾಜಶೇಖರ ಸೀರಿ, ರೇವಣಸಿದ್ದಪ್ಪ ಸಂಕಾಲಿ, ಎಸ್.ಟಿ.ಬಿರೆದಾರ, ಮಧುಗೌಡ ಗುರೆಡ್ಡಿ, ಬಿ.ಆರ್.ಪಾಟೀಲ್, ಭಾರತಿ ಪಾಟೀಲ್, ಪ್ರೀತಿ ಮಾಲಿಪಾಟೀಲ್, ಭಗವಂತರಾಯ ಪಾಟೀಲ್, ಸುರೇಶ ಹಿರೇಮಠ ಸೇರಿದಂತೆ ಶಾಲೆಯ ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.