ಸಾರಾಂಶ
ಕಾಂಗ್ರೆಸ್ ಸರ್ಕಾರವು ವಿರೋಧ ಪಕ್ಷದ ಶಾಸಕರಿಗೆ ಸರಿಯಾಗಿ ಅನುದಾನ ನೀಡದಿರುವುದರಿಂದ ತಾಲೂಕಿನ ಅಭಿವೃದ್ಧಿ ನನ್ನ ನಿರೀಕ್ಷೆಗೆ ತಕ್ಕಂತೆ ಆಗುತ್ತಿಲ್ಲ. ಜೆಡಿಎಸ್- ಬಿಜೆಪಿ ಮೈತ್ರಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ.
ಕೆ.ಆರ್.ಪೇಟೆ:
ತಾಲೂಕಿನ ಸಮಗ್ರ ಅಭಿವೃದ್ಧಿಗೆ ನನ್ನ ಶಕ್ತಿ ಮೀರಿ ಶ್ರಮಿಸುತ್ತಿದ್ದೇನೆ ಎಂದು ಶಾಸಕ ಎಚ್.ಟಿ.ಮಂಜು ಹೇಳಿದರು.ತಾಲೂಕಿನ ಕೊಟಗಹಳ್ಳಿ, ರಂಗನಾಥಪುರ, ಆದಿಹಳ್ಳಿ, ಹೆತ್ತಗೋನಹಳ್ಳಿ, ಯಲಾದಹಳ್ಳಿ ಗ್ರಾಮಗಳಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ನಾನು ಈ ಅವಧಿಯಲ್ಲಿ ಶಾಸಕನಾಗಿರುವುದು ನನಗೆ ತೃಪ್ತಿ ತಂದಿಲ್ಲ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದರೂ ಒಂದೇ ಒಂದು ಆಶ್ರಯ ಮನೆ ಮಂಜೂರು ಮಾಡಿಲ್ಲ. ಕುಂಭದ್ರೋಣ ಮಳೆಯಿಂದ ಒಡೆದು ಹೋಗಿರುವ ಹಲವು ಕರೆಗಳ ಅಭಿವೃದ್ಧಿಗೆ ಅನುದಾನ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಕಾಂಗ್ರೆಸ್ ಸರ್ಕಾರವು ವಿರೋಧ ಪಕ್ಷದ ಶಾಸಕರಿಗೆ ಸರಿಯಾಗಿ ಅನುದಾನ ನೀಡದಿರುವುದರಿಂದ ತಾಲೂಕಿನ ಅಭಿವೃದ್ಧಿ ನನ್ನ ನಿರೀಕ್ಷೆಗೆ ತಕ್ಕಂತೆ ಆಗುತ್ತಿಲ್ಲ. ಜೆಡಿಎಸ್- ಬಿಜೆಪಿ ಮೈತ್ರಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ಆಗ ತಾಲೂಕಿನ ಜನತೆ ಮತ್ತೊಮ್ಮೆ ಕ್ಷೇತ್ರದ ಶಾಸಕನಾಗಲು ಅವಕಾಶ ನೀಡಿದರೆ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡಿ ಕ್ಷೇತ್ರದ ಎಲ್ಲಾ ಜನತೆಯ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಟಿಎಪಿಸಿಎಂಎಸ್ ನಿರ್ದೇಶಕರಾದ ಮಲ್ಲೇನಹಳ್ಳಿ ಮೋಹನ್, ನಾಗರಘಟ್ಟ ದೀಲೀಪ್‌ಕುಮಾರ್, ಸಂತೇಬಾಚಹಳ್ಳಿ ಹೋಬಳಿ ಜೆಡಿಎಸ್ ಅಧ್ಯಕ್ಷ ರವಿಕುಮಾರ್, ತಾಪಂ ಮಾಜಿ ಉಪಾಧ್ಯಕ್ಷೆ ರಾಧಾನಾಗೇಶ್, ಹೊಸಹಳ್ಳಿ ಉದಯಕುಮಾರ್, ಸಾರಂಗಿ ಗ್ರಾಪಂ ಅಧ್ಯಕ್ಷೆ ಹೇಮಾ ನವೀನ್‌ಕುಮಾರ್, ಸದಸ್ಯರಾದ ರಮೇಶ್, ನಂಜಪ್ಪ, ಮಂಜೇಗೌಡ, ಶಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್, ಕುಮಾರಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))