ಕನ್ನಡಪ್ರಭ ವಾರ್ತೆ ಅಥಣಿ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ಎಲ್ಲ ಶೇರುದಾರ ಸದಸ್ಯರಿಗೆ ಹಾಗೂ ಕಬ್ಬು ಪೂರೈಕೆದಾರರಿಗೆ ಸೆಪ್ಟೆಂಬರ್ 15ರವರೆಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಿಸಲಾಗುತ್ತಿದ್ದು, ಅಗತ್ಯ ದಾಖಲೆಗತಿಗಳನ್ನು ನೀಡಿ ಸಕ್ಕರೆಯನ್ನು ಪಡೆದುಕೊಳ್ಳುವಂತೆ ಕಾರ್ಖಾನೆಯ ಅಧ್ಯಕ್ಷ ಪರಪ್ಪ ಸವದಿ ಹೇಳಿದರು.
ಕನ್ನಡಪ್ರಭ ವಾರ್ತೆ ಅಥಣಿ
ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ಎಲ್ಲ ಶೇರುದಾರ ಸದಸ್ಯರಿಗೆ ಹಾಗೂ ಕಬ್ಬು ಪೂರೈಕೆದಾರರಿಗೆ ಸೆಪ್ಟೆಂಬರ್ 15ರವರೆಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಿಸಲಾಗುತ್ತಿದ್ದು, ಅಗತ್ಯ ದಾಖಲೆಗತಿಗಳನ್ನು ನೀಡಿ ಸಕ್ಕರೆಯನ್ನು ಪಡೆದುಕೊಳ್ಳುವಂತೆ ಕಾರ್ಖಾನೆಯ ಅಧ್ಯಕ್ಷ ಪರಪ್ಪ ಸವದಿ ಹೇಳಿದರು.ಸೋಮವಾರ ಕಾರ್ಖಾನೆಯ ಆವರಣದಲ್ಲಿ ಪ್ರಸಕ್ತ ವರ್ಷದ ಕಬ್ಬು ಪೂರೈಕೆದಾರರಿಗೆ ಮತ್ತು ಶೇರು ಸದಸ್ಯರಿಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯು ರೈತರು ಕಟ್ಟಿ ಬೆಳೆಸಿದ ಕಾರ್ಖಾನೆಯಾಗಿದ್ದು, ಅಥಣಿ ಮತಕ್ಷೇತ್ರದ ಶಾಸಕರು ಹಾಗೂ ಸಹಕಾರ ಸಚಿವರಾಗಿರುವ ಲಕ್ಷ್ಮಣ ಸವದಿ ಹಾಗೂ ಕಾಗವಾಡ ಶಾಸಕರಾದ ರಾಜು ಕಾಗೆ ಮಾರ್ಗದರ್ಶನದಲ್ಲಿ ಸಹಕಾರಿ ತತ್ವದಡಿ ಈ ಕಾರ್ಖಾನೆಯ ಪ್ರಗತಿ ಮತ್ತು ತಾಲೂಕಿನ ಕಬ್ಬು ಬೆಳೆಗಾರರಿಗೆ ತೂಕದಲ್ಲಿ ಯಾವುದೇ ಮೋಸವಾಗದಂತೆ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಲಾಗುತ್ತಿದೆ. ತಾಲೂಕಿನ ರೈತರ ಮತ್ತು ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.
ಆ.17ರಿಂದ ಸೆ.15ರವರೆಗೆ ಪ್ರತಿ ಕಿ.ಲೋಗೆ ₹ 25 ದರದಂತೆ ವಿತರಿಸಲಾಗುವುದು. ಹಾಗೂ ಸಕ್ಕರೆ ಪಡೆಯದೇ ಇದ್ದವರು ಪ್ರತಿ ಕಿಲೋಗೆ ₹ 27 ದಂತೆ ಸೆ.16 ರಿಂದ 30 ರವರೆಗೆ ರಜೆ ದಿನಗಳನ್ನು ಹೊರತುಪಡಿಸಿ ವಿತರಿಸಲಾಗುವುದು. ನಂತರ ಬಂದವರಿಗೆ ಸಕ್ಕರೆ ವಿತರಿಸಲಾಗುವುದಿಲ್ಲ ಎಂದು ತಿಳಿಸಿದರುಈ ಸಂದರ್ಭದಲ್ಲಿ ಕಾರ್ಖಾನೆಯ ಅಧಿಕಾರಿಗಳು, ರೈತ ಮುಖಂಡರು ಉಪಸ್ಥಿತರಿದ್ದರು