ಶಿಕ್ಷಣ ಸಂಸ್ಥೆಗಳು ಭಾಷೆ ಅಭಿಮಾನ ಮೂಡಿಸಲಿ

| Published : Nov 03 2025, 03:15 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಭಾಷೆ ಅಭಿಮಾನವನ್ನು ಹುಟ್ಟಿಸುವಲ್ಲಿ ಶಿಕ್ಷಣ ಕ್ಷೇತ್ರದ ಜವಾಬ್ದಾರಿ ಹೆಚ್ಚಿನದಾಗಿದೆ. ಇಂತಹ ಕ್ಷೇತ್ರದಲ್ಲಿ ಹುಟ್ಟಿಕೊಂಡಿರುವ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳೂ ಇಂತಹ ಜವಾಬ್ದಾರಿಯನ್ನು ತೆಗೆದುಕೊಂಡು ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಹಾಗೂ ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವಂತಾಗಬೇಕು ಎಂದು ಪಿಎಸ್‌ಐ ಸಂಜಯ ತಿಪ್ಪರೆಡ್ಡಿ ಹೇಳಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಭಾಷೆ ಅಭಿಮಾನವನ್ನು ಹುಟ್ಟಿಸುವಲ್ಲಿ ಶಿಕ್ಷಣ ಕ್ಷೇತ್ರದ ಜವಾಬ್ದಾರಿ ಹೆಚ್ಚಿನದಾಗಿದೆ. ಇಂತಹ ಕ್ಷೇತ್ರದಲ್ಲಿ ಹುಟ್ಟಿಕೊಂಡಿರುವ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳೂ ಇಂತಹ ಜವಾಬ್ದಾರಿಯನ್ನು ತೆಗೆದುಕೊಂಡು ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಹಾಗೂ ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವಂತಾಗಬೇಕು ಎಂದು ಪಿಎಸ್‌ಐ ಸಂಜಯ ತಿಪ್ಪರೆಡ್ಡಿ ಹೇಳಿದರು.ಪಟ್ಟಣದ ಹಡಲಗೇರಿ ವ್ಯಾಪ್ತಿಯ ಬಿಎಎಸ್ ಇಂಟರನ್ಯಾಶನಲ್ ಶಾಲೆಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಿವಿಧ ಸಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿಂದೆ ರಾಜ್ಯೋತ್ಸವದ ಕಾರ್ಯಕ್ರಮಗಳನ್ನು ರಾಜಧಾನಿಗಳಂತಹ ನಗರಗಳಲ್ಲಿ ನಾವೆಲ್ಲರೂ ನೋಡುತ್ತಿದ್ದೇವು. ಆದರೆ ಅದೇ ರೀತಿಯಲ್ಲಿ ಮುದ್ದೇಬಿಹಾಳ ಪಟ್ಟಣದ ಜನತೆಗೆ ಇಂತಹ ಸುಂದರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡುವಂತೆ ಇಲ್ಲಿನ ಬಿಎಎಸ್ ಶಾಲೆ ಕಾರ್ಯನಿರ್ವಹಿಸುತ್ತಿದೆ. ಶಾಲೆಯು ಆಂಗ್ಲ ಮಾಧ್ಯವಾಗಿದ್ದರೂ ನಮ್ಮ ಕನ್ನಡದ ಬಗ್ಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕೆಲಸ ಹೆಮ್ಮೆ ಎನಿಸುತ್ತಿದೆ ಎಂದರು.ವಲಯ ಅರಣ್ಯಾಧಿಕಾರಿ ಬಸನಗೌಡ ಬಿರಾದಾರ ಮಾತನಾಡಿ,ಇಂತಹ ಶಾಲೆಯನ್ನು ಉನ್ನತಮಟ್ಟಕ್ಕೆ ತೆಗೆದುಕೊಂಡು ಹೋಗುವುದು ಇಲ್ಲಿನ ವಿದ್ಯಾರ್ಥಿಗಳ ಜವಾಬ್ದಾರಿಯೂ ಆಗಿದೆ ಎಂದು ಹೇಳಿದರು.ಸಂಸ್ಥೆಯ ಕಾರ್ಯದರ್ಶಿ ಸುಮಂಗಳಾ ಬಿರಾದಾರ, ಮುಖ್ಯ ಅತಿಥಿಯಾಗಿದ್ದ ಶಿವನಗೌಡ ಬಿರಾದಾರ ಮಾತನಾಡಿದರು. ಪ್ರಾಸ್ತಾವಿಕವಾಗಿ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಮಾತನಾಡಿದರು. ಇದೇ ವೇಳೆಯಲ್ಲಿ ಶಾಲೆಯ ವಿದ್ಯಾರ್ಥಿಗಳಲ್ಲಿ ನೀಲಿ, ಕೆಂಪು, ಹಳದಿ ಹಾಗೂ ಹಸಿರು ಬಣ್ಣಗಳ ನಾಲ್ಕು ತಂಡಗಳನ್ನು ರಚಿಸಿ ಆಯಾ ತಂಡಕ್ಕೆ ಶಾಲೆಯ ಒಂದೊಂದು ಜವಾಬ್ದಾರಿಯನ್ನು ಪ್ರಾಂಶುಪಾಲೆ ರಿಷಿಕಾ ನಾಯಕ ಒದಗಿಸಿದರು.ಶಿಕ್ಷಕರಾದ ವಿನಯ ಪಾಟೀಲ ಸ್ವಾಗತಿಸಿದರು. ಭಾಗ್ಯಶ್ರೀ ಹಾಗೂ ರೇಷ್ಮಾ ನಿರೂಪಿಸಿದರು. ಸಿತಾರಾಮ ಲಮಾಣಿ ವಂದಿಸಿದರು.