ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮ

| Published : Apr 30 2025, 12:33 AM IST

ಸಾರಾಂಶ

ಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಶ್ರಮಿಸಲಾಗುತ್ತಿದೆ ಎಂದು ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್ ಹೇಳಿದರು. ಗೃಹಲಕ್ಷ್ಮಿ ಯೋಜನೆಗೆ ಶೇ.99ರಷ್ಟು ಮಹಿಳೆಯರು ಹೆಸರು ನೋಂದಣಿ ಮಾಡಿಸಿದ್ದಾರೆ. ಎರಡು ತಿಂಗಳ ಕಂತು ಶೀಘ್ರದಲ್ಲೇ ಖಾತೆಗೆ ಜಮೆಯಾಗಲಿದೆ. ವಿದ್ಯಾನಿಧಿ ಹಾಗೂ ಗೃಹಜ್ಯೋತಿಯ ವಿಷಯದಲ್ಲಿ ಯಾವುದೇ ತೊಂದರೆ ಎದುರಾಗಿಲ್ಲ ಎಂದು ವಿವರ ನೀಡಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಶ್ರಮಿಸಲಾಗುತ್ತಿದೆ ಎಂದು ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್ ಹೇಳಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸರ್ಕಾರದ ಶಕ್ತಿ ಯೋಜನೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಹೊಸ ನಾಂದಿ ಹಾಡಿದ್ದು, ದುಡಿಯುವ ಕೈಗಳಿಗೆ ನಿಜವಾದ ಶಕ್ತಿ ತುಂಬಿದೆ. ಇದನ್ನು ಮನಗಂಡು ಹಳ್ಳಿಗಳಲ್ಲಿ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು. ಅದೇ ರೀತಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಸದಸ್ಯರಿಗೆ ತಲಾ ಹತ್ತು ಕೇಜಿ ಅಕ್ಕಿ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಪಡಿತರ ವಿತರಕರು ಗ್ರಾಹಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.

ಗೃಹಲಕ್ಷ್ಮಿ ಯೋಜನೆಗೆ ಶೇ.99ರಷ್ಟು ಮಹಿಳೆಯರು ಹೆಸರು ನೋಂದಣಿ ಮಾಡಿಸಿದ್ದಾರೆ. ಎರಡು ತಿಂಗಳ ಕಂತು ಶೀಘ್ರದಲ್ಲೇ ಖಾತೆಗೆ ಜಮೆಯಾಗಲಿದೆ. ವಿದ್ಯಾನಿಧಿ ಹಾಗೂ ಗೃಹಜ್ಯೋತಿಯ ವಿಷಯದಲ್ಲಿ ಯಾವುದೇ ತೊಂದರೆ ಎದುರಾಗಿಲ್ಲ ಎಂದು ವಿವರ ನೀಡಿದರು.