ದೊಡ್ಡಬಳ್ಳಾಪುರ: ಕೈಗಾರಿಕೆಗಳ ಸಾಮಾಜಿಕ ಕಾಳಜಿಯ ಮೀಸಲು ನಿಧಿಯಲ್ಲಿ ಶಾಲಾ ಕಾಲೇಜುಗಳ ಕಟ್ಟಡಗಳು ಸೇರಿದಂತೆ ಶೈಕ್ಷಣಿಕವಾಗಿ ನೆರವಾಗುವ ಅನೇಕ ಯೋಜನೆಗಳು ತಾಲೂಕಿನಲ್ಲಿ ಪ್ರಗತಿಯಲ್ಲಿವೆ ಎಂದು ಶಾಸಕ ಧೀರಜ್‌ ಮುನಿರಾಜ್‌ ತಿಳಿಸಿದರು. ನಗರಸಭೆ ವ್ಯಾಪ್ತಿಯ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ ಸಿಎಸ್‌ಆರ್‌ ಅನುದಾನದಡಿ ನಿರ್ಮಿಸಲಾದ ನೂತನ ಅಂಗನವಾಡಿ ಮತ್ತು ಶಾಲಾ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರಕ್ಕೆ ಸಾಮಾಜಿಕ ನೆರವು ಒದಗಿಸುವುದು ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.

ವಾರ್ಡಿನ ನಗರಸಭಾ ಸದಸ್ಯರಾದ ಬಿ.ನಾಗರತ್ನಮ್ಮ ಕೃಷ್ಣಮೂರ್ತಿ, ಅಸ್ಟಿಮೋ ಫೈ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ಮನೋಹರ್ , ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್, ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ, ಶಿಶು ಯೋಜನಾಧಿಕಾರಿ ವಿನೋದ್ ರಾಜ್, ನಗರಸಭೆ ಸದಸ್ಯರಾದ ಬಂತಿ ವೆಂಕಟೇಶ್, ಪದ್ಮನಾಭ, ನವೀನ್, ಸುಧಾರಾಣಿ ಲಕ್ಷ್ಮೀನಾರಾಯಣ್ ಹಾಗೂ ನಿಕಟಪೂರ್ವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಿ, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಎಂ.ಕೆ.ವತ್ಸಲಾ ಮತ್ತಿತರರು ಉಪಸ್ಥಿತರಿದ್ದರು.

16ಕೆಡಿಬಿಪಿ1-

ದೊಡ್ಡಬಳ್ಳಾಪುರದ ವಿನಾಯನಗರ ವಾರ್ಡಿನಲ್ಲಿ ನೂತನ ಅಂಗನವಾಡಿ ಹಾಗೂ ಶಾಲಾ ಕೊಠಡಿಯಲ್ಲಿ ಶಾಸಕ ಧೀರಜ್‌ ಮುನಿರಾಜ್ ಉದ್ಘಾಟಿಸಿ ಮಾತನಾಡಿದರು.