ಸಮ್ಮೇಳನದಲ್ಲಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು ಭಾಗವಹಿಸಬೇಕು: ಜಿಲ್ಲಾಧಿಕಾರಿ ಡಾ.ಕುಮಾರ

| Published : Dec 06 2024, 08:58 AM IST

ಸಮ್ಮೇಳನದಲ್ಲಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು ಭಾಗವಹಿಸಬೇಕು: ಜಿಲ್ಲಾಧಿಕಾರಿ ಡಾ.ಕುಮಾರ
Share this Article
  • FB
  • TW
  • Linkdin
  • Email

ಸಾರಾಂಶ

ಮೂರು ದಿನಗಳು ನಡೆಯುವ ಸಮ್ಮೇಳನದಲ್ಲಿ ಸಂಪನ್ಮೂಲ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹೆಸರಾಂತ ವ್ಯಕ್ತಿಗಳಿಂದ ಮೂರು ವೇದಿಕೆಗಳಲ್ಲಿ ಗೋಷ್ಠಗಳು ನಡೆಯಲಿದೆ. ಗೋಷ್ಠಿಗಳು ವಿದ್ಯಾರ್ಥಿಗಳಿಗೆ ಜ್ಞಾನದ ಭಂಡಾರ. ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಭಾಗವಹಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳವೇಕು. ಶುಕ್ರವಾರ ಮತ್ತು ಶನಿವಾರದ ಪಠ್ಯ ಚಟುವಟಿಕೆಗಳನ್ನು ಮುಂದಿನ ರಜೆ ದಿನಗಳೊಂದು ಸರಿದೂಗಿಸಿಕೊಳ್ಳಿ.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ನಗರದ ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಮಾತನಾಡಿ, ಡಿ.20ರಂದು ಬೆಳಗ್ಗೆ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ವಿವಿಧ ಜಿಲ್ಲೆಗಳ ಕಲಾತಂಡಗಳು ಭಾಗವಹಿಸಲಿದೆ. ಇಲ್ಲಿ ಮಕ್ಕಳಿಗೆ ವಿವಿಧ ಕಲಾ ಪ್ರಕಾರಗಳನ್ನು ನೋಡುವ ಅವಕಾಶ ಸಿಗಲಿದೆ ಎಂದರು.ಈ ಅಪರೂಪ ಹಾಗೂ ಅವಿಸ್ಮರಣೀಯ ಅವಕಾಶವನ್ನು ವಿದ್ಯಾರ್ಥಿಗಳು ಕಳೆದುಕೊಳ್ಳಬಾರದು. ವಿದ್ಯಾರ್ಥಿಗಳನ್ನು ಶಿಕ್ಷಕರು ಕರೆತಂದು ಮೆರವಣಿಗೆ ಸಾಗುವ ಎರಡು ಬದಿಯಲ್ಲಿ ಕುಳಿತುಕೊಂಡು ವೀಕ್ಷಿಸಲು ವ್ಯವಸ್ಥೆ ಮಾಡಿಕೊಳ್ಳಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದಕ್ಕೆ ಯೋಜನೆ ರೂಪಿಸಬೇಕು ಎಂದರು.

ಮೂರು ದಿನಗಳು ನಡೆಯುವ ಸಮ್ಮೇಳನದಲ್ಲಿ ಸಂಪನ್ಮೂಲ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹೆಸರಾಂತ ವ್ಯಕ್ತಿಗಳಿಂದ ಮೂರು ವೇದಿಕೆಗಳಲ್ಲಿ ಗೋಷ್ಠಗಳು ನಡೆಯಲಿದೆ. ಗೋಷ್ಠಿಗಳು ವಿದ್ಯಾರ್ಥಿಗಳಿಗೆ ಜ್ಞಾನದ ಭಂಡಾರ. ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಭಾಗವಹಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳವೇಕು. ಶುಕ್ರವಾರ ಮತ್ತು ಶನಿವಾರದ ಪಠ್ಯ ಚಟುವಟಿಕೆಗಳನ್ನು ಮುಂದಿನ ರಜೆ ದಿನಗಳೊಂದು ಸರಿದೂಗಿಸಿಕೊಳ್ಳಿ ಎಂದು ಸೂಚನೆ ನೀಡಿದರು.

ಪ್ರತಿ ದಿನ ರಾತ್ರಿ 7 ಗಂಟೆಯಿಂದ ಸಾಂಸ್ಕೃತಿಕ ‌ಕಾರ್ಯಕ್ರಮಗಳು ಸಹ ಇರುತ್ತದೆ. ಬೆಳಗಿನ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆ ಸಹ ಇರುತ್ತಣೆ. ಸಮ್ಮೇಳನದ ದಿನಗಳಂದು ಮಕ್ಕಳನ್ನು ಸುರಕ್ಷಿತವಾಗಿ ಕರೆತಂದು, ಕರೆದುಕೊಂಡು ಹೋಗುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ವಿದ್ಯಾರ್ಥಿಗಳಿಗೆ ಸಮ್ಮೇಳನದಲ್ಲಿ ಮುಖ್ಯ ಆಕರ್ಷಣೆ ಎಂದರೆ ಪುಸ್ತಕ ಮಳಿಗೆಗಳು. ಮಕ್ಕಳನ್ನು ಕರೆ ತರುವ ಮೊದಲು ಉತ್ತಮ ಪುಸ್ತಕಗಳನ್ನು ಓದುವ ಹವ್ಯಾಸದ ಬಗ್ಗೆ ತಿಳಿಸಬೇಕು. ಮಕ್ಕಳು ಪುಸ್ತಕಗಳನ್ನು ಖರೀದಿಸಿ ಓದುವ ಮನೋಭಾವನೆ ಬೆಳಸಿಕೊಳ್ಳುತ್ತಾರೆ ಎಂದರು.

ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಸಾಹಿತ್ಯ ಸಮ್ಮೇಳನವು ಮುಂದಿನ ಪೀಳಿಗೆಯವರಿಗೂ ಕೂಡ ಮಾರ್ಗದರ್ಶನವಾಗುವ ರೀತಿಯಲ್ಲಿ ಇರಬೇಕು. ಪ್ರತಿಯೊಬ್ಬರೂ ಕೂಡ ನಮ್ಮ ಮನೆಗಳ ಹಬ್ಬವೆನ್ನುವಂತೆ ಭಾಗವಹಿಸಬೇಕು ಎಂದರು.

ಸಮ್ಮೇಳನದ ಸಂಚಾಲಕರಾದ ಡಾ.ಮೀರಾ ಶಿವಲಿಂಗಯ್ಯ ಮಾತನಾಡಿ, ಕನ್ನಡದ ಸೇವೆಗಾಗಿ ಶಿಕ್ಷಕರು ತಮ್ಮ ಒಂದು ದಿನದ ಸಂಬಳ ನೀಡುತ್ತಿರುವುದು ಸಂತಸದ ಸಂಗತಿ. ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದ ಅವರು, ವಿದ್ಯಾರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ. ಪ್ರತಿಯೊಬ್ಬ ವಿದ್ಯಾರ್ಥಿಯು ಭಾಗವಹಿಸಿ ಎಂದರು.

ಸಭೆಯಲ್ಲಿ ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಹೆಚ್.ಶಿವರಾಮೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಚೆಲುವಯ್ಯ ಸೇರಿದಂತೆ ಇನ್ನಿತರ ಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.