ಸಾರಾಂಶ
ಪ್ರತಿಭಟನೆ ಮೂಲಭೂತ ಹಕ್ಕು, ಬೆಲೆ ಏರಿಕೆ ವಿರುದ್ಧ ರಾಜ್ಯ ಹಾಗೂ ಜಿಲ್ಲೆಯ ವಿವಿದೆಢೆಗಳಲ್ಲಿ ಪ್ರತಿಭಟನೆ ನಡೆದಿದೆ. ಆದರೆ ವಿರಾಜಪೇಟೆಯಲ್ಲಿ ಮಾತ್ರ ಪ್ರತಿಕೃತಿ ದಹನ ಮಾಡಲಾಗಿದೆ. ಇದು ಓರ್ವ ವ್ಯಕ್ತಿಯನ್ನು ಗುರಿ ಮಾಡಿಕೊಂಡು ನಡೆದ ಪ್ರತಿಭಟನೆ ಎಂಬುದು ಸ್ಪಷ್ಟವಾಗಿದ್ದು, ಪ್ರಜ್ಞಾವಂತ ನಾಗರಿಕ ಸಮಾಜ ಇಂತಹ ಪ್ರತಿಭಟನೆಯನ್ನು ಧಿಕ್ಕರಿಸಿದೆ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ವಿರಾಜಪೇಟೆಯಲ್ಲಿ ನಡೆದ ಪ್ರತಿಭಟನೆ ಸಂದರ್ಭ ಪ್ರತಿಕೃತಿ ದಹನ ಕೃತ್ಯದ ಬಳಿಕ ನಡೆದ ಬೆಳವಣಿಗೆಯಲ್ಲಿ ಕೃತ್ಯವನ್ನು ಖಂಡಿಸಿ, ತಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆ ಮೂಲಭೂತ ಹಕ್ಕು, ಬೆಲೆ ಏರಿಕೆ ವಿರುದ್ಧ ರಾಜ್ಯ ಹಾಗೂ ಜಿಲ್ಲೆಯ ವಿವಿದೆಢೆಗಳಲ್ಲಿ ಪ್ರತಿಭಟನೆ ನಡೆದಿದೆ. ಆದರೆ ವಿರಾಜಪೇಟೆಯಲ್ಲಿ ಮಾತ್ರ ಪ್ರತಿಕೃತಿ ದಹನ ಮಾಡಲಾಗಿದೆ. ಇದು ಓರ್ವ ವ್ಯಕ್ತಿಯನ್ನು ಗುರಿ ಮಾಡಿಕೊಂಡು ನಡೆದ ಪ್ರತಿಭಟನೆ ಎಂಬುದು ಸ್ಪಷ್ಟವಾಗಿದ್ದು, ಪ್ರಜ್ಞಾವಂತ ನಾಗರಿಕ ಸಮಾಜ ಇಂತಹ ಪ್ರತಿಭಟನೆಯನ್ನು ಧಿಕ್ಕರಿಸಿದೆ. ಇದನ್ನು ಬಿಜೆಪಿ ಮಂದಿ ಅರ್ಥಮಾಡಿಕೊಳ್ಳಬೇಕು ಎಂದರು.
ರಾಜಕೀಯ ದ್ವೇಷ, ಅಧಿಕಾರ ದುರ್ಬಳಕೆ, ರಾಜಕೀಯ ವೈರಿಗಳನ್ನು ತುಳಿಯುವ ಕೆಲಸ ತಾವೆಂದೂ ಮಾಡಿಲ್ಲ, ಮಾಡುವುದು ಇಲ್ಲ. ಪ್ರತಿಕೃತಿ ದಹನದಂತಹ ವಿಚಾರ ಕೊಡವ ಸಂಸ್ಕೃತಿಯಲ್ಲಿ ಸ್ವೀಕಾರಾರ್ಹವಲ್ಲ. ಕೊಡವ ಸಮಾಜಗಳು ಸ್ವತಂತ್ರವಾಗಿ ಈ ಕೃತ್ಯಕ್ಕೆ ವಿರೋಧ ವ್ಯಕ್ತಪಡಿಸಿವೆ. ಅಲ್ಲದೇ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಸೇರಿದಂತೆ ವಿವಿಧ ಸಮುದಾಯಗಳು ಸಹ ಕೃತ್ಯವನ್ನು ಖಂಡಿಸಿದ್ದು, ಪ್ರತಿಕೃತಿ ದಹನ ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿದ್ದು, ಇದರಲ್ಲಿ ತಾವು ಹಸ್ತಕ್ಷೇಪ ಮಾಡಿಲ್ಲ ಎಂದಿದ್ದಾರೆ. ಪ್ರಕರಣ ಮುಕ್ತಾಯಗೊಳಿಸುವಂತೆ ಕೊಡಗು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶಾಸಕ ಪೊನ್ನಣ್ಣ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡರಾದ ಅರುಣ್ ಮಾಚಯ್ಯ, ವೀಣಾ ಅಚ್ಚಯ್ಯ, ಧರ್ಮಜ ಉತ್ತಪ್ಪ, ಟಿ.ಪಿ.ರಮೇಶ್, ಬೇಕಲ್ ರಮಾನಾಥ್ ಇದ್ದರು.