ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ವಿ ಪಿ ಶಶಿಧರ್ ಅವರು ರಾಜಕೀಯದಿಂದ ನಿವೃತ್ತಿ ನಿರ್ಧಾರ ಹಿಂತೆಗೆದುಕೊಳ್ಳುವಂತೆ ಮನವೊಲಿಸಲಾಗುವುದು ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಕುಶಾಲನಗರ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ವಿ ಪಿ ಶಶಿಧರ್ ಅವರು ರಾಜಕೀಯದಿಂದ ನಿವೃತ್ತಿ ನಿರ್ಧಾರ ಹಿಂತೆಗೆದುಕೊಳ್ಳುವಂತೆ ಮನವೊಲಿಸಲಾಗುವುದು ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಅವರು ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲಾ ಪಂಚಾಯಿತಿ ಮೀಸಲಾತಿ ಪ್ರಕಟ ನಂತರ ಶಶಿಧರ್ ಅವರ ನಿರ್ಧಾರದ ಬಗ್ಗೆ ಮಾಹಿತಿ ಲಭಿಸಿದೆ. ಆದರೆ ತನ್ನೊಂದಿಗೆ ಈ ಬಗ್ಗೆ ಮಾತನಾಡಿಲ್ಲ ಎಂದು ತಿಳಿಸಿದ ಶಾಸಕರು ಪಕ್ಷ ಸಂಘಟನೆ ಮತ್ತು ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪ್ರಮುಖ ಪಾತ್ರ ವಹಿಸಿರುವ ಶಶಿಧರ್ ಅವರನ್ನು ಕೈ ಬಿಡುವ ಸಮಯವೇ ಇಲ್ಲ. ಅವರಿಗೆ ಪಕ್ಷದಲ್ಲಿ ಉನ್ನತ ಮಟ್ಟದ ಸ್ಥಾನ ಲಭಿಸಲಿದೆ ಎಂದರು. ಈ ಸಂದರ್ಭ ಪಕ್ಷದ ಪ್ರಮುಖರಾದ ಪ್ರಮೋದ್ ಮುತ್ತಪ್ಪ, ಜೋಸೆಫ್ ವಿಕ್ಟರ್ ಸೋನ್ಸ್ ಮತ್ತು ಕೆಪಿಸಿಸಿ ಸದಸ್ಯರಾದ ಮಂಜುನಾಥ ಗುಂಡುರಾವ್ ಇದ್ದರು.