ಸಾರಾಂಶ
ಹಾವೇರಿ: ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ ಜ. 30ರಿಂದ ಫೆ.13ರ ವರೆಗೆ ಹಮ್ಮಿಕೊಳ್ಳಲಾದ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ''''''''ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ'''''''' ಕುರಿತು ಸಭೆ ನಡೆಸಿದ ಅವರು, ಕುಷ್ಠರೋಗ ಪ್ರಕರಣಗಳನ್ನು ಬೇಗ ಪತ್ತೆ ಹಚ್ಚಬೇಕು ಹಾಗೂ ಸಾಮಾಜಿಕ ಕಳಂಕ ಮತ್ತು ತಾರತಮ್ಯಗಳನ್ನು ಹೋಗಲಾಡಿಸಲು ಹೆಚ್ಚಿನ ಗಮನಹರಿಸಬೇಕು ಎಂದರು.ಕುಷ್ಠರೋಗದ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಹಾಗೂ ಕುಷ್ಠರೋಗಿಗಳು ಹೆಚ್ಚು ಪತ್ತೆಯಾಗಿರುವ ಪ್ರದೇಶಗಳಲ್ಲಿ ವಿಶೇಷ ಅಧ್ಯಯನ ಕೈಗೊಂಡು, ಕುಷ್ಠರೋಗ ತಡೆಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಚನಬಸಯ್ಯ ವಿರಕ್ತಮಠ ಮಾತನಾಡಿ, ಕುಷ್ಠರೋಗದಿಂದ ಅಂಗವೈಕಲ್ಯ ಉಂಟಾಗುತ್ತದೆ. ಆದರೆ ಸಾರ್ವಜನಿಕ ವಲಯದಲ್ಲಿ ಇದು ಶಾಪ ಎಂಬ ಮೂಢನಂಬಿಕೆ ಇದೆ. ಕುಷ್ಠರೋಗ ಬೇಗ ಪತ್ತೆಯಾಗುವುದಿಲ್ಲ, ತಡವಾಗಿ ಪತ್ತೆಯಾಗುತ್ತದೆ. ಹಾಗಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಹಾಗೂ ಕುಷ್ಠರೋಗಿಗಳ ಪತ್ತಗೆ ಈ ಸ್ಪರ್ಶ ಕುಷ್ಠ್ಠರೋಗ ಅರಿವು ಆಂದೋಲನ ಪಾಕ್ಷಿಕ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ 272 ತಂಡಗಳನ್ನು ರಚಿಸಲಾಗಿದೆ. ಜಿಲ್ಲೆಯಲ್ಲಿ 76 ಕುಷ್ಠರೋಗಿಗಳು ಪತ್ತೆಯಾಗಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟಗಳಲ್ಲಿ ಪರಿಣಾಮಕಾರಿಯಾಗಿ ಕುಷ್ಠ್ಠರೋಗ ಕಾರ್ಯಕ್ರಮವನ್ನು ಅನುಷ್ಠ್ಠಾನಗೊಳಿಸುವುದು ಮತ್ತು ಕುಷ್ಠ್ಠರೋಗ ಪ್ರಕರಣಗಳನ್ನು ಪತ್ತೆಹಚ್ಚಿ ಸಾಮಾಜಿಕ ಕಳಂಕ ಮತ್ತು ತಾರತಮ್ಯಗಳನ್ನು ನಿಭಾಯಿಸುವುದಾಗಿದೆ ಎಂದರು.ಜಿಲ್ಲೆಯ ಸವಣೂರ ಭಾಗದಲ್ಲಿ ಹೆಚ್ಚಾಗಿ ಪತ್ತೆಯಾಗಿದ್ದು, ಜೊತೆಗೆ ಹಾವನೂರ ಹಾಗೂ ಗುತ್ತಲ ಭಾಗದಲ್ಲಿ ಪತ್ತೆಯಾಗಿದೆ. ಈ ಕುರಿತು ಕೇಂದ್ರ ತಂಡ ಅಧ್ಯಯನಕ್ಕೆ ಸೂಚನೆ ನೀಡಿದ್ದು, ವೈದ್ಯಕೀಯ ಕಾಲೇಜು, ಕೇಂದ್ರ ತಂಡದೊAದಿಗೆ ಅಧ್ಯಯನ ಕೈಗೊಳ್ಳಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ಅಭಿಯಾನದ ಕುರಿತು ನಗರದ ಹಾಗೂ ಗ್ರಾಮೀಣ ಪ್ರದೇಶದಲ್ಲಿ, ಶಾಲಾ-ಕಾಲೇಜು, ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಅರಿವು ಮೂಡಿಸಲು ಸ್ಥಳೀಯ ನಗರ ಹಾಗೂ ಗ್ರಾಮೀಣ ಸಂಸ್ಥೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.ಇದೇ ಸಂದರ್ಭದಲ್ಲಿ ಸ್ಪರ್ಶ ಕುಷ್ಠ್ಠರೋಗ ಅರಿವು ಆಂದೋಲನ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಜಗದೀಶ ಪಾಟೀಲ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ವಿವಿಧ ತಾಲೂಕುಗಳ ತಾಲೂಕಾ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
;Resize=(128,128))
;Resize=(128,128))