ಸಾರಾಂಶ
ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ಅಂತಾರಾಷ್ಟ್ರೀಯ ಹಾಗೂ ರಾಜ್ಯಗಳ ಮಟ್ಟದಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡಲು ರಾಜ್ಯ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು.
ಕನ್ನಡಪ್ರಭ ವಾರ್ತೆ, ಹನೂರುಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ಅಂತಾರಾಷ್ಟ್ರೀಯ ಹಾಗೂ ರಾಜ್ಯಗಳ ಮಟ್ಟದಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡಲು ರಾಜ್ಯ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು.ತಾಲೂಕಿನ ಮಂಗಲ ಗ್ರಾಮದಲ್ಲಿ ನೂತನ ನಂದಿನಿ ಉತ್ಪನ್ನಗಳ ಮಳಿಗೆಯನ್ನು ಉದ್ಘಾಟನೆ ಮಾಡಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಹೈನುಗಾರಿಕೆಯನ್ನು ರೈತರು ತಮ್ಮ ಮುಖ್ಯ ಕಸುಬನ್ನಾಗಿ ಹಮ್ಮಿಕೊಂಡಿರುವುದರಿಂದ ತಾಲೂಕಿನಿಂದ 75000 ಲೀಟರ್ ಹಾಲು ಚಾಮುಲ್ ವಿವಿಧ ಉತ್ಪನ್ನಗಳಿಗೆ ತಾಲೂಕಿನಿಂದ ಹೆಚ್ಚು ಹೋಗುತ್ತಿವೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ 5 ಉತ್ಪನ್ನಗಳನ್ನು ಬಿಡುಗಡೆ ಮಾಡಿದ್ದಾರೆ.
ಅಂತಾರಾಜ್ಯ ಮಟ್ಟದಲ್ಲಿ ಹಾಗೂ ಕೇರಳ ಮತ್ತು ತಮಿಳುನಾಡಿನ ವಿವಿಧ ಭಾಗಗಳಲ್ಲಿ ಸಹ ಚಾಮುಲ್ ಉತ್ಪನ್ನಗಳ ಮಾರಾಟ ಮಳಿಗೆಯನ್ನು ಸಹ ತಮಿಳುನಾಡಿನ ಕೊಯಂಬತ್ತೂರು ವಿವಿಧ ಭಾಗಗಳಲ್ಲಿ ತೆರೆಯಲಾಗಿದ್ದು ಇತ್ತೀಚೆಗೆ ಚಾಮುಲ್‌ನಿಂದ ₹3.36 ಕೋಟಿ ಆದಾಯ ಬಂದಿದೆ. ಮುಂದಿನ ದಿನಗಳಲ್ಲಿ ಚಾಮುಲ್ ₹500 ಕೋಟಿ ವಹಿವಾಟು ನಡೆಸುವ ಎಲ್ಲಾ ಲಕ್ಷಣಗಳು ಇರುವುದರಿಂದ ರೈತರಿಗೆ ಹೈನುಗಾರಿಕೆಯನ್ನು ಹೆಚ್ಚಿನ ಒತ್ತು ನೀಡಲು ವಿವಿಧ ಭಾಗಗಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತಿದೆ. ಹೀಗಾಗಿ ರೈತರು ಮತ್ತು ಗ್ರಾಹಕರು ಇದರ ಸದ್ಬಳಕೆಯನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಚಾಮುಲ್ ವ್ಯವಸ್ಥಾಪಕ ನಿರ್ದೇಶಕ ರಾಜಕುಮಾರ್ ಹಾಗೂ ನಿರ್ದೇಶಕರಾದ ಮಹದೇವಪ್ರಸಾದ್ (ಉದ್ದನೂರು), ಮುಖಂಡರುಗಳಾದ ಚಿಕ್ಕ ಸ್ವಾಮಿ, ಮಲ್ಲಿಕಾರ್ಜುನ ಸ್ವಾಮಿ, ಮಹದೇವ, ನಟರಾಜ್ ಗೌಡ,ನಾಗರಾಜ್, ವಿಜಯಕುಮಾರ್ ಇದ್ದರು.