ಮಂಗಳೂರು: ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೆಪುಣಿ ಅವರ ಸ್ಮರಣಾರ್ಥ ದತ್ತಿನಿಧಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಮೋಹನ್‌ದಾಸ್ ಮರಕಡ ತಿಳಿಸಿದರು.
ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷ ಮಂಗಳೂರಿನ ತ್ರಿಷಾ ಕಾಲೇಜಿನ ಧೃತಿ ಕುಂಜತ್ತಬೈಲ್ ಹಾಗೂ ಕೆನರಾ ಕಾಲೇಜಿನ ಮೇಘಾ ಸಜಿಪ ಅವರಿಗೆ ದತ್ತಿನಿಧಿ ನೀಡಲಾಗಿದೆ. ಈ ಬಾರಿ ಈ ಇಬ್ಬರಿಗೆ ಮುಂದುವರಿಸುವ ಜೊತೆಗೆ ಸಂತ ಅಲೋಷಿಯಸ್ ಕಾಲೇಜಿನ ಬಿಸಿಎ ವಿದ್ಯಾರ್ಥಿನಿ ತ್ರಿಷಾ ಪಚ್ಚನಾಡಿ, ಕೆನರಾ ಕಾಲೇಜಿನ ಶ್ರೀಜಾ ಶೆಟ್ಟಿ, ಬಿ.ಸಿ.ರೋಡಿನ ಶೋಭಿತಾ, ದಡ್ಡಲಕಾಡು ಶಾಲೆಯ ಪ್ರಾಪ್ತಿ, ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನ ಶ್ರೇಯಾ ಮತ್ತು ವಾಮದಪದವು ಸರ್ಕಾರಿ ಪದವಿಪೂರ್ವ ಕಾಲೇಜಿನ ರಶ್ಮಿತ್ ಅವರಿಗೆ ನೀಡಲಾಗುವುದು. ಒಟ್ಟು 1.50 ಲಕ್ಷ ರು. ಮೊತ್ತದ ದತ್ತಿನಿಧಿ ನೀಡಲಾಗುತ್ತಿದೆ ಎಂದರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಉದ್ಯಮಿ ರಾಧಾಕೃಷ್ಣ ಉಮಿಯ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ನರಿಂಗಾನ ಕಂಬಳೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಕಾಜವ, ಉದ್ಯಮಿ ನಿಶಿತ್ ಪೂಜಾರಿ ಕಾವೂರು, ವಾರ್ತಾಧಿಕಾರಿ ಬಿ.ಎ.ಖಾದರ್ ಶಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಭಾಗವಹಿಸಲಿದ್ದಾರೆ ಎಂದರು.ಎಜುಕಾರುಣ್ಯ ಯೋಜನೆಯಲ್ಲಿ ವಾರ್ಷಿಕ ಸುಮಾರು ಎಂಟು ಲಕ್ಷ ರು. ವಿದ್ಯಾರ್ಥಿಗಳ ಕಲಿಕೆಗಾಗಿಯೇ ವ್ಯಯಿಸಲಾಗುತ್ತಿದೆಎಂದರು. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ರಮೇಶ್ ಶೆಟ್ಟಿ ವಿವೇಕನಗರ, ಟ್ರಸ್ಟಿಗಳಾದ ಪ್ರಶಾಂತ್ ಅಬ್ಬೆಟ್ಟು, ದಿನೇಶ್ ನಾಯ್ಕ, ಬಾಳೆಪುಣಿಯವರ ಆಪ್ತರಾದ ನವೀನ್ ಗಾಂಧಿನಗರ, ವಿದ್ಯಾರ್ಥಿಗಳಾದ ಶ್ರೀಶಾ ಶೆಟ್ಟಿ ಅಬ್ಬೆಟ್ಟು, ಮೇಘಾ ಸಜಿಪ ಇದ್ದರು.