ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌ನ ಕೇಂದ್ರ ಸಮಿತಿ ಹಾಗೂ ಕೊಡಗು ಜಿಲ್ಲಾ ಘಟಕ ವತಿಯಿಂದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಭಾನುವಾರ ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌ನ ಕೇಂದ್ರ ಸಮಿತಿ ಹಾಗೂ ಕೊಡಗು ಜಿಲ್ಲಾ ಘಟಕ ವತಿಯಿಂದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಭಾನುವಾರ ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌ನ್ನು ಸರ್ಕಾರಿ ಪ್ರಾತಿನಿಧಿಕ ಸಂಸ್ಥೆಯಾಗಿ ಪರಿಗಣಿಸಿ, ಶಾಶ್ವತ ಅನುದಾನ ಮೀಸಲಿಡಬೇಕು ಎಂದು ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿರುವ ಶಾಸಕ ಪೊನ್ನಣ್ಣ ಅವರನ್ನು ಅವರ ಗೃಹ ಕಚೇರಿಯಲ್ಲಿ ಭಾನುವಾರ ಪರಿಷತ್ತಿನ ಕೇಂದ್ರ

ಸಮಿತಿ ಹಾಗೂ ಕೊಡಗು ಜಿಲ್ಲಾ ಘಟಕ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಮಾತನಾಡಿದ ಪೊನ್ನಣ್ಣ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಸಾಹಿತ್ಯ ಬೆಳವಣಿಗೆಗೆ ಶ್ರಮಿಸುತ್ತಿರುವುದನ್ನು ಸರ್ಕಾರ ಗಮನಿಸಿದೆ. ಕನ್ನಡ ಭಾಷೆ ಮತ್ತು ಸಾಹಿತ್ಯ ಕುರಿತು ವಿಶೇಷ ಕಾಳಜಿ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕರಾತ್ಮಕವಾಗಿ ಸ್ಪಂದಿಸಿ,

ಸೂಕ್ತ ಸಹಕಾರ ನೀಡುವರು. ಸದ್ಯದಲ್ಲೇ ಪರಿಷತ್ತಿನ ನಿಯೋಗವನ್ನು ಮುಖ್ಯಮಂತ್ರಿಯವರ ಭೇಟಿ ಮಾಡಿಸುವ ಭರವಸೆ ನೀಡಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ನ ರಾಜ್ಯ ಕಾರ್ಯಾಧ್ಯಕ್ಷ

ಶ್ರಿ ಮಹಾದೇವ್, ಪ್ರಧಾನ ಕಾರ್ಯದರ್ಶಿ ಹು.ವಿ. ಸಿದ್ದೇಶ್, ಸಂಘಟನಾ ಕಾರ್ಯದರ್ಶಿ ಶ್ರಿ ಸಚಿನ್, ನಿರ್ದೇಶನ ಅಬ್ದುಲ್ ನಝೀರ್, ಕೊಡಗು ಜಿಲ್ಲಾಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ, ಕಾರ್ಯದರ್ಶಿ ಕರಿನೆರವಂಡ ಡ್ಯಾನಿ ಕುಶಾಲಪ್ಪ, ವಿರಾಜಪೇಟೆ ತಾಲೂಕು ಅಧ್ಯಕ್ಷೆ ಮುಕ್ಕಾಟಿರ

ಕಾವೇರಮ್ಮ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಅಪ್ಪುಡ ಕುಶಾಲಪ್ಪ, ಜಿಲ್ಲಾ ನಿರ್ದೇಶಕ ಮಲ್ಲಂಡ

ಶೃತಿಯ, ಮೀತಲತಂಡ ಇಸ್ಮೈಲ್, ವಿರಾಜಪೇಟೆ ಉಪಾಧ್ಯಕ್ಷ ಹರೀಶ್, ಪೊನ್ನಂಪೇಟೆ ತಾಲೂಕು

ಕಾರ್ಯದರ್ಶಿ ನಳಿನಿ ಮತ್ತಿತರರು ಉಪಸ್ಥಿತರಿದ್ದರು.