5 ಗ್ಯಾರಂಟಿಗಳು ಪರಿಣಾಮಕಾರಿಯಾಗಿ ಜಾರಿ: ಶಾಸಕ ಜಿ.ಎಚ್.ಶ್ರೀನಿವಾಸ್

| Published : Feb 12 2024, 01:35 AM IST

5 ಗ್ಯಾರಂಟಿಗಳು ಪರಿಣಾಮಕಾರಿಯಾಗಿ ಜಾರಿ: ಶಾಸಕ ಜಿ.ಎಚ್.ಶ್ರೀನಿವಾಸ್
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಹೆಚ್ಚು ಪರಿಣಾಮಕಾರಿಯಾಗಿ ಜಾರಿಯಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

- ರಂಗೇನಹಳ್ಳಿ ಗ್ರಾಮದಲ್ಲಿ ಲಕ್ಕವಳ್ಳಿ ಹೋಬಳಿ ಮಟ್ಟದ ಗ್ಯಾರಂಟಿ ಸಮಾವೇಶಕನ್ನಡಪ್ರಭ ವಾರ್ತೆ, ತರೀಕೆರೆ

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಹೆಚ್ಚು ಪರಿಣಾಮಕಾರಿಯಾಗಿ ಜಾರಿಯಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.ಶನಿವಾರ ಜಿಪಂ, ತಾಲೂಕು ಅಡಳಿತ, ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಇಂಧನ ಇಲಾಖೆ, ಕೌಶಲ್ಯಾಭಿವೃದ್ದಿ ಮತ್ತು ಸಾರಿಗೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಸಮೀಪದ ರಂಗೇನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಲಕ್ಕವಳ್ಳಿ ಹೋಬಳಿ ಮಟ್ಟದ ಗ್ಯಾರಂಟಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ158 ಭರವಸೆಗಳನ್ನು ಈ ಹಿಂದೆ ಈಡೇರಿಸಿದ್ದರು. ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ ನಡೆದುಕೊಂಡಿದ್ದೇವೆ, ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಬಸ್ ನಲ್ಲಿ ಒಂದುವರೆ ಕೋಟಿಗೂ ಹೆಚ್ಚು ಜನರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಸಂಚಾರದಿಂದ ಹೆಚ್ಚು ಅಭಿವೃದ್ಧಿಯಾಗಿದೆ. ಯೋಜನೆಗಳಿಂದ ರಾಜ್ಯ ಅಭಿವೃದ್ಧಿಯಾಗಿದೆ, ಗೃಹಲಕ್ಷ್ಮಿ ಯೋಜನೆಯಿಂದ ಫಲಾನುಭವಿಗಳಿಗೆ ಮನೆ ಬಾಗಿಲಿಗೆ ಹಣ ಬರುತ್ತಿದೆ ಎಂದು ಹೇಳಿದರು,.

ಲಕ್ಕವಳ್ಳಿ ಹೋಬಳಿಯಾದ್ಯಂತ 9 ಕೋಟಿ ರು.ಗಳ ಅನುದಾನ ನೀಡಲಾಗಿದೆ, ಭದ್ರಾ ಜಲಾಶಯದಿಂದ 24 X7 ಕುಡಿಯುವ ನೀರು ಸರಬರಾಜು ಮಾಡಲಾಗುವುದು, ತರೀಕೆರೆ ಪಟ್ಟಣದಲ್ಲಿ ಒಳಚರಂಡಿ ಯೋಜನೆ ಜಾರಿಗೊಳಿಸ ಲಾಗುವುದು. ಪಟ್ಟಣದ ರಸ್ತೆಯನ್ನು ಶೀಘ್ರದಲ್ಲೇ ಅಭಿವೃದ್ಧಿ ಪಡಿಸಲಾಗುವುದು, ಖಾತೆ ಬದಲಾವಣೆ, ವಿವಿಧ ವೇತನ ಇತ್ಯಾದಿಗಳಿಗೆ ಸರ್ಕಾರಿ ಕಚೇರಿಗಳಿಗೆ ಆನ್ಲೈನ್ ಮೂಲಕ ಸರಿಯಾದ ದಾಖಲೆ ಕೊಟ್ಟು ಆರ್ಜಿ ಹಾಕಬೇಕು. ಅರ್ಜಿಗಳಿಗೆ 15 ದಿನದೊಳಗೆ ಉತ್ತರದ ಸಂದೇಶ ನಿಮಗೆ ಬರುತ್ತದೆ ಎಂದು ಹೇಳಿದರು.

ತಹಸೀಲ್ದಾರ್ ರಾಜೀವ್ ಮಾತನಾಡಿ ಸರ್ಕಾರದ ನಿರ್ದೇಶನದಂತೆ ಐದು ಗ್ಯಾರಂಟಿ ಯೋಜನೆಗಳ ಸಮಾವೇಶ ಆಯೋಜಿಸಲಾಗುತ್ತಿದೆ, ಪರಿಣಾಮಕಾರಿಯಾಗಿ ಯೋಜನೆಗಳು ತಲುಪಬೇಕು, ಯಾರೂ ವಂಚಿತರಾಗಬಾರದು, ಗ್ಯಾರಂಟಿ ಸಮಾವೇಶದಲ್ಲೂ ಯೋಜನೆಗಳಿಗೆ ಹೆಸರನ್ನು ದಾಖಲಿಸಬಹುದು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಚರಣ್ ರಾಜ್ ಮಾತನಾಡಿ ಇದು ಅದ್ಬುತವಾದ ಯೋಜನೆ . ಯೋಜನೆ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತದೆ, ಗ್ರಾಪಂ, ಪುರಸಭೆ ಇತ್ಯಾದಿ ಸ್ಥಳಗಳಲ್ಲಿ ಗ್ಯಾರಂಟಿ ಸಮಾವೇಶ ಆಯೋಜಿಸಲಾಗಿದ್ದು, ಉಚಿತವಾಗಿ ಅರ್ಜಿಗಳನ್ನು ಹಾಕಬಹುದು, ತಿಂಗಳ 1 ರಿಂದ 20ನೇ ದಿನಾಂಕದೊಳಗೆ ಹಣ ಸಂದಾಯವಾಗುತ್ತಿದೆ, ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಶಿಬಿರ ನಡೆಸಲಾಗುತ್ತಿದೆ, ಶಿಬಿರಗಳ ಮೂಲಕ ಯೋಜನೆಗಳ ಫಲವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದರು.

ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹೇಳಿದರು.ಮುಖಂಡರಾದ ರವಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ತಾಪಂ ಕಾರ್ಯನಿರ್ವಹಣಾಧಿಕಾರಿ ಗಣೇಶ ಸಿ.ಡಿ.ಪಿ.ಒ.ಕಚೇರಿ ಮೇಲ್ವಿಚಾರಕರಾದ ಸಾವಿತ್ರಮ್ಮ, ಸಿ.ಡಿ.ಪಿ.ಒ.ಚರಣ್ ರಾಜ್, ಮೇಲ್ವಿಚಾರಕರಾದ ಸುನೀತ ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು. 10ಕೆಟಿಆರ್.ಕೆ.12ಃ

ತರೀಕೆರೆ ಸಮೀಪದ ರಂಗೇನಹಳ್ಳಿ ಗ್ರಾಮದಲ್ಲಿ ಏರ್ಪಾಡಾಗಿದ್ದ ಲಕ್ಕವಳ್ಳಿ ಹೋಬಳಿ ಮಟ್ಟದ ಗ್ಯಾರಂಟಿ ಸಮಾವೇಶವನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ತಹಸೀಲ್ದಾರ್ ರಾಜೀವ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಗಣೇಶ್ ಮತ್ತಿತರರು ಇದ್ದರು.