ಸಾರಾಂಶ
ಕನ್ನಡಪ್ರಭ ವಾರ್ತೆ ಶಹಾಪುರ
ವಕ್ಫ್ ತಿದ್ದುಪಡೆ ಮಸೂದೆ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ನಗರದ ಹೊಸ ಬಸ್ ನಿಲ್ದಾಣ ಹತ್ತಿರ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳ ಕೂಗಿದರು.ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಜ್ ಕಡಂಬು, ಬಿಜೆಪಿ ಕೇಂದ್ರದಲ್ಲಿ ಆಡಳಿತಕ್ಕೆ ಬಂದ ಮೇಲೆ ರೈತರನ್ನು ಮತ್ತು ಅಲ್ಪಸಂಖ್ಯಾತರನ್ನು ಹತ್ತಿಕ್ಕುವ ಪ್ರಯತ್ನ ನಿರಂತರವಾಗಿ ನಡೆಸುತ್ತಾ ಬಂದಿದೆ. ಸಂವಿಧಾನದ ಪರಿಚ್ಛೇದ 25-28ರ ಅಡಿಯಲ್ಲಿ ಖಾತ್ರಿ ಪಡಿಸಲಾದ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ನಿರಾಕರಿಸುವುದು ಮತ್ತು ಮುಸ್ಲಿಂರನ್ನು 2ನೇ ದರ್ಜೆ ಪ್ರಜೆಗಳೆಂದು ಬದಿಗಿಟ್ಟು ಅವರನ್ನು ಗುಲಾಮರನ್ನಾಗಿ ಮಾಡುವುದು ಉದ್ದೇಶಪೂರ್ವಕ ಯೋಜನೆಯಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಎಸ್‌ಡಿಪಿಐ ರಾಜ್ಯ ಖಜಾಂಚಿ ಸಯ್ಯದ್ ಇಸಾಕ್ ಹುಸೇನ್ ಖಾಲಿದ್ ಹಾಗೂ ಜಿಲ್ಲಾ ಕಾರ್ಯಧ್ಯಕ್ಷ ಇಕ್ಬಾಲ್ ಜಾನಿ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರೈತರು, ಅಲ್ಪಸಂಖ್ಯಾತರನ್ನು ಹತ್ತಿಕ್ಕಲು ಪ್ರಯತ್ನ ಸಾಗಿಸುತ್ತಲೇ ಇದೆ. ಇದೀಗ ಮುಸ್ಲಿಂರನ್ನು ಅಭಿವೃದ್ಧಿಪಡಿಸುವ ನೆಪವೊಡ್ಡಿ ವಕ್ಫ್ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರೈತರು, ಅಲ್ಪಸಂಖ್ಯಾತರನ್ನು ಹತ್ತಿಕ್ಕಲು ಪ್ರಯತ್ನ ಸಾಗಿಸುತ್ತಲೇ ಇದೆ. ಇದೀಗ ಮುಸ್ಲಿಂರನ್ನು ಅಭಿವೃದ್ಧಿಪಡಿಸುವ ನೆಪವೊಡ್ಡಿ ವಕ್ಫ್ ಆಸ್ತಿ ಮೇಲೆ ಕಣ್ಣಿಟ್ಟಿದೆ ಎಂದರು.ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷ ಸಯ್ಯದ್ ಸಯೀದುದ್ದೀನ್ ಖಾದ್ರಿ, ಮುಖಂಡರಾದ ಮುಸ್ತಫಾ ದರ್ಬಾನ್, ಶೇಖ್ ಮುಸ್ತಫಾ ಬಾಂಬೆಸೇಠ್, ಶೇಖ ಖಲೀಮ್ ತವಕಲಿ, ರಫೀಕ್ ಚೌದ್ರಿ, ಲಾಲಹ್ಮದ್ ಖುರೇಶಿ, ಪಾಷಾ ಪಟೇಲ್, ಫುರ್ಖಾನ್ ಖಾಜಿ, ಬಿಲಾಲ್ ಖುರೇಷಿ, ರಶೀದ್ ಫಿರ್ಜಿ ಇತರರಿದ್ದರು. ನಂತರ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರರ ಮುಖಾಂತರ ನವದೆಹಲಿಯ ಜಂಟಿ ಸಂಸದಿಯ ಸಮಿತಿಯ ಅಧ್ಯಕ್ಷರು ಮತ್ತು ಇತರೆ ಸದಸ್ಯರಿಗೆ ಮನವಿ ಪತ್ರ ಸಲ್ಲಿಸಿದರು.