ಸಾರಾಂಶ
ಮೋದಿ ರೈತರ ಖಾತೆಗೆ ಎರಡು ಸಾವಿರ ಹಣ ಜಮಾ ಮಾಡುತ್ತಿರುವುದರಿಂದ ದೇಶದ ರೈತವರ್ಗ ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗಿದೆ.
ಕೂಡ್ಲಿಗಿ: ಮೋದಿಯವರ ದೂರದೃಷ್ಟಿಯಿಂದ ಮಹಿಳೆಯರು ಉಜ್ವಲ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಮನೆ ಮನೆಗೆ ತಲುಪಿಸಿದ್ದು, ಈ ಯೋಜನೆಗಳನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಲಿದ್ದಾರೆ ಎಂದು ರಾಜ್ಯ ಎಸ್‌ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು ತಿಳಿಸಿದರು.
ಸೋಮವಾರ ಕೂಡ್ಲಿಗಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಆಯೋಜಿಸಿದ್ದ ನಾರಿಶಕ್ತಿ ವಂದನಾ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿ, ಮೋದಿ ರೈತರ ಖಾತೆಗೆ ಎರಡು ಸಾವಿರ ಹಣ ಜಮಾ ಮಾಡುತ್ತಿರುವುದರಿಂದ ದೇಶದ ರೈತವರ್ಗ ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗಿದೆ. ಇಂತಹ ಹತ್ತಾರು ಮಹತ್ವಾಕಾಂಕ್ಷಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿ ತಂದಿದ್ದಾರೆ ಎಂದರು.ಇದೇ ಸಂದರ್ಭದಲ್ಲಿ ತ್ರಿವರ್ಣಧ್ವಜ ಬೈಕ್ ರ್‍ಯಾಲಿಯನ್ನು ಮಾಡಲಾಯಿತು. ಕೂಡ್ಲಿಗಿ ಮಂಡಲ ಬಿಜೆಪಿ ಅಧ್ಯಕ್ಷ ಬಣವಿಕಲ್ಲು ರಾಜು, ಜಿಪಂ ಮಾಜಿ ಅಧ್ಯಕ್ಷೆ ದೀನಾ ಮಂಜುನಾಥ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಚ್.ಎಂ. ಸಚಿನ್ ಕುಮಾರ್, ಮಹಿಳಾ ಮೋರ್ಚಾ ಅಧ್ಯಕ್ಷ ಶಾರದಾ ಕುಂಬಾರ್, ಜಿಲ್ಲಾ ಉಪಾಧ್ಯಕ್ಷೆ ಲಕ್ಷ್ಮಿಕಾಂತರಾಜ್, ಮಂಡಲ ಕಾರ್ಯದರ್ಶಿ ಎಲ್. ಪವಿತ್ರಾ, ಯುವ ಮೋರ್ಚಾ ಅಧ್ಯಕ್ಷ ಅಜೇಯ್, ಎಸ್‌ಟಿ ಮೋರ್ಚಾ ಅಧ್ಯಕ್ಷ ಗುರಿಕಾರ್ ರಾಘು, ಎಸ್ಸಿ ಮೋರ್ಚಾ ಅಧ್ಯಕ್ಷ ರಾಮಚಂದ್ರ, ಮಂಗಾಪುರ ಸಿದ್ದೇಶ್, ಜಿಲ್ಲಾ ಎಸ್ಟಿ ಮೋರ್ಚಾ ಕಾರ್ಯದರ್ಶಿ ಸೂಲದಹಳ್ಳಿ ಮಾರೇಶ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.