ಕುಂಚಿಟಿಗರಿಗೆ ಕೇಂದ್ರ ಓಬಿಸಿ ಮೀಸಲು ದೊರಕಿಸಲು ಪ್ರಯತ್ನ

| Published : Mar 13 2025, 12:45 AM IST

ಕುಂಚಿಟಿಗರಿಗೆ ಕೇಂದ್ರ ಓಬಿಸಿ ಮೀಸಲು ದೊರಕಿಸಲು ಪ್ರಯತ್ನ
Share this Article
  • FB
  • TW
  • Linkdin
  • Email

ಸಾರಾಂಶ

ಕುಂಚಿಟಿಗರಿಗೆ ಕೇಂದ್ರ ಓಬಿಸಿ ಮೀಸಲು ದೊರಕಿಸಲು ಸತತ ಪ್ರಯತ್ನ ನಡೆಸುತ್ತಿದ್ದು, ರಾಜ್ಯ ಸರ್ಕಾರದಿಂದ ಅನುಮೋದನೆಗೊಂಡು ಕೇಂದ್ರಕ್ಕೆ ಶಿಫಾರಸ್ಸಾಗಿರುವ ವರದಿಯನ್ನು ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲೂ ಯಶಸ್ವಿಯಾಗಿಸಲು ಪ್ರಮುಖ ಪಾತ್ರವಹಿಸುತ್ತೇನೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ ಕುಂಚಿಟಿಗರಿಗೆ ಕೇಂದ್ರ ಓಬಿಸಿ ಮೀಸಲು ದೊರಕಿಸಲು ಸತತ ಪ್ರಯತ್ನ ನಡೆಸುತ್ತಿದ್ದು, ರಾಜ್ಯ ಸರ್ಕಾರದಿಂದ ಅನುಮೋದನೆಗೊಂಡು ಕೇಂದ್ರಕ್ಕೆ ಶಿಫಾರಸ್ಸಾಗಿರುವ ವರದಿಯನ್ನು ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲೂ ಯಶಸ್ವಿಯಾಗಿಸಲು ಪ್ರಮುಖ ಪಾತ್ರವಹಿಸುತ್ತೇನೆ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.ನಗರದಲ್ಲಿ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಶಾಸಕ ಪ್ರಶಸ್ತಿ ಹಾಗೂ ಗೌರವ ಡಾಕ್ಟರೇಟ್ ಪದವಿ ಪಡೆದ ಹಿನ್ನೆಲೆಯಲ್ಲಿ ಅಖಿಲ ಕುಂಚಿಟಿಗರ ಮಹಾ ಮಂಡಲದ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಕುಂಚಿಟಿಗ ಜಾತಿಯನ್ನು ಕೇಂದ್ರ ಓಬಿಸಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಕೇಂದ್ರದ ಸಚಿವ ಸಂಪುಟದಲ್ಲೂ ಅನುಮೋದನೆ ಪಡೆಯಲು ಸಂಪೂರ್ಣ ಪ್ರಯತ್ನ ಮಾಡುತ್ತೇನೆ ಎಂದರು.ಅಖಿಲ ಕುಂಚಿಟಿಗರ ಮಹಾ ಮಂಡಲದ ರಾಜ್ಯಾಧ್ಯಕ್ಷ ಎಚ್.ರಂಗಹನುಮಯ್ಯ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಕುಂಚಿಟಿಗ ಕುಲಶಾಸ್ತ್ರ ಅಧ್ಯಯನದ ವರದಿಯ ಪ್ರಕಾರ ಕುಂಚಿಟಿಗ ಜಾತಿಯನ್ನು ಓಬಿಸಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು, ಕೇಂದ್ರ ¸ಸರ್ಕಾರಕ್ಕೆ ರವಾನಿಸಿರುವ ವರದಿಯನ್ನು ಸಚಿವ ಸಂಪುಟದಲ್ಲಿ ಅನುಮೋದಿಸಲು ಎಲ್ಲಾ ಮಂತ್ರಿಗಳ ಶಾಸಕರುಗಳ ಸಚಿವರುಗಳ ಸಂಸದರುಗಳ ಮೇಲೆ ಒತ್ತಡ ತಂದು ಅನುಮೋದನೆ ಪಡೆಯಲು ಒತ್ತಡ ಹಾಕಿ. ಕೇಂದ್ರ ಸಕಾರದ ಸಚಿವ ಸಂಪುಟ ಸಭೆಯಲ್ಲಿ ಕುಂಚಿಟಿಗರ ಕೇಂದ್ರ ಓಬಿಸಿ ಮೀಸಲಾತಿಯ ಕಡತವನ್ನು ತರುವಂತೆ ಮಾಡಿ ಕುಂಚಿಟಿಗ ಜಾತಿಯನ್ನು ಭಾರತ ಸರ್ಕಾರದ ಮೀಸಲಾತಿ ಪಟ್ಪಿಯಲ್ಲಿ ಸೇರಿಸಿ ಮಂಜೂರಾತಿಯೊಂದಿಗೆ ಜಾರಿಗೊಳಿಸಿಕೊಡಿಸಬೇಕು ಎಂದು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಎಸ್. ಎನ್ ಗೋವಿಂದೇಗೌಡ, ಉಪಾಧ್ಯಕ್ಷರು ಎಸ್ ಎಲ್ ಗೋವಿಂದರಾಜು, ವೈ.ಎಂ. ಆಂಜಿನಪ್ಪ, ಕಾರ್ಯದರ್ಶಿ ಎಂ.ರಂಗರಾಜು, ಆರ್ ನಾಗರಾಜು, ರಾಮಾಂಜಿನಪ್ಪ, ಸಂಘಟನಾ ಕಾರ್ಯದರ್ಶಿ ಬಸವಂತನಹಳ್ಳಿ ರಾಜು, ಮಹಿಳಾ ವಿಭಾಗ ಅಧ್ಯಕ್ಷೆ ಎಸ್ ಎಚ್ ಜಾನಕಿಗೌಡ, ಎಚ್ ಜಿ ಪುಷ್ಪಲತಾ, ಶಿರಾ ಘಟಕದ ಅಧ್ಯಕ್ಷ ಕೆ.ಎಲ್ ಮುಕುಂದಪ್ಪ, ಉಪಾಧ್ಯಕ್ಷ ಷಣ್ಮುಖಪ್ಪ ಸೇರಿದಂತೆ ಹಲವರು ಹಾಜರಿದ್ದರು.