ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನಲ್ಲಿ ಶೈಕ್ಷಣಿಕ ಪ್ರಗತಿ ಸುಧಾರಿಸಲು ನಾವೆಲ್ಲರೂ ಹೆಚ್ಚಿನ ಶ್ರಮವಹಿಸಿ ಕೆಲಸ ಮಾಡಬೇಕಿದೆ ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ ತಿಳಿಸಿದರು.ಪಟ್ಟಣದ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಆಡಳಿತಾತ್ಮಕವಾಗಿ ಕಚೇರಿಯಿಂದ ಆಗಬೇಕಾಗಿರುವ ಎಲ್ಲಾ ಕೆಲಸಗಳನ್ನು ಶಿಕ್ಷಕರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುವುದು ಎಂದರು.
ನಮ್ಮದು ಬೋಧನೆ ಕೆಲಸವಾಗಿದ್ದು, ಆ ವೃತ್ತಿಯಲ್ಲಿ ಪರಿಪೂರ್ಣತೆ ಸಾಧಿಸಲು ಹೆಚ್ಚಿನ ಶ್ರಮವಹಿಸಿ ಕೆಲಸ ಮಾಡಬೇಕು. ಉತ್ತಮ ಶೈಕ್ಷಣಿಕ ಸಾಧನೆ ಮಾಡಬೇಕು ಎಂದರು.ಈ ವೇಳೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಲ್.ಎಸ್.ಧರ್ಮಪ್ಪ, ತಾಲೂಕು ಸಂಘದ ಕಾರ್ಯದರ್ಶಿ ಸಿ.ಟಿ.ಲಕ್ಷ್ಮಣಗೌಡ, ಸಂಘಟನಾ ಕಾರ್ಯದರ್ಶಿ ಜಿ.ಎಸ್.ಮಂಜು, ಶಿಕ್ಷಣ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆರ್.ಕೆ.ರಮೇಶ್, ವಾಣಿ, ಇಂದ್ರಾಣಿ, ಅಂಗವಿಕಲ ನೌಕರರ ಸಂಘದ ಅಧ್ಯಕ್ಷ ಮಹೇಶ್, ತಾಲೂಕು ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮರುವನಹಳ್ಳಿಬಸವರಾಜು, ಶಿಕ್ಷಣ ಸಂಯೋಜಕ ಕೃಷ್ಣನಾಯಕ್, ರವಿಕುಮಾರ್ ಸೇರಿದಂತೆ ಇದ್ದರು.
ಎಂ.ಕೆ.ಮಂಜುನಾಥ್‌ಗೆ ಪಿಎಚ್.ಡಿ ಪದವಿಕೆ.ಆರ್.ಪೇಟೆ: ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಎಂ.ಕೆ.ಮಂಜುನಾಥ ದಾವಣಗೆರೆ ವಿಶ್ವ ವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಹುಚ್ಚೇಗೌಡರ ಮಾರ್ಗದರ್ಶನದಲ್ಲಿ ಅನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ ಟೂರಿಸಂ ಇನ್ ಕರ್ನಾಟಕ- ಎ ಸ್ಟಡಿ ಇನ್ ಮಲ್ನಾಡ್ ರೀಜನ್ (An Economic Analysis of AgroTourism in Karnataka:A Study in Malnad Region) ಎಂಬ ವಿಷಯದಲ್ಲಿ ಸಂಶೋಧನೆ ನಡೆಸಿ ಸಲ್ಲಿಸಿದ ಮಹಾ ಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿಗಾಗಿ ಅಂಗೀಕರಿಸಿದೆ. ಮುಂದಿನ ವಾರ್ಷಿಕ ಘಟಿಕೋತ್ಸವದಲ್ಲಿ ಪಿಎಚ್.ಡಿ ಮಂಜುನಾಥ್ ಅರಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ದಾವಣಗೆರೆ ವಿವಿ ಕುಲಸಚಿವರು(ಪರೀಕ್ಷಾಂಗ) ತಿಳಿಸಿದ್ದಾರೆ.